ಅಂಧಕಾರದತ್ತ ಏಳು ಮಂದಿ

Team Udayavani, Nov 9, 2018, 11:47 AM IST

andhakara.jpg

ಬೆಂಗಳೂರು: ದೀಪಾವಳಿ ಹಬ್ಬದ ಕೊನೆಯ ದಿನವಾದ ಗುರುವಾರ ಒಂದೇ ದಿನ 40ಕ್ಕೂ ಹೆಚ್ಚು ಮಂದಿಗೆ ಪಟಾಕಿಯಿಂದ ಹಾನಿಗೊಳಗಾಗಿದ್ದು, ನಾಲ್ಕು ಮಂದಿ ಕಣ್ಣಿಗೆ ಗಂಭೀರ ಗಾಯವಾಗಿ ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ಮೂಲಕ ಹಬ್ಬದ ಮೊದಲೆರಡು ದಿನ (ನ.6,7)ಇಪ್ಪತ್ತಕ್ಕೂ ಹೆಚ್ಚು ಮಂದಿ ಸೇರಿದಂತೆ ಈ ಬಾರಿಯ ದೀಪಾವಳಿಗೆ ಒಟ್ಟು 69 ಮಂದಿ ಪಟಾಕಿಯಿಂದ ಗಾಯಗೊಂಡಿದ್ದಾರೆ. ಅವರಲ್ಲಿ ಏಳು ಪ್ರಕರಣಗಳು ಗಂಭೀರವಾಗಿವೆ. ಈಗಾಗಲೇ ಸಾದಿಕಾ (13) ಹಾಗೂ ಮೌನೇಶ (7) ಎಂಬುವವರು ಸಂಪೂರ್ಣ ದೃಷ್ಟಿ ಕಳೆದುಕೊಂಡಿದ್ದು, ಅವರ ಬಾಳಲ್ಲಿ ಅಂಧಕಾರ ಮೂಡಿದಂತಾಗಿದೆ.

ಈ ಪೈಕಿ ಚಾಮರಾಜಪೇಟೆಯ ಮಿಂಟೋ ಆಸ್ಪತ್ರೆಯಲ್ಲಿ 29 ಮಂದಿ (4 ಗಂಭೀರ), ನಾರಾಯಣ ನೇತ್ರಾಲಯಗಳಲ್ಲಿ 30 (2ಗಂಭೀರ), ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ ನಾಲ್ಕು, ಮೋದಿ ಕಣ್ಣಿನ ಆಸ್ಪತ್ರೆಯಲ್ಲಿ 3, ನೇತ್ರದಾಮದಲ್ಲಿ 3 ಮಂದಿ ಚಿಕಿತ್ಸೆ ಪಡೆದಿದ್ದಾರೆ. ಕಣ್ಣಿಗೆ ಗಂಭೀರ ಹಾನಿ ಮಾಡಿಕೊಂಡಿರುವ ಏಳು ಮಂದಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಉಳಿದಂತೆ ಸಣ್ಣಪುಟ್ಟ ಗಾಯಗಳಾದವರು ಹೊರರೋಗಿಗಳಾಗಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ ಎಂದು ಆಸ್ಪತ್ರೆಗಳ ವೈದ್ಯರು ತಿಳಿಸಿದ್ದಾರೆ. 

ಗುರುವಾರ ವರದಿಯಾದ ಪ್ರಕರಣಗಳಲ್ಲಿ ದೊಡ್ಡ ಬಳ್ಳಾಪುರ ಬಳಿಯ ನಿವಾಸಿ ಅವಿನಾಶ್‌ (7) ಹಾಗೂ ವಾಸುದೇವ ಎಂಬುವವರ ವ್ಯಕ್ತಿಗಳ ಕಣ್ಣಿಗೆ ತೀವ್ರ ಹಾನಿ ಉಂಟಾಗಿದೆ. ಮತ್ತೂಂದು ಪ್ರಕರಣದಲ್ಲಿ ಸೈಯದ್‌ (3) ಎಂಬ ಬಾಲಕನಿಗೆ ಯಾರೋ ಸಿಡಿಸಿದ ಪಟಾಕಿ ತಗುಲಿ ಕಣ್ಣಿಗೆ ಗಾಯವಾಗಿದೆ ಎಂದು ಮಿಂಟೋ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

40ಕ್ಕೂ ಹೆಚ್ಚು ಮಕ್ಕಳು: ಈ ಬಾರಿ ದೀಪಾವಳಿ ಪಟಾಕಿಯಿಂದ ಹಾನಿಗೊಳಗಾದ 66 ಮಂದಿಯಲ್ಲಿ 40ಕ್ಕೂ ಹೆಚ್ಚು ಮಂದಿ ಮಕ್ಕಳೇ ಇರುವುದು ಬೇಸರದ ಸಂಗತಿ. ಮಿಂಟೋ ಆಸ್ಪತ್ರೆಯಲ್ಲಿ 26 ಮಂದಿ ಚಿಕಿತ್ಸೆ ಪಡೆದಿದ್ದು, ಅವರಲ್ಲಿ 18 ಮಂದಿ ಮಕ್ಕಳೇ ಆಗಿದ್ದಾರೆ.

ಅದರಲ್ಲೂ 10 ವರ್ಷದೊಳಗಿನ 12 ಮಕ್ಕಳು ಪಟಾಕಿಯಿಂದ ಹಾನಿ ಮಾಡಿಕೊಂಡಿದ್ದಾರೆ. ಇಲ್ಲಿನ 16ಕ್ಕೂ ಹೆಚ್ಚು ಮಂದಿ ಬೇರೊಬ್ಬರು ಸಿಡಿಸಿದ ಪಟಾಕಿಯಿಂದ ತಮ್ಮದಲ್ಲದ ತಪ್ಪಿಗೆ ನೋವನ್ನು ಅನುಭವಿಸುತ್ತಿದ್ದಾರೆ. ಇನ್ನು ಮುಖ್ಯವಾಗಿ ಲಕ್ಷ್ಮೀ ಪಟಾಕಿ, ಹೂವಿನ ಕುಂಡ, ಆಟಂಬಾಂಬ್‌ ಸಿಡಿತದಿಂದಲೇ ಬಹುತೇಕರಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.

ಮೊದಲೆರಡು ದಿನಗಳಿಗಿಂತ ಮೂರನೇ ದಿನ ಹೆಚ್ಚು ಮಂದಿ ಹಾನಿ ಮಾಡಿಕೊಂಡಿದ್ದಾರೆ. ಆಸ್ಪತ್ರೆಯಲ್ಲಿ ಒಟ್ಟು 26 ಮಂದಿ ಚಿಕಿತ್ಸೆ ಪಡೆದಿದ್ದಾರೆ. ಇವರಲ್ಲಿ 4 ಮಂದಿಗೆ ಗಂಭೀರ ಗಾಯವಾಗಿದ್ದು, ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ. ಅವಗಡದಲ್ಲಿ ಕಾರ್ನಿಯಾ ಸಂಬಂಧಿಸಿದಂತೆ ಹಾನಿಯಾಗಿದ್ದರೆ, ಅವರಿಗೆ ದೃಷ್ಟಿ ಮರಳು ಸಾಧ್ಯತೆ ತೀರ ಕಡಿಮೆ.
-ಡಾ. ಸುಜಾತಾ ರಾಥೋಡ್‌, ನಿರ್ದೇಶಕಿ ಮಿಂಟೋ ಆಸ್ಪತ್ರೆ.

ಟಾಪ್ ನ್ಯೂಸ್

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.