ಪಟೇಲ್‌ ಪ್ರತಿಮೆ ಅನಾವರಣಕ್ಕೆ ಬನ್ನಿ


Team Udayavani, Oct 17, 2018, 12:54 PM IST

patel.jpg

ಬೆಂಗಳೂರು: “ಭಾರತದ ಉಕ್ಕಿನ ಮನುಷ್ಯ’ ಖ್ಯಾತಿಯ ಸರ್ದಾರ್‌ ವಲ್ಲಭಭಾಯ್‌ ಪಟೇಲ್‌ ಅವರ ಪ್ರತಿಮೆ ಸರ್ದಾರ್‌ ಸರೋವರ್‌ ಜಲಾಶಯದ ಬಳಿ ನಿರ್ಮಾಣವಾಗಿದ್ದು, ಅ.31ಕ್ಕೆ ಅನಾವರಣಗೊಳ್ಳಲಿದೆ. ಆ ಹಿನ್ನೆಲೆಯಲ್ಲಿ ಗುಜರಾತ್‌ ಸರ್ಕಾರ ರಾಜ್ಯದ ಜನತೆಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದೆ.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಗುಜರಾತ್‌ನ ಇಂಧನ ಮತ್ತು ಪೆಟ್ರೋಲಿಯಂ ಸಚಿವ ಸೌರಭ್‌ಭಾಯ್‌ ಪಟೇಲ್‌, ದೇಶದ ಉಕ್ಕಿನ ಮನುಷ್ಯ, ಕೇಂದ್ರ ಮೊದಲ ಗೃಹ ಸಚಿವ ಸರ್ದಾರ್‌ ವಲ್ಲಭಭಾಯ್‌ ಪಟೇಲ್‌ ಅವರ ಪ್ರತಿಮೆಯನ್ನು ನರ್ಮದಾ ಜಿಲ್ಲೆಯ ಕೇವದಿಯಾ ಪ್ರದೇಶದ ಸರ್ದಾರ್‌ ಸರೋವರ ಜಲಾಶಯದ ಬಳಿ ನಿರ್ಮಿಸಲಾಗಿದ್ದು, ಅ.31ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಹೇಳಿದರು.

ಜಗತ್ತಿನಲ್ಲೇ ಅತಿ ಎತ್ತರದ, ಅಂದರೆ 182 ಮೀಟರ್‌ ಎತ್ತರದ ಪ್ರತಿಮೆ ನಿರ್ಮಾಣಕ್ಕೆ 2013ರ ಅ.31ರಂದು ಚಾಲನೆ ನೀಡಲಾಗಿತ್ತು. ಅದರಂತೆ ಭವ್ಯ ಪ್ರತಿಮೆ ನಿರ್ಮಾಣಗೊಂಡಿದೆ. ಇದೀಗ ಉದ್ಘಾಟನಾ ಸಮಾರಂಭಕ್ಕೂ ಗುಜರಾತ್‌ ಸರ್ಕಾರದ ಪರವಾಗಿ ಕರ್ನಾಟಕದ ಜನತೆಗೆ ಆಹ್ವಾನ ನೀಡಲಾಗುತ್ತಿದೆ ಎಂದು ತಿಳಿಸಿದರು.

ಸರ್ದಾರ್‌ ಸರೋವರ ಜಲಾಶಯದ ದಕ್ಷಿಣ ಭಾಗದಲ್ಲಿ 3.5 ಕಿ.ಮೀ.ಅಂತರದಲ್ಲಿ ಭವ್ಯ ಪ್ರತಿಮೆ ಪ್ರತಿಷ್ಠಾಪನೆಯಾಗಿದೆ. ಪ್ರತಿಮೆ ನಿರ್ಮಾಣಕ್ಕಾಗಿ 28 ರಾಜ್ಯಗಳಲ್ಲೂ ಲೋಹ ಸಂಗ್ರಹ ಅಭಿಯಾನ ನಡೆಸಿದಾಗ 5000 ಟನ್‌ನಷ್ಟು ಕಬ್ಬಿಣ ಸಂಗ್ರಹವಾಗಿತ್ತು. ಒಟ್ಟು 25,000 ಟನ್‌ ಉಕ್ಕು ಬಳಸಿ ಉಕ್ಕಿನ ಮನುಷ್ಯನ ಪ್ರತಿಮೆ ನಿರ್ಮಿಸಲಾಗಿದೆ.

ಒಟ್ಟು 2,389 ಕೋಟಿ ರೂ.ವೆಚ್ಚದ ಯೋಜನೆಯಾಗಿದ್ದು, ವೀಕ್ಷಣೆಗೆ ಕನಿಷ್ಠ ಶುಲ್ಕ ವಿಧಿಸಲಾಗುವುದು. ಈ ಬಗ್ಗೆ ಇನ್ನಷ್ಟೇ ಚರ್ಚಿಸಿ ನಿಗದಿಪಡಿಸಬೇಕಿದೆ. 153 ಮೀಟರ್‌ವರೆಗೆ ಲಿಫ್ಟ್ನಲ್ಲಿ ತೆರಳಿ ಪ್ರತಿಮೆ ವೀಕ್ಷಿಸಲು ಪ್ರತ್ಯೇಕ ಶುಲ್ಕವಿರಲಿದ್ದು, ಅದಕ್ಕೆ ಆನ್‌ಲೈನ್‌ನಲ್ಲಿ ಮುಂಗಡ ಕಾಯ್ದಿರಿಸುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಏಕತೆಯ ಪ್ರತಿಮೆ ಆವರಣದಲ್ಲಿ ಪಟೇಲ್‌ ವಸ್ತು ಸಂಗ್ರಹಾಲಯ, ಆಡಿಯೋ- ವಿಡಿಯೋ ಗ್ಯಾಲರಿ, ಸಂಶೋಧನಾ ಕೇಂದ್ರ ಪ್ರದರ್ಶನ ಆವರಣವಾಗಲಿದೆ. ರಾತ್ರಿ ವೇಳೆ ಪ್ರತಿಮೆಯ ಮೆರಗು ಹೆಚ್ಚಿಸುವಂತೆ ಧ್ವನಿ ಮತ್ತು ಬೆಳಕಿನ ವ್ಯವಸ್ಥೆ ಕಲ್ಪಿಸಲಾಗಿದೆ. 100 ಮಂದಿ ಯುವ ಗೈಡ್‌ಗಳನ್ನು ಸಜ್ಜುಗೊಳಿಸಲಾಗಿದೆ.

ಪ್ರತಿಮೆಯ ಒಳ ಭಾಗದಿಂದ 153 ಮೀಟರ್‌ ಎತ್ತರದಲ್ಲಿ ವೀಕ್ಷಣಾ ಗ್ಯಾಲರಿ ನಿರ್ಮಿಸಲಾಗಿದೆ. ಪ್ರತಿಮೆಯ ಎದೆ ಭಾಗದಲ್ಲಿನ ಗ್ಯಾಲರಿಗೆ ತಲುಪಲು ಎರಡು ಲಿಫ್ಟ್ಗಳನ್ನು ಅಳವಡಿಸಲಾಗಿದೆ. ಅಲ್ಲಿಂದ ಜಲಾಶಯ, ವಿಂಧ್ಯಾಚಲ ಪರ್ವತ ಶ್ರೇಣಿ, ನರ್ಮದಾ ನದಿ ಸೊಬಗನ್ನು ಕಣ್ತುಂಬಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಪ್ರತಿಮೆ ಸುತ್ತಮುತ್ತ ಎಲ್ಲ ರಾಜ್ಯಗಳು ತಮ್ಮದೇ ಸ್ವಂತ ಭವನ ನಿರ್ಮಾಣಕ್ಕೆ ಗುಜರಾತ್‌ ಸರ್ಕಾರದಿಂದ ಭೂಮಿ ನೀಡಲಾಗುವುದು. ಈಗಾಗಲೇ ಕೆಲ ರಾಜ್ಯಗಳು ಆಸಕ್ತಿ ತೋರಿದ್ದು, ಕರ್ನಾಟಕ ಸರ್ಕಾರವು ಈ ಬಗ್ಗೆ ಗಮನ ಹರಿಸಬಹುದು. ಪ್ರವಾಸೋದ್ಯಮ ದೃಷ್ಟಿಯಿಂದ ವಿಲಾಸಿ, ಐಷಾರಾಮಿ, ಸಾಧಾರಣ ಟೆಂಟ್‌ಗಳನ್ನು ನಿರ್ಮಿಸಿ ಪ್ರವಾಸಿಗರಿಗೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ಹೇಳಿದರು.

 ಪಟೇಲ್‌ ಅವರ ಕೊಡುಗೆಯನ್ನು ಮುಂದಿನ ಪೀಳಿಗೆಗೂ ತಿಳಿಸುವ ಸಲುವಾಗಿ ಪ್ರತಿಮೆ ನಿರ್ಮಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಅ.31ರಂದು ಪ್ರತಿಮೆ ಅನಾವರಣಗೊಳಿಸಲಿದ್ದಾರೆ. ಕಾರ್ಯಕ್ರಮಕ್ಕೆ ಕರ್ನಾಟಕದ ರಾಜ್ಯಪಾಲ ವಜುಭಾಯ್‌ ವಾಲಾ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರಿಗೆ ಆಹ್ವಾನ ನೀಡಲಾಗಿದೆ ಎಂದು ತಿಳಿಸಿದರು.

ಗುಜರಾತ್‌ ಸರ್ಕಾರದ ಆರೋಗ್ಯ ಇಲಾಖೆ ಆಯುಕ್ತೆ ಜಯಂತಿ ರವಿ, ಗುಜರಾತ್‌ ಸಚಿವ ಜಯದ್ರತ್‌ ಸಿಂಗ್‌ ಪರಮರ್‌, ಶಾಸಕರಾದ ಶೈಲೇಶ್‌ ಬಬೋರ್‌, ಭರತ್‌ಭಾಯ್‌ ಪಟೇಲ್‌, ಬಿಕಾಭಾಯ್‌ ಭರಯ್ಯ, ಮಧು ಶ್ರೀವಾಸ್ತವ್‌, ಐಎಫ್ಎಸ್‌ ಅಧಿಕಾರಿ ಆರ್‌.ಕೆ.ಸುಗೂರ್‌ ಉಪಸ್ಥಿತರಿದ್ದರು.

ನಿವಾಸಿಗಳ ಕೊಡುಗೆ ಅಪಾರ: ಕಳೆದ 40- 50 ವರ್ಷಗಳಲ್ಲಿ ಗುಜರಾತ್‌ನ ಅಭಿವೃದ್ಧಿಗೆ ಗುಜರಾತ್‌ನ ಸ್ಥಳೀಯರು ಮಾತ್ರವಲ್ಲದೇ ದೇಶದ ನಾನಾ ಭಾಗಗಳಿಂದ ಬಂದು ನೆಲೆಸಿರುವ ಜನರ ಕೊಡುಗೆಯೂ ಮಹತ್ವದ್ದಾಗಿದೆ. ಗುಜರಾತ್‌ನ ಅಭಿವೃದ್ಧಿಗೆ ಕೊಡುಗೆ ನೀಡಿದ ಪ್ರತಿಯೊಬ್ಬರಿಗೂ ಆ ಕೊಡುಗೆಯ ಶ್ರೇಯ ನೀಡುತ್ತೇವೆ ಎಂದು ಗುಜರಾತ್‌ನ ಇಂಧನ ಮತ್ತು ಪೆಟ್ರೋಲಿಯಂ ಸಚಿವ ಸೌರಭ್‌ಭಾಯ್‌ ಪಟೇಲ್‌ ಹೇಳಿದರು.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಇತ್ತೀಚೆಗೆ ಗುಜರಾತ್‌ನಲ್ಲಿ ವಲಸಿಗ ಕಾರ್ಮಿಕರ ಮೇಲೆ ನಡೆದ ಹಲ್ಲೆ, ಅಪ್ರಾಪೆ¤ ಮೇಲಿನ ಅತ್ಯಾಚಾರ, ಇತರ ಘಟನೆಗಳಿಂದ ಉತ್ತರಪ್ರದೇಶ ಹಾಗೂ ಬಿಹಾರದ ಜನ ಗುಜರಾತ್‌ನಿಂದ ತಾಯ್ನಾಡಿಗೆ ವಾಪಸ್ಸಾಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು,

ಸಣ್ಣ ಪ್ರಮಾಣದಲ್ಲಿ ಉತ್ತರ ಭಾರತ ಮೂಲದ ಜನ ತಮ್ಮ ತಾಯ್ನಾಡಿಗೆ ತೆರಳಿದ್ದಾರೆ. ನವರಾತ್ರಿ ಆಚರಣೆ ಸಂದರ್ಭದಲ್ಲಿ ಇದು ಸಹಜ ಪ್ರಕ್ರಿಯೆ. ಆಚರಣೆ ಮುಗಿದ ಬಳಿಕ ವಾಪಸ್ಸಾಗುತ್ತಾರೆ. ಈ ಬಗ್ಗೆ ವಿಶ್ವಾಸವಿದೆ. ಸೋಮವಾರ ಉತ್ತರ ಪ್ರದೇಶದಲ್ಲಿದ್ದ ಗುಜರಾತ್‌ ಮುಖ್ಯಮಂತ್ರಿಗಳು ಕಾರ್ಮಿಕರು ರಾಜ್ಯಕ್ಕೆ ವಾಪಸ್ಸಾಗುವಂತೆ ಮನವಿ ಮಾಡಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.