ಅಮಾಯಕನ ಕೊಂದವರ ಬಂಧನಕ್ಕೆ ಗುಂಡೇಟು

Team Udayavani, Nov 12, 2018, 11:55 AM IST

amayakana.jpg

ಬೆಂಗಳೂರು: ದಾರಿ ಕೇಳಿದ ಯುವಕನನ್ನು ವೈರಿ ಗುಂಪಿನ ಕಡೆಯವನು ಎಂದು ಭಾವಿಸಿ ಕೊಲೆಗೈದು ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳಿಗೆ ಗುಂಡೇಟಿನ ರುಚಿ ತೋರಿಸಿರುವ ಕೆ.ಆರ್‌ ಪುರಂ ಠಾಣೆ ಪೊಲೀಸರು ಆರೋಪಿಗಳಿಬ್ಬರನ್ನು ಭಾನುವಾರ ಬಂಧಿಸಿದ್ದಾರೆ. 

ರೌಡಿಶೀಟರ್‌ ನವೀನ್‌ ಕುಮಾರ್‌ ಅಲಿಯಾಸ್‌ ಅಪ್ಪು, ಗಿರೀಶ್‌ ಅಲಿಯಾಸ್‌ ಗಿರಿ ಬಂಧಿತರು. ಕಳೆದ ಜನವರಿಯಿಂದ ಅಪರಾಧಿಕ ಕೃತ್ಯಗಳಲ್ಲಿ ತೊಡಗಿ ಬಂಧಿಸಲು ಹೋದ ವೇಳೆ ಪೊಲೀಸರ, ಮೇಲೆಯೇ ಹಲ್ಲೆಗೆ ಮುಂದಾದ ಆರೋಪಿಗಳ ಮೇಲೆ ಗುಂಡು ಹಾರಿಸಿ ಬಂಧಿಸಿದ 16ನೇ ಪ್ರಕರಣ ಇದಾಗಿದೆ. 

ಸೆ. 13ರಂದು ಚೇತನ್‌ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ನವೀನ್‌ ತಲೆಮರೆಸಿಕೊಂಡಿದ್ದ. ಆತನ ಬಂಧನಕ್ಕೆ ಕೆಆರ್‌ಪುರಂ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದರು. ಭಾನುವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ನವೀನ್‌ ಹಾಗೂ ಗಿರಿ ಕಾಟಿನಲ್ಲೂರ್‌ ಗೇಟ್‌ ಬಳಿ ಬೈಕ್‌ನಲ್ಲಿ ತೆರಳುತ್ತಿದ್ದ ಮಾಹಿತಿ ಮೇರೆಗೆ ಇನ್ಸ್‌ಪೆಕ್ಟರ್‌ ಜಯರಾಜು ನೇತೃತ್ವದ ತಂಡ ಬಂಧಿಸಲು ತೆರಳಿತ್ತು.

ಪೊಲೀಸರನ್ನು ಕಂಡ ಕೂಡಲೇ ಆರೋಪಿ ನವೀನ್‌ ತನ್ನ ಬಳಿಯಿದ್ದ ಪಿಸ್ತೂಲ್‌ನಿಂದ ಪೊಲೀಸ್‌ ವಾಹನದ ಮೇಲೆ ಮೂರು ಸುತ್ತು ಗುಂಡುಹೊಡೆದಿದ್ದಾನೆ. ಈ ವೇಳೆ ಇನ್ಸ್‌ಪೆಕ್ಟರ್‌ ಜಯರಾಜು, ತಮ್ಮ ಪಿಸ್ತೂಲ್‌ನಿಂದ ನವೀನ್‌ ಬಲಗಾಲಿಗೆ ಗುಂಡು ಹಾರಿಸಿದ್ದಾರೆ ಕೂಡಲೇ ಕೆಳಗೆ ಕುಸಿದು ಬಿದ್ದ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೂಬ್ಬ ಆರೋಪಿ ಗಿರೀಶ್‌ನನ್ನು ಹಿಡಿಯಲು ಹೋದ ಪೊಲೀಸ್‌ ಪೇದೆ ಮುನಿರಾಜುಗೆ ಡ್ರ್ಯಾಗರ್‌ನಿಂದ ಇರಿಯಲು ಯತ್ನಿಸಿದ್ದಾನೆ.

ಹೀಗಾಗಿ ಇನ್ಸ್‌ಪೆಕ್ಟರ್‌ ಪುನ: ಗಿರೀಶ್‌ ಕಾಲಿಗೂ ಗುಂಡು ಹೊಡೆದಿದ್ದಾರೆ. ಗುಂಡೇಟಿನಿಂದ ಗಾಯಗೊಂಡಿರುವ ಇಬ್ಬರು ಆರೋಪಿಗಳನ್ನು ಕೆ.ಆರ್‌ ಪುರಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಗಾಯಾಳು ಪೇದೆ ಮುನಿರಾಜು ಸತ್ಯ ಸಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾರಿ ಕೇಳಿದ್ದಕ್ಕೆ ಕೊಲೆಗೈದ ನವೀನ್‌ ಅಂಡ್‌ ಟೀಂ!” ಸೆ. 13ರಂದು ತುಮಕೂರು ಮೂಲದ ಚೇತನ್‌ (22) ಹೆಬ್ಟಾಳದ ”ಇಂಟರ್‌ನೆಟ್‌ ಗ್ಲೋಬಲ್‌ ಸರ್ವೀಸ್‌” ಕಂಪನಿಯ ಉದ್ಯೋಗಿ ತನ್ನ ಸ್ನೇಹಿತ ವಿನಯ್‌ನನ್ನು ಬಸವನಪುರದಲ್ಲಿ ಬಿಟ್ಟು ವಾಪಾಸ್‌ ಬರುವಾಗ ದಾರಿ ತಿಳಿಯದ ಚೇತನ ದೇವಸಂದ್ರ ರಸ್ತೆಗೆ ತೆರಳಿ ಅಲ್ಲೇ ಮದ್ಯ ಸೇವಿಸುತ್ತಾ ಕುಳಿತಿದ್ದ ನವೀನ್‌ ಹಾಗೂ ಆತನ ಸಹಚರರನ್ನು ದಾರಿ ಕೇಳಿದ್ದ.

ಅದೇ ದಿನ ಎದುರಾಳಿ ಗುಂಪಿನ ಹರೀಶ್‌ ಜತೆ ಜಗಳವಾಡಿಕೊಂಡಿದ್ದ ನವೀನ್‌, ಚೇತನ್‌ ನವೀನ್‌ ಕಡೆಯವನಿರಬಹುದು ಎಂದು ಭಾವಿಸಿ ಆತನ ಮೇಲೆ ಹಲ್ಲೆ ನಡೆಸಿದ್ದ. ಜತೆಗೆ, ತನ್ನ ಮನೆಗೆ ಕರೆತಂದು ಸ್ನೇಹಿತರ ಜತೆಗೂಡಿ ಚೇತನ್‌ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೈದು ದೊಡ್ಡದೇನಹಳ್ಳಿಯ ನೀಲಗಿರಿ ತೋಪಿನಲ್ಲಿ ಮೃತದೇಹವನ್ನು ಸುಟ್ಟು ಹಾಕಿದ್ದರು. ಸೆ.15 ವಾಯುವಿಹಾರಕ್ಕೆ  ಬಂದ ಸ್ಥಳೀಯರು ಅರೆ ಬೆಂದ ಮೃತದೇಹ ನೋಡಿ ಪೊಲೀಸರಿಗೆ ತಿಳಿಸಿದ್ದರು. ತನಿಖೆ ನಡೆಸಿದ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದರು.

ಕಾರ್ಪೋರೇಟರ್‌ ಪತಿ ಹತ್ಯೆ ಆರೋಪಿ ನವೀನ್‌!: ಆರೋಪಿ ನವೀನ್‌ ಕುಮಾರ್‌, ಬಿಬಿಎಂಪಿಯ ಮಾಜಿ ಸದಸ್ಯೆ ಮಂಜುಳಾದೇವಿ ಪತಿ ಸಿರ್‌ಪುರ ಶ್ರೀನಿವಾಸ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದಿದ್ದ. ಆತನ ಎರಡು ಹಲ್ಲೆ ಪ್ರಕರಣಗಳು ದಾಖಲಾಗಿವೆ.

ಮತ್ತೂಬ್ಬ ಆರೋಪಿ ಗಿರಿ, ಬನಶಂಕರಿ 3ನೇ ಹಂತದ ಬಡಾವಣೆ ವಾಸವಾಗಿದ್ದ ಉದ್ಯಮಿ ನವಮಣಿಯನ್ನು ಬರ್ಬರವಾಗಿ ಕೊಲೆಗೈದ ಪ್ರಕರಣದಲ್ಲಿ ಮೂರು ವರ್ಷ ಜೈಲಿನಲ್ಲಿದ್ದು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಬಳಿಕ ನವೀನ್‌ ಜತೆ ಸೇರಿಕೊಂಡು ಅಪರಾಧಿಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.