ಪಾಲಿಕೆ ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ಟ್ಯಾಬ್
Team Udayavani, Oct 22, 2018, 12:56 PM IST
ಬೆಂಗಳೂರು: ಪಾಲಿಕೆಯ ಶಾಲಾ-ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ದೊರಕುವಂತಾಗಲು ಮೈಕ್ರೋಸಾಫ್ಟ್ ಹಾಗೂ ಟೆಕ್ ಅವಂತ್ ಗಾರ್ಡ್ ಸಂಸ್ಥೆಗಳು ಪಾಲಿಕೆಯೊಂದಿಗೆ ಒಪ್ಪಂದ ಮಾಡಿಕೊಂಡು ಜಾರಿಗೊಳಿಸುತ್ತಿರುವ “ರೋಷಿನಿ’ ಯೋಜನೆಯಡಿ ವಿದ್ಯಾರ್ಥಿಗಳಿಗೆ ಟ್ಯಾಬ್ ದೊರೆಯಲಿದೆ.
“ಎಲ್ಲಾದರೂ ಎಲ್ಲಿಂದಾದರೂ ಕಲಿ’ ಎಂಬ ಘೋಷವಾಕ್ಯದಡಿ ಕಲಿಕಾ ವಿಧಾನವನ್ನು ಹೈಟೆಕ್ಗೊಳಿಸಲು ಯೋಜನೆ ರೂಪಿಸಲಾಗಿದ್ದು ಅದರಂತೆ ಪಾಲಿಕೆಯ ಶಾಲಾ-ಕಾಲೇಜುಗಳಲ್ಲಿರುವ 1ರಿಂದ 12ನೇ ತರಗತಿವರೆಗಿನ 12 ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ಸಿಗಲಿದೆ.
ೆಪಾಲಿಕೆಯ ಶಾಲೆ-ಕಾಲೇಜುಗಳಲ್ಲಿ ಶಿಕ್ಷಕರು-ಉಪನ್ಯಾಸಕರಲ್ಲಿ ಬೋಧನಾ ಕೌಶಲ್ಯ ಸ್ಪರ್ಧಾತ್ಮಕವಾಗಿ ಇಲ್ಲದಿರುವುದು. ಆ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಹಾಗೂ ಸ್ಯಾಟಲೈಟ್ ಶಿಕ್ಷಣ ದೊರೆಯಲಿ ಎಂಬ ಸದುದ್ದೇಶದಿಂದ ಟ್ಯಾಬ್ ನೀಡಲು ತೀರ್ಮಾನಿಸಲಾಗಿದೆ. ಈ ಮೂಲಕ ವಿದ್ಯಾರ್ಥಿಗಳಲ್ಲಿ ತಂತ್ರಜ್ಞಾನ ಆಧಾರಿತ ಶಿಕ್ಷಣದದ ಬಗ್ಗೆ ಆಸಕ್ತಿ ಮೂಡಿಸುವುದು ಉದ್ದೇಶವಾಗಿದೆ.
ವಿದ್ಯಾರ್ಥಿಗಳಿಗೆ ಟ್ಯಾಬ್ ನೀಡುವ ಜತೆಗೆ ಪೋಷಕರಿಗಾಗಿ ವಿಶೇಷ ಆ್ಯಪ್ ಅಭಿವೃದ್ಧಿಪಡಿಸಲಾಗುತ್ತಿದೆ. ಈ ಆ್ಯಪ್ ಮೂಲಕ ಪೋಷಕರು ನಿತ್ಯ ಪಾಲಿಕೆಯ ಶಾಲೆಗಳಲ್ಲಿ ನಡೆಯುತ್ತಿರುವ ಚಟುವಟಿಕೆಗಳು, ತಮ್ಮ ಮಕ್ಕಳ ಕಲಿಕಾ ಸಾಮರ್ಥಯ, ಪರೀಕ್ಷೆಗಳಲ್ಲಿ ಮಕ್ಕಳು ಪಡೆದುಕೊಂಡಿರುವ ಅಂಕಗಳ ಕುರಿತು ಮಾಹಿತಿ ಪಡೆಯಬಹುದಾಗಿದೆ ಎಂದು ಪಾಲಿಕೆ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!