ಸೆ.19ಕ್ಕೆ ಉಪನ್ಯಾಸ ಕಾರ್ಯಕ್ರಮ

ಬೆಂಗಳೂರು: ಕರ್ನಾಟಕ ಲೇಖಕಿಯರ ಸಂಘದ ವತಿಯಿಂದ ಸೆ.19 ರಂದು ನಗರದಲ್ಲಿ ಫಿನ್ನಿಶ್ ಮಹಾಕಾವ್ಯ "ಕಲೆವಲ'ದ ಅನುವಾದ ಕುರಿತ ಉಪನ್ಯಾಸ ಕಾರ್ಯಕ್ರವನ್ನು ಏರ್ಪಡಿಸಲಾಗಿದೆ.
ಅಂದು ಸಂಜೆ 4 ಗಂಟೆಗೆ ನರಸಿಂಹರಾಜ ಕಾಲೋನಿಯ ಬಿಎಂಶ್ರೀ ಪ್ರತಿಷ್ಠಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಖ್ಯಾತ ಸಾಹಿತಿ ಮತ್ತು ಜಾನಪದ ತಜ್ಞರಾದ ಡಾ.ಕೆ.ಆರ್.ಸಂಧ್ಯಾರೆಡ್ಡಿ ಅವರು, ಫಿನ್ನಿಶ್ ಮಹಾಕಾವ್ಯ "ಕಲೆವಲ'ದ ಅನುವಾದ ಕುರಿತು ಉಪನ್ಯಾಸ ನೀಡಲಿದ್ದಾರೆ.
ಈ ವೇಳೆ, ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ವನಮಾನ ಸಂಪನ್ನಕುಮಾರ್, ಸಂಘದ ಕಾರ್ಯದರ್ಶಿ ನಾಗರತ್ನ ಚಂದ್ರಶೇಖರ್, ಬಿಎಂಶ್ರೀ ಪ್ರತಿಷ್ಠಾನದ ಗೌರವಾಧ್ಯಕ್ಷ ಪ್ರೊ. ಎಂ.ಎಚ್.ಕೃಷ್ಣಯ್ಯ, ಕಾರ್ಯದರ್ಶಿ ಬಿ.ಆರ್.ರವೀಂದ್ರ, ಡಾ.ವಿಜಯಾ ಸುಬ್ಬರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿರಲಿದ್ದಾರೆ ಎಂದು ಕರ್ನಾಟಕ ಲೇಖಕಿಯರ ಸಂಘದ ಪ್ರಕಟಣೆ ತಿಳಿಸಿದೆ.