ಆಪರೇಷನ್ ಕಮಲಕ್ಕೆ ಮೋದಿ, ಶಾ ಕುಮ್ಮಕ್ಕು
Team Udayavani, Sep 23, 2018, 12:58 PM IST
ಬೆಂಗಳೂರು: ಬಿಜೆಪಿಯವರು ಆದಾಯ ತೆರಿಗೆ ಇಲಾಖೆಯನ್ನು ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ಶಾಸಕರ ಖರೀದಿಗೆ ಮುಂದಾಗಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕುಮ್ಮಕ್ಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟು ದಿನ ಯಡಿಯೂರಪ್ಪ ಬೇರೆ ಶಾಸಕರ ಮೂಲಕ ಆಮಿಷ ಒಡ್ಡು ತ್ತಿದ್ದರು. ಆದರೆ, ಈಗ ಅವರೇ ನೇರವಾಗಿ ಕೈ ಶಾಸಕರನ್ನು ಸಂಪ ರ್ಕಿಸಿದ್ದಾರೆ. ಅಲ್ಲದೇ ಇನ್ನೆರಡು ದಿನದಲ್ಲಿ 18 ಶಾಸಕರು ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂದು ಹೇಳಿದ್ದಾರೆ.
ಬಿಲ್ಡರ್ಗಳು, ರಿಯಲ್ ಎಸ್ಟೇಟ್ ಏಜೆಂಟರ್ ಗಳ ಮೂಲಕ ಹಣ ಸಂಗ್ರಹಿಸಿ ಶಾಸಕರ ಖರೀದಿ ಮಾಡಲು ಪ್ರಯತ್ನ ನಡೆಸುತ್ತಿದ್ದಾರೆಂದು ದೂರಿದರು. ಕಾಂಗ್ರೆಸ್ ಎಲ್ಲ ಶಾಸಕರೂ ನಮ್ಮ ಸಂಪರ್ಕದಲ್ಲಿದ್ದಾರೆ, ಯಾರೂ ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ. ಆದರೂ ಬಿಜೆಪಿಯವರು ಗೊಂದಲ ಸೃಷ್ಟಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಸುಧಾಕರ್ ಹಾಗೂ ಎಂ.ಟಿ.ಬಿ. ನಾಗರಾಜ್ ದೇವಸ್ಥಾನಕ್ಕೆ ಹೋಗಿ ವಾಪಸ್ ಬರುತ್ತಿದ್ದಾರೆ.
ಬಿ.ಸಿ. ಪಾಟೀಲ್ ಕೂಡ ದೇವಸ್ಥಾನಕ್ಕೆ ತೆರಳಿ ವಾಪಸ್ ಬಂದಿದ್ದಾರೆ. ಸೆಪ್ಟೆಂಬರ್ 25ರಂದು ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಕಾಂಗ್ರೆಸ್ನ ಎಲ್ಲ ಶಾಸಕರು ಹಾಜರಾಗಲಿದ್ದು, ಅ. 4ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ನ ಮೂವರು ಅಭ್ಯರ್ಥಿಗಳು ಜಯ ಗಳಿಸಲಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ