ಬಿಎಂಟಿಸಿ ನೌಕರರ ವರ್ಗಾವಣೆಗೆ ಆನ್‌ಲೈನ್‌ ಸ್ಪರ್ಶ

Team Udayavani, Oct 19, 2018, 1:13 PM IST

bmtc.png

ಬೆಂಗಳೂರು: ಬಿಎಂಟಿಸಿಯಲ್ಲಿ ಅಂತರ ಘಟಕ ಅಥವಾ ವಿಭಾಗಗಳ ವರ್ಗಾವಣೆ ಎಂದರೆ ಹಣ ಮಾಡಲು “ಸುಗ್ಗಿ ಕಾಲ’ ಎಂಬ ಆರೋಪ ಇದೆ. ಇದಕ್ಕೆ ಪೂರಕವಾಗಿ ಆಗಾಗ್ಗೆ ಈ ಸಂಬಂಧದ ಪ್ರತಿಭಟನೆಗಳು ಆಯಾ ಘಟಕಗಳಲ್ಲಿ ನಡೆಯುತ್ತಲೇ ಇರುತ್ತವೆ. ಇನ್ಮುಂದೆ ಇದಕ್ಕೆ ಸಂಪೂರ್ಣ ಬ್ರೇಕ್‌ ಬೀಳಲಿದೆ. ಯಾಕೆಂದರೆ, ವರ್ಗಾವಣೆ ವ್ಯವಸ್ಥೆ ಈಗ ಸಂಪೂರ್ಣ ಆನ್‌ಲೈನ್‌ ಆಗಲಿದೆ.

ವೃತ್ತಿಪರ ಕೋರ್ಸ್‌ಗಳಿಗೆ ನಡೆಯುವ ಮಾದರಿಯಲ್ಲೇ ಬಿಎಂಟಿಸಿ ನೌಕರರ ವರ್ಗಾವಣೆಗೆ ಮೊದಲೇ ಸಾಮರ್ಥ್ಯ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿರಬೇಕು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿರಬೇಕು. ಇದಾದ ನಂತರ ಅಭ್ಯರ್ಥಿಗಳನ್ನು ಮೆರಿಟ್‌ ಆಧಾರದಲ್ಲಿ ಕೌನ್ಸೆಲಿಂಗ್‌ ಕರೆಯಲಾಗುವುದು. ಈ ಎಲ್ಲ ಪ್ರಕ್ರಿಯೆಗಳು ಮುಗಿದ ಮೇಲಷ್ಟೇ “ವರ್ಗಾವಣೆ ಭಾಗ್ಯ’ ದೊರೆಯಲಿದೆ. 

ಈ ಮೊದಲು ಎಲ್ಲವೂ ಮ್ಯಾನುವಲ್‌ ಆಗಿತ್ತು. ಮೊದಲು ಅರ್ಜಿ ಸಲ್ಲಿಸಿದವರಿಗೆ ಆದ್ಯತೆ ಸಿಗುತ್ತಿತ್ತು. ಡಿಪೋ ವ್ಯಾಪ್ತಿಯ ಮೇಲಧಿಕಾರಿ ನೀಡುವ ವರದಿ ಪ್ರಭಾವ ಬೀರುತ್ತಿತ್ತು. ಅಷ್ಟೇ ಅಲ್ಲ, ಇದಕ್ಕಾಗಿ ಪ್ರಭಾವಿಗಳಿಂದ ಶಿಫಾರಸು ಪತ್ರಗಳೂ ಬರುತ್ತಿದ್ದವು. ಕೊನೆಗೆ ಪಾರದರ್ಶಕದ ಕೊರತೆ ಆರೋಪ ಎದುರಿಸಬೇಕಾಗಿತ್ತು. ಇದು ಅಧಿಕಾರಿಗಳಿಗೆ ಪ್ರತಿ ಬಾರಿ ತಲೆನೋವಾಗಿತ್ತು.

ಈ ಹಿನ್ನೆಲೆಯಲ್ಲಿ “ಕೌನ್ಸೆಲಿಂಗ್‌ ಆ್ಯಪ್‌’ ಅನ್ನು ಅಭಿವೃದ್ಧಿಪಡಿಸಿರುವ ಬಿಎಂಟಿಸಿ, ಆಯಾ ಡಿಪೋಗಳ ವ್ಯಾಪ್ತಿಯಲ್ಲೇ ವರ್ಗಾವಣೆ ಬಯಸುವ ನೌಕರರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಸುಮಾರು ಎರಡು ಸಾವಿರ ಅರ್ಜಿಗಳನ್ನು ನಿರೀಕ್ಷಿಸಲಾಗದ್ದು, ತಿಂಗಳಾಂತ್ಯಕ್ಕೆ ಕೌನ್ಸೆಲಿಂಗ್‌ ಸೇರಿದಂತೆ ಇಡೀ ಪ್ರಕ್ರಿಯೆ ಪೂರ್ಣಗೊಳಿಸುವ ಗುರಿ ಇದೆ ಎಂದು ಹೆಸರು ಹೇಳಲಿಚ್ಛಿಸದ ಬಿಎಂಟಿಸಿ ಐಟಿ ವಿಭಾಗದ ಅಧಿಕಾರಿಯೊಬ್ಬರು “ಉದಯವಾಣಿ’ಗೆ ಮಾಹಿತಿ ನೀಡಿದರು. 

ರ್‍ಯಾಂಕಿಂಗ್‌ ಆಧರಿಸಿ ಕೌನ್ಸೆಲಿಂಗ್‌: ಇದಕ್ಕೆ ಪೂರಕವಾಗಿ ಕಳೆದ ಮೂರು ತಿಂಗಳಿಂದ ಆಯಾ ಘಟಕಗಳ ವ್ಯಾಪ್ತಿಯಲ್ಲಿ ಚಾಲಕ ಮತ್ತು ನಿರ್ವಾಹಕರ ಸಾಮರ್ಥ್ಯ ಪರೀಕ್ಷೆ ನಡೆಸಲಾಗಿದೆ. ಈ ಪರೀಕ್ಷೆಯಲ್ಲಿ ಚಾಲನಾ ಅವಧಿ, ಅನುಸೂಚಿತವಲ್ಲದ ಹೆಚ್ಚುವರಿ ಸೇವೆ, ಸೇವೆಯ ಪ್ರಕಾರ (ಪಾಳಿ), ಪ್ರಯಾಣಿಕರ ರೇಟಿಂಗ್‌, ನಿಗದಿತ ಮಾರ್ಗ ಪೂರ್ಣಗೊಳಿಸಿರುವುದು,

ತರುವ ಆದಾಯ ಸೇರಿದಂತೆ ಹಲವು ಅಂಶಗಳ ಮೌಲ್ಯಮಾಪನ ಮಾಡಲಾಗುತ್ತದೆ. ಇದರಲ್ಲಿ ಪಡೆಯುವ ಅಂಕಗಳನ್ನು ಆಧರಿಸಿ ರ್‍ಯಾಂಕಿಂಗ್‌ ನೀಡಲಾಗುತ್ತಿದೆ. ಇದರ ಮುಂದುವರಿದ ಭಾಗವೇ ಕೌನ್ಸೆಲಿಂಗ್‌ ಪ್ರಕ್ರಿಯೆ. ಮೌಲ್ಯಮಾಪನದಲ್ಲಿ ಉತ್ತಮ ಅಂಕ ಗಳಿಸಿದವರಿಗೆ ಕೌನ್ಸೆಲಿಂಗ್‌ನಲ್ಲಿ ಆದ್ಯತೆ ದೊರೆಯಲಿದೆ ಎಂದೂ ಅವರು ಹೇಳಿದರು.

ಇವರಿಗೆ ವಿನಾಯ್ತಿ?: ಪರಸ್ಪರ ವರ್ಗಾವಣೆ, ವಿಧವೆ, ಪತಿ-ಪತ್ನಿ, ಆರೋಗ್ಯ ಸಮಸ್ಯೆಯಂತಹ ಪ್ರಕರಣಗಳಿಗೆ ಇದರಲ್ಲಿ ವಿನಾಯ್ತಿ ನೀಡಲಾಗಿದೆ. ಅಂದುಕೊಂಡಂತೆ ನಡೆದರೆ, ಇದೊಂದು ಉತ್ತಮ ವ್ಯವಸ್ಥೆ ಆಗುತ್ತದೆ. ಸಂಸ್ಥೆಗಾಗಿ ಶ್ರಮಿಸಿದ ಅರ್ಹರಿಗೆ ಅವಕಾಶಗಳು ದೊರೆಯುತ್ತವೆ. ಜತೆಗೆ ಪ್ರೇರಣೆಯೂ ಸಿಕ್ಕಂತಾಗುತ್ತದೆ. ಸೇವಾ ಜೇಷ್ಠತೆಗಿಂತ ಸೇವಾ ನಿಷ್ಠೆ ಇಲ್ಲಿ ಹೆಚ್ಚು ಕೆಲಸ ಮಾಡಲಿದೆ ಎಂಬ ವಿಶ್ವಾಸ ಇದೆ ಎಂದು ನಿರ್ವಾಹಕ ಮಂಜುನಾಥ್‌ ತಿಳಿಸಿದರು.

ಟಾಪ್ ನ್ಯೂಸ್

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.