ಹಲ್ಲೆ ಪ್ರಕರಣ: ಐವರ ಬಂಧನ

Team Udayavani, Dec 20, 2018, 12:13 PM IST

arrest2.jpg

ಬೆಂಗಳೂರು: ಸಹೋದರನ ಪತ್ನಿ ಮತ್ತು ಪುತ್ರಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಆರೋಪ ಪ್ರಕರಣದಲ್ಲಿ ಮಾಜಿ ಕಾರ್ಪೊರೇಟರ್‌ ನಾಗರಾಜ್‌ ಮತ್ತು ಈತನ ಪುತ್ರ ಶಾಸ್ತ್ರೀ ಸೇರಿದಂತೆ ಐವರನ್ನು ಶ್ರೀರಾಮಪುರ ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ದಾಖಲಾದ ದೂರಿನ ಅನ್ವಯ ನಾಗರಾಜ್‌, ಪುತ್ರ ಶಾಸ್ತ್ರೀ, ಸಹಚರರಾದ ಶರವಣ, ಮೊಸಾಸ್‌ ಹಾಗೂ ತಮಿಳುನಾಡಿನಲ್ಲಿ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದ ಮೇಲೆ ಕುಪ್ಪಸ್ವಾಮಿ ಎಂಬಾತನನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡಿರುವ ನಾಗನ ಪುತ್ರ ಗಾಂಧಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಕುಟುಂಬದ ಆಸ್ತಿ ವಿಚಾರವಾಗಿ ನಾಗರಾಜ್‌ ಮತ್ತು ಈತನ ಸಹೋದರ ಧರ್ಮ ನಡುವೆ ಕೆಲ ವರ್ಷಗಳಿಂದ ಜಗಳ ನಡೆಯುತ್ತಿತ್ತು. ಇದೇ ವಿಚಾರವಾಗಿ ಒಂದೆರಡು ಬಾರಿ ಧರ್ಮನ ಮೇಲೆ ನಾಗರಾಜ್‌ ಹಲ್ಲೆ ಕೂಡ ನಡೆಸಿದ್ದ. ಒಂದು ವರ್ಷದ ಹಿಂದೆ ಧರ್ಮ ಮೃತಪಟ್ಟಿದ್ದ.

ಬಳಿಕ ಧರ್ಮನ ಪತ್ನಿ ಚಾಮುಂಡೇಶ್ವರಿಯಿಂದ ಆಸ್ತಿ ಕಬಳಿಸಲು ನಾಗರಾಜ್‌ ಯತ್ನಿಸುತ್ತಿದ್ದ. ಆ ಹಿನ್ನೆಲೆಯಲ್ಲಿ ಆರೋಪಿ ತನ್ನ ಸಹಚರರ ಜತೆ ಸೇರಿ ನ.25ರಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಚಾಮುಂಡೇಶ್ವರಿ, ಪುತ್ರಿ ಶ್ವೇತಾ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದರು.

ಪೊಲೀಸರ ವಶಕ್ಕೆ ನೀಡಬೇಡಿ ಸ್ವಾಮಿ..: ನಾಗ ಸೇರಿದಂತೆ ಇತರೆ ಆರೋಪಿಗಳನ್ನು ಬುಧವಾರ ಕೋರ್ಟ್‌ಗೆ ಹಾಜರು ಪಡಿಸಿ ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿದರು. ಈ ವೇಳೆ ನಾಗರಾಜ್‌, “ದಯವಿಟ್ಟು ಪೊಲೀಸರ ವಶಕ್ಕೆ ಕೊಡಬೇಡಿ ಸ್ವಾಮಿ. ನನ್ನನ್ನು ವಿಚಾರಣೆ ನೆಪದಲ್ಲಿ ಕೊಂದು ಬಿಡುತ್ತಾರೆ ಎಂದು ಗೋಳಾಡಿದ್ದ”

ಆದರೆ, ಪ್ರಕರಣ ಗಂಭೀರ ಸ್ವರೂಪವಾಗಿದ್ದು, ಗಾಯಾಳುಗಳು ಇನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ವಶಕ್ಕೆ ನೀಡುವಂತೆ ಕೋರ್ಟ್‌ಗೆ ಪೊಲೀಸರು ಮತ್ತೂಮ್ಮೆ ಮನವಿ ಮಾಡಿದರು. ಮನವಿ ಪುರಸ್ಕರಿಸಿದ ನ್ಯಾಯಾಲಯ ಆರೋಪಿಗಳನ್ನು ನಾಲ್ಕು ದಿನಗಳ ಕಾಲ ಪೊಲೀಸ್‌ ವಶಕ್ಕೆ ನೀಡಿ ಆದೇಶ ನೀಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು. 

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.