CONNECT WITH US  

ನ.15ರಂದು ಪುಸ್ತಕಗಳ ಬಿಡುಗಡೆ ಸಮಾರಂಭ

ಬೆಂಗಳೂರು: ಪ್ರಿಯದರ್ಶಿನಿ ಪ್ರಕಾಶನದ ವತಿಯಿಂದ ನಗರದಲ್ಲಿ ನ.15 ರಂದು ಡಾ.ಕಾ.ವೆಂ.ಶ್ರೀನಿವಾಸ ಮೂರ್ತಿ ಅವರ ಪುಸ್ತಕಗಳ ಲೋಕಾರ್ಪಣೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ಸಂಜೆ 5.30ಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷನ್ಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಡಾ.ಕಾ.ವೆಂ.ಶ್ರೀನಿವಾಸ ಮೂರ್ತಿ ಅವರ "ಸಾಹಿತ್ಯ ಸಂಘರ್ಷ' (ವಿಮರ್ಶೆ) ಮತ್ತು "ಒಡನಾಟ' (ಸಾಂಸ್ಕೃತಿಕ ಬರಹಗಳು)ಕೃತಿಗಳನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮನು ಬಳಿಗಾರ್‌ ಲೋಕಾರ್ಪಣೆಗೊಳಿಸಲಿದ್ದಾರೆ.

ಬೆಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ.ಕೆ.ಆರ್‌.ವೇಣುಗೋಪಾಲ್‌ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Trending videos

Back to Top