ಅಂತರ ಕಾಲೇಜು ಅಥ್ಲೆಟಿಕ್ಸ್ಗೆ ಚಾಲನೆ
Team Udayavani, Oct 23, 2018, 12:36 PM IST
ಬೆಂಗಳೂರು: ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಮೊಟ್ಟ ಮೊದಲ ಅಂತರ ಕಾಲೇಜು ಅಥ್ಲೆಟಿಕ್ ಚಾಂಪಿಯನ್ಶಿಪ್ಗೆ ಸೋಮವಾರ ಕಂಠೀರವ ಕ್ರೀಡಾಂಗಣದಲ್ಲಿ ಚಾಲನೆ ಸಿಕ್ಕಿದೆ. ವಿವಿಯ ಕುಲಪತಿ ಪ್ರೊ.ಎಸ್.ಜಾಫೆಟ್ ಅವರು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ವಿಶ್ವವಿದ್ಯಾಲಯ ವ್ಯಾಪ್ತಿಯ ಸುಮಾರು 80 ಕಾಲೇಜುಗಳ 800ಕ್ಕೂ ಅಧಿಕ ಕ್ರೀಡಾಪಟುಗಳು ಚಾಂಪಿಯನ್ಶಿಪ್ನಲ್ಲಿ ಭಾಗಹಿಸಿದ್ದರು. ವಿವಿಧ ಮಾದರಿಯ ಓಟ, ರಿಲೆ, ಎತ್ತರ ಜಿಗಿತ, ಉದ್ಧ ಜಿಗಿತ ಸಹಿತ ವೈಯಕ್ತಿಕ ಮತ್ತು ತಂಡದ 44 ಬಗೆಯ ಸ್ಪರ್ಧೆಗಳು ಮಂಗಳವಾರ ಕೂಡ ನಡೆಯಲಿವೆ.
ಅಂತರ್ ಕಾಲೇಜು ಅಥ್ಲೆಟಿಕ್ ಚಾಂಪಿಯನ್ಶಿಪ್ ವಿಜೇತರು ಮತ್ತು ತಂಡಗಳು ನವೆಂಬರ್ನಲ್ಲಿ ಮಂಗಳೂರಿನಲ್ಲಿ ನಡೆಯಲಿರುವ ಅಖೀಲ ಭಾರತೀಯ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಲಿದ್ದಾರೆ.
ವಿವಿಯ ಕುಲಸಚಿವ ಡಾ.ಎಂ.ರಾಮಚಂದ್ರಗೌಡ, ಮೌಲ್ಯಮಾಪನ ಕುಲಸಚಿವ ಲಿಂಗರಾಜುಗಾಂಧಿ, ಮಾಜಿ ಅಥ್ಲೀಟ್ಗಳಾದ ಮೊಹಮ್ಮದ್ ಮುದಾಸೀರ್, ಪ್ರಮೀಳಾ ಅಯ್ಯಪ್ಪ, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಮೊಹಮ್ಮದ್ ಇಲಿಯಾಸ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ