ಗುಂಡಿ ಮುಚ್ಚದಿದ್ರೆ ಪಾಲಿಕೆ ಮುಚ್ತೇವೆ


Team Udayavani, Sep 20, 2018, 12:19 PM IST

blore-4.jpg

ಬೆಂಗಳೂರು: ಕಾನೂನು ಬಾಹಿರ ಜಾಹಿರಾತು ಫ‌ಲಕಗಳ ತೆರವು ವಿಚಾರದಲ್ಲಿ ನಿತ್ಯ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವ ಹೈಕೋರ್ಟ್‌, ಬುಧವಾರ ರಸ್ತೆ ಗುಂಡಿಗಳ ವಿಷಯದಲ್ಲಿ ಪಾಲಿಕೆ ವಿರುದ್ಧ ಕೆಂಡ ಕಾರಿತು. ನಾಳೆಯೊಳಗೆ (ಗುರುವಾರ) ಬೆಂಗಳೂರಿನ ರಸ್ತೆಗಳಲ್ಲಿರುವ ಎಲ್ಲ ಗುಂಡಿಗಳನ್ನು ಮುಚ್ಚಿ, ಇಲ್ಲವಾದಲ್ಲಿ ನಾವು (ಹೈಕೋರ್ಟ್‌) ಬಿಬಿಎಂಪಿಯನ್ನೇ ಮುಚ್ಚಬೇಕಾದೀತು ಎಂದು ಕಟುವಾಗಿ ಎಚ್ಚರಿಕೆ ಸಹ ನೀಡಿತು.

ರಸ್ತೆ ಗುಂಡಿಗಳಿಂದ ಸಾಕಷ್ಟು ಸಾವು-ನೋವುಗಳು ಸಂಭವಿಸುತ್ತಿವೆ ಎಂದು ಹೇಳಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಹೇಶ್ವರಿ ಹಾಗೂ ನ್ಯಾ. ಎಸ್‌.ಜಿ. ಪಂಡಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠ, ಪಾಲಿಕೆಯ ಬೇಜವಾಬ್ದಾರಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿತು.

ಬುಧವಾರದ ವಿಚಾರಣೆ ವೇಳೆ ಬಿಬಿಎಂಪಿ ವ್ಯಾಪ್ತಿಯಲ್ಲಿನ ರಸ್ತೆ ಗುಂಡಿಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್‌, ಅಧಿಕಾರಿಗಳ ಕಾರ್ಯವೈಖರಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು. ಅಧಿಕಾರಿಗಳು ಇದೇ ರೀತಿ ಕೆಲಸ ಮಾಡುವುದಾದರೆ ಬಿಬಿಎಂಪಿಯನ್ನು ಮುಚ್ಚಿಸಬೇಕಾದೀತು ಎಂದು ಎಚ್ಚರಿಕೆ ನೀಡಿತು. ಬೆಳಗಿನ ಕಲಾಪದ ವೇಳೆ, ರಸ್ತೆ ಕಾಮಗಾರಿಗೆ ಸಂಬಂಧಿಸಿದ “ಮೇಷರ್‌ವೆುಂಟ್‌ ಬುಕ್‌’ ಸಲ್ಲಿಸುವಂತೆ ಬಿಬಿಎಂಪಿ ಪರ ವಕೀಲರಿಗೆ ನ್ಯಾಯಪೀಠ ಸೂಚಿಸಿತು. ಆಗ, ಕಾಮಗಾರಿ ಪೂರ್ಣಗೊಂಡ ಬಳಿಕ ಅಳತೆ ಪುಸ್ತಕ ಸಿದ್ಧಪಡಿಸುವುದಾಗಿ ಬಿಬಿಎಂಪಿ ಪರ ವಕೀಲರು ಉತ್ತರಿಸಿದರು.

ಇದಕ್ಕೆ ಅಚ್ಚರಿ ವ್ಯಕ್ತಪಡಿಸಿದ ಮುಖ್ಯ ನ್ಯಾಯಮೂರ್ತಿ, “ಮೇಷರ್‌ವೆುಂಟ್‌ ಇಲ್ಲದೇ ಕಾಮಗಾರಿ ಹೇಗೆ ನಡೆಸುತ್ತೀರಿ, ಅಳತೆ ಇಲ್ಲದೇ ಕಾಮಗಾರಿ ಕೈಗೊಳ್ಳಲು ಲೆಕ್ಕ ಹೇಗೆ ಸಿಗುತ್ತದೆ. ನಿಮ್ಮದು ಯಾವ ಲೆಕ್ಕ. ಕೋರ್ಟ್‌ ಮುಂದೆ ಇಂತಹ ಹೇಳಿಕೆಗಳನ್ನು ನೀಡುತ್ತೀರಲ್ಲಾ, ನಾವೇನು ಇಲ್ಲಿ ತಮಾಷೆ ಮಾಡಲು ಕೂತಿದ್ದೀವಾ. ನಿಮ್ಮ ಅಧಿಕಾರಿಗಳು ಮಾಡುವ ಕೆಲಸ ಇದೇನಾ. 

ಇಂಜಿನಿಯರ್‌ಗಳು ಮತ್ತು ಗುತ್ತಿಗೆದಾರರ ತಾಳಕ್ಕೆ ಕೋರ್ಟ್‌ ಹೆಜ್ಜೆ ಹಾಕುತ್ತೇ ಅಂದುಕೊಂಡಿದ್ದೀರಾ? ನಿಮ್ಮಿಂದ ಕೆಲಸ ಮಾಡಲು ಆಗುವುದಿಲ್ಲ ಎಂದಾದರೆ, ಬಿಬಿಎಂಪಿ ಮುಚ್ಚಿಸಿಬಿಡುತ್ತೇವೆ. ತಕ್ಷಣ ಪಾಲಿಕೆಯನ್ನು ವಶಕ್ಕೆ ಪಡೆದುಕೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶಿಸುತ್ತೇನೆ ಎಂದು ಕಿಡಿಕಾರಿದರು. ಮಧ್ಯಾಹ್ನ 2.25ರೊಳಗೆ “ಅಳತೆ ಪುಸ್ತಕ’ ಸಲ್ಲಿಸುವಂತೆ ತಾಕೀತು ಮಾಡಿದರು.

ಉಡಾಫೆತನ ಬಂದಿದೆ! ಮಧ್ಯಾಹ್ನ ಕಲಾಪ ಆರಂಭವಾಗುತ್ತಿದ್ದಂತೆ ಬಿಬಿಎಂಪಿ ಪರ ವಕೀಲರು, “ಅಳತೆ ಪುಸ್ತಕದ’ ಕಡತಗಳು ಇನ್ನೂ ನಮಗೆ ಲಭ್ಯವಾಗಿಲ್ಲ. ಸಂವಹನದ ಕೊರತೆಯಿಂದ ತಕ್ಷಣವೇ ಕಡತ ತಂದುಕೊಡಲು ಅಧಿಕಾರಿಗಳಿಗೆ ಸಾಧ್ಯವಾಗಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದರು. 

ಇದಕ್ಕೆ ಮತ್ತಷ್ಟು ಕೆರಳಿದ ಮುಖ್ಯ ನ್ಯಾಯಮೂರ್ತಿಗಳು, ಅದೆಲ್ಲಾ ನನಗೆ ಗೊತ್ತಿಲ್ಲ, ತಾವು ಏನು ಮಾಡಿದರೂ ನಡೆಯುತ್ತದೆ ಎಂದು ಅಧಿಕಾರಿಗಳು ಅಂದುಕೊಂಡಿದ್ದಾರಾ? ನಮ್ಮನ್ನು ಕೇಳ್ಳೋರು ಯಾರು ಅನ್ನುವ ಉಡಾಫೆ ತನ ಅವರಿಗೆ ಬಂದು ಬಿಟ್ಟಂತಿದೆ. ಅಧಿಕಾರಿಗಳ ಈ ಬೇಜವಾಬ್ದಾರಿತನವನ್ನು ಕ್ಷಮಿಸಲು ಸಾಧ್ಯವಿಲ್ಲ. 

ಇಂತಹವರಿಗೆ ಏನು ಮಾಡಬೇಕು ಎಂಬುದು ನ್ಯಾಯಾಲಯಕ್ಕೆ ಚೆನ್ನಾಗಿ ಗೊತ್ತಿದೆ ಎಂದು ಎಚ್ಚರಿಕೆ ನೀಡಿದರು. ಅಲ್ಲದೇ ಏನು ಮಾಡುತ್ತೀರಾ, ಹೇಗೆ ಮಾಡುತ್ತೀರಾ ಅದು ಗೊತ್ತಿಲ್ಲ. ಆದರೆ, ಗುರುವಾರದೊಳಗೆ ಬಿಬಿಎಂಪಿಯ ಎಲ್ಲ 198 ವಾರ್ಡಗಳ ರಸ್ತೆಗಳಲ್ಲಿನ ಗುಂಡಿಗಳನ್ನು ಸಂಪೂರ್ಣವಾಗಿ ಮುಚ್ಚಬೇಕು. ಇದಕ್ಕಾಗಿ ಅಹೋರಾತ್ರಿ ಕೆಲಸ ಮಾಡಿ ಎಂದು ತಾಕೀತು ಮಾಡಿದ ನ್ಯಾಯಪೀಠ, ವಿಚಾರಣೆಯನ್ನು ಗುರುವಾರಕ್ಕೆ (ಸೆ.20) ಮುಂದೂಡಿತು. 

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.