ಇಂಥ ನೀಚ ಕೆಲಸಕ್ಕೆ ಕೈ ಹಾಕಬಾರದಿತ್ತು


Team Udayavani, Dec 6, 2018, 11:43 AM IST

intha-ne.jpg

ಬೆಂಗಳೂರು: ಕಾಂಗ್ರೆಸ್‌ ಶಾಸಕರನ್ನು ಸೆಳೆಯಲು ಬಿಜೆಪಿ ನಾಯಕರು ಪ್ರಯತ್ನ ನಡೆಸಿದ್ದಾರೆ ಎನ್ನಲಾದ ಧ್ವನಿಸುರಳಿ ಸಂಬಂಧ ಕಾನೂನು ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್‌, ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿರುವ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ ಅವರು ತಿರುಗೇಟು ನೀಡಿದ್ದಾರೆ.

ಸಾಮಾಜಿಕ ಜಾಲತಾಣ “ಫೇಸ್‌ಬುಕ್‌’ನಲ್ಲಿ ಈ ಬಗ್ಗೆ ಪ್ರಸ್ತಾಪಿಸಿರುವ ಶೋಭಾ ಕರಂದ್ಲಾಜೆ, “ಕಾಂಗ್ರೆಸ್‌ ಇಷ್ಟು ನೀಚ ಕೆಲಸಕ್ಕೆ ಕೈ ಹಾಕಬಾರದಿತ್ತು. ಕಾಂಗ್ರೆಸ್‌ ನೇತಾರರು ತಮ್ಮ ಪಕ್ಷದ ಶಾಸಕರನ್ನೇ ನಿಯಂತ್ರಿಸಲಾಗದಷ್ಟು ಅಸಹಾಯಕರಾಗಿದ್ದಾರೆ. ಅದಕ್ಕಾಗಿ ಈ ಎಲ್ಲಾ ಗಿಮಿಕ್‌ ಮಾಡುತ್ತಿದ್ದಾರೆ. ತಮ್ಮ ಪಕ್ಷದಲ್ಲಿನ ಲೋಪಗಳನ್ನು ಮುಚ್ಚಿಕೊಳ್ಳಲು ಹಾಗೂ ಜನರ ಅನುಕಂಪ ಗಿಟ್ಟಿಸಿಕೊಳ್ಳಲು ಸಮ್ಮಿಶ್ರ ಸರ್ಕಾರ ಈ ರೀತಿಯಲ್ಲಿ ಹುನ್ನಾರ ನಡೆಸಿದೆ ಎಂದು ದೂರಿದ್ದಾರೆ.

ಹಾಗೆಯೇ ಸಾಧನಾಹೀನ ಸರ್ಕಾರ ತನ್ನ ವೈಫ‌ಲ್ಯವನ್ನು ಮರೆಮಾಚಲು ಮತ್ತು ನಾಡಿನ ಜನತೆಯ ಗಮನವನ್ನು ಬೇರೆಡೆಗೆ ಸೆಳೆಯಲು ಇಂತಹ ಹೀನ ಕೃತ್ಯಕ್ಕೆ ಮುಂದಾಗಿದೆ. ನಕಲಿ ಕಾಂಗ್ರೆಸ್ಸಿಗರು ನಕಲಿ ಧ್ವನಿ ಸೃಷ್ಟಿಸಿ ಹಾಗೂ ನಕಲಿ ದೂರನ್ನು ಅವರೇ ನೀಡಿದ್ದಾರೆ. ಈ ನಕಲಿ ಕಾಂಗ್ರೆಸ್ಸಿಗರ ದುಷ್ಕೃತ್ಯವನ್ನು ಸಮಗ್ರ ತನಿಖೆ ಕೈಗೊಳ್ಳಬೇಕೆಂದು ಈ ಮೂಲಕ ಆಗ್ರಹ ಪಡಿಸುತ್ತೇನೆ ಎಂದು ಒತ್ತಾಯಿಸಿದ್ದಾರೆ.

ಈ ಬಾರಿ ಸುನಾಮಿ ಎದ್ರೂ ಅಚ್ಚರಿಯಿಲ್ಲ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧರ್ಮಸ್ಥಳಕ್ಕೆ ಹೋದಾಗ ಕಂಪನವಾಗಿತ್ತು. ವಿದೇಶಕ್ಕೆ ಹೋದಾಗ ಮತ್ತೂಂದು ಕಂಪನವಾಯ್ತು. ಈ ರೀತಿ ಒಮ್ಮೆಮ್ಮೆ ಕಂಪನದ ತೀವ್ರತೆ 5.2ರಷ್ಟಿದ್ದು, ಮತ್ತೂಮ್ಮೆ 6.2ರಷ್ಟು ಆಗಿತ್ತು. ಈ ಸಲ ಕಂಪನ ತೀವ್ರತೆ 7 ದಾಟಿದರೂ ಆಶ್ಚರ್ಯ ಇಲ್ಲ. ಸುನಾಮಿ ಕೂಡ ಏಳಬಹುದು.

38 ಸ್ಥಾನ ಗೆದ್ದವರು ಮುಖ್ಯಮಂತ್ರಿಯಾಗುತ್ತಾರೆ ಅಂದ ಮೇಲೆ ಹೆಚ್ಚು ಸಂಖ್ಯಾ ಬಲ ಇರೋ ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿ ಆಗಲ್ವ? ಎಂದು ಪ್ರಶ್ನಿಸಿರುವ ಮಾಜಿ ಉಪಮುಖ್ಯಮಂತ್ರಿ ಆರ್‌. ಅಶೋಕ,  ಜಾತಕದಲ್ಲಿ ಬಿಎಸ್‌ವೈ ಸಿಎಂ ಆಗೇ ಆಗುತ್ತಾರೆ ಎಂದಿದೆ. ಅವರು ಇಂಜಿನ್‌ ಅಂದ ಮೇಲೆ ನಾವು ಬೋಗಿ ಥರಾ. ನಮಗೂ ಸ್ಥಾನ ಸಿಕ್ಕೆ ಸಿಗುತ್ತೆ ಎಂದು ಹೇಳಿದ್ದಾರೆ.

ಹೊಗೆ ಕಾಣಿಸುತ್ತಿದೆ ಎಂದರೆ ಸ್ಫೋಟ ಆಗೋದರಲ್ಲಿ ಅನುಮಾನವಿಲ್ಲ. ಸಚಿವ ಸಂಪುಟ ವಿಸ್ತರಣೆಯೂ ಇಲ್ಲ, ಸರ್ಕಾರ ಟೇಕ್‌ಆಫ್ ಕೂಡ ಆಗಿಲ್ಲ. 104 ಶಾಸಕರ ಸಂಖ್ಯಾಬಲ ಬಿಜೆಪಿ ಪಡೆದಿದೆ. ಜನರ ಕಣ್ಣೀರೊರೆಸಬೇಕಾದ ಸರ್ಕಾರವೇ ಕಣ್ಣೀರು ಹಾಕ್ತಿದೆ. ಬಿಜೆಪಿಯ ಹೆಸರು ಹೇಳಿಕೊಂಡು ಸರ್ಕಾರ ನಡೆಯುತ್ತಿದೆ.
-ತೇಜಸ್ವಿನಿಗೌಡ, ವಿಧಾನ ಪರಿಷತ್‌ ಸದಸ್ಯೆ

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.