ಬಫ‌ರ್‌ ವ್ಯಾಪ್ತಿಯ ಭಯವಿಲ್ಲ!


Team Udayavani, Jan 11, 2019, 6:41 AM IST

buffer.jpg

ಬೆಂಗಳೂರು: ನಗರದಲ್ಲಿನ ಕೆರೆಗಳ ಅಂಚಿನಿಂದ 75 ಮೀಟರ್‌ ಸ್ಥಳವನ್ನು ಬಫ‌ರ್‌ ಜೋನ್‌ ಎಂದು ಗುರುತಿಸಿ, ಆ ವ್ಯಾಪ್ತಿಯಲ್ಲಿ ಯಾವುದೇ ನಿರ್ಮಾಣ ಕಾಮಗಾರಿ ನಡೆಸುವಂತಿಲ್ಲ ಎಂದು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ನೀಡಿದ್ದ ಆದೇಶ ಉಲ್ಲಂ ಸಿದವರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಪಾಲಿಕೆ ವಿಫ‌ಲವಾಗಿದೆ.

ಕೆರೆಗಳ ಅಸಮರ್ಪಕ ನಿರ್ವಹಣೆ ಹಾಗೂ ಒತ್ತುವರಿಗೆ ಕಡಿವಾಣ ಹಾಕುವಲ್ಲಿ ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಸಂಸ್ಥೆಗಳು ವಿಫ‌ಲವಾದ ಹಿನ್ನೆಲೆಯಲ್ಲಿ, ಕೆರೆಗಳ ಅಂಚಿನಿಂದ 75 ಮೀಟರ್‌ ಬಫ‌ರ್‌ ವ್ಯಾಪ್ತಿ ಕಾಯ್ದುಕೊಳ್ಳಬೇಕೆಂದು 2016ರ ಮೇ 4ರಂದು ಎನ್‌ಜಿಟಿ ಮಹತ್ವದ ಆದೇಶ ಹೊರಡಿಸಿತ್ತು. ಆದರೆ, ಪಾಲಿಕೆ ಮಾತ್ರ ಆದೇಶವನ್ನು ಸಮರ್ಪಕವಾಗಿ ಜಾರಿಗೊಳಿಸುವ ಆಸಕ್ತಿ ತೋರುತ್ತಿಲ್ಲ.

ಎನ್‌ಜಿಟಿ ಆದೇಶ ಹೊರಡಿಸಿ ಎರಡು ವರ್ಷಗಳು ಕಳೆಯುತ್ತಿವೆ. ಆದರೆ, ನಗರದ ಹಲವಾರು ಭಾಗಗಳಲ್ಲಿ ಕೆರೆಯ 75 ಮೀಟರ್‌ ವ್ಯಾಪ್ತಿಯಲ್ಲೇ ಹೊಸದಾಗಿ ಕಟ್ಟಡಗಳು ನಿರ್ಮಾಣವಾಗುತ್ತಿವೆ. ಆದರೆ, ಪಾಲಿಕೆ ಅಧಿಕಾರಿಗಳು ಮಾತ್ರ ಕಟ್ಟಡ ನಿರ್ಮಾಣ ತಡೆಯಲು ಮುಂದಾಗುತ್ತಿಲ್ಲ. ಇನ್ನು ಕೆಲವು ಕಡೆ ಬಫ‌ರ್‌ ವ್ಯಾಪ್ತಿಯೆಂದು ತಿಳಿದಿದ್ದರೂ ಕಟ್ಟಡ ನಕ್ಷೆ ಮಂಜೂರು ಮಾಡಲಾಗಿದೆ.

ಕೆರೆಗಳ ಸಂರಕ್ಷಣೆಯ ಉದ್ದೇಶದಿಂದ ಎನ್‌ಜಿಟಿ ನೀಡಿದ್ದ ಆದೇಶ ಪಾಲನೆಗೆ ಬಿಬಿಎಂಪಿ ಮುಂದಾಗಿತ್ತು. ಆ ಹಿನ್ನೆಲೆಯಲ್ಲಿ ಕೆರೆಯಿಂದ 75 ಮೀಟರ್‌ ವ್ಯಾಪ್ತಿಯನ್ನು ಬಫ‌ರ್‌ ಜೋನ್‌ ಎಂದು ಪರಿಗಣಿಸಬೇಕು ಹಾಗೂ ಈ ವ್ಯಾಪ್ತಿಯಲ್ಲಿ ಯಾವುದೇ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರು ಮಾಡಕೂಡದು ಎಂದು ಬಿಬಿಎಂಪಿ ಆಯುಕ್ತರು ಆದೇಶ ಹೊರಡಿಸಿದ್ದರು. ಆದರೆ, ಆಯುಕ್ತರು ಹೊರಡಿಸಿದ ಆದೇಶ, ಕಾಗದಕ್ಕೆ ಸೀಮಿತವಾಗಿದ್ದು, ಬಫ‌ರ್‌ ಜೋನ್‌ನಲ್ಲಿ ಕಟ್ಟಡಗಳು ನಿರ್ಮಾಣವಾಗುತ್ತಲೇ ಇವೆ.

ಅಕ್ರಮ-ಸಕ್ರಮ ಸಮಸ್ಯೆ: ನಗರದಲ್ಲಿ ಈಗಾಗಲೇ ಕಟ್ಟಡ ನಿಯಮಗಳನ್ನು ಗಾಳಿಗೆ ತೂರಿ, ಪ್ರತಿ ಕಟ್ಟಡಗಳಿಗೂ ಸೆಟ್‌ಬ್ಯಾಕ್‌ ಬಿಡದೆ ಲಕ್ಷಾಂತರ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಆ ಹಿನ್ನೆಲೆಯಲ್ಲಿ ಅವುಗಳನ್ನು ಸಕ್ರಮಗೊಳಿಸಲು ಸರ್ಕಾರ ಮುಂದಾದರೂ, ವಿಷಯ ನ್ಯಾಯಾಲಯದಲ್ಲಿರುವ ಕಾರಣ, ಈವರೆಗೆ ಅವುಗಳನ್ನು ಸಕ್ರಮದ ವ್ಯಾಪ್ತಿಗೆ ತರಲು ಸಾಧ್ಯವಾಗುತ್ತಿಲ್ಲ. ಇದೀಗ ಬಫ‌ರ್‌ ವ್ಯಾಪ್ತಿಯಲ್ಲಿ ಕಟ್ಟಡಗಳು ನಿರ್ಮಾಣವಾಗುತ್ತಿರುವುದು ಮುಂದೊಂದು ದಿನ ಅಕ್ರಮ-ಸಕ್ರಮ ಸಮಸ್ಯೆ ಉಂಟು ಮಾಡಲಿದೆ. 

ಅಧಿಕಾರಿಗಳ ಕುಮ್ಮಕ್ಕು: ಎನ್‌ಜಿಟಿ ಆದೇಶ ಹೊರಡಿಸುವುದಕ್ಕೂ ಮೊದಲೇ ಕಟ್ಟಡ ನಕ್ಷೆ ಪಡೆದು ಕಟ್ಟಡ ನಿರ್ಮಿಸದವರಿಗೆ ಅನುಮತಿ ನೀಡಬೇಕೆ ಬೇಡವೇ? ಹಾಗೂ ಈಗಾಗಲೇ ಕಟ್ಟಡ ನಿರ್ಮಿಸಿಕೊಂಡವರಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ ನೀಡಬೇಕೇ ಬೇಡವೇ ಎಂಬ ಕುರಿತು ಹಲವಾರು ಗೊಂದಲಗಳಿವೆ. ಈ ಹಿನ್ನೆಲೆಯಲ್ಲಿ ಆಸ್ತಿಯ ಮಾಲೀಕರಿಗೆ ಪಾಲಿಕೆಯ ಅಧಿಕಾರಿಗಳೇ ಅನಧಿಕೃತವಾಗಿ ಕಟ್ಟಡ ನಿರ್ಮಿಸಿಕೊಳ್ಳುವಂತೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. 

34 ಸಾವಿರ ಫ್ಲಾಟ್‌ಗಳಿಗೆ ಸಂಕಷ್ಟ: ಎನ್‌ಜಿಟಿ ಆದೇಶದಿಂದಾಗಿ ನಗರದ 9 ವಲಯಗಳಲ್ಲಿ 152 ಪ್ರಮುಖ ಯೋಜನೆಗಳ 34,853 ಫ್ಲಾಟ್‌ಗಳು (ಯುನಿಟ್‌ಗಳು) ಸಂಕಷ್ಟ ಎದುರಿಸುವಂತಾಗಿದೆ. ಎನ್‌ಜಿಟಿ ಆದೇಶಕ್ಕೆ ಮೊದಲು ನಕ್ಷೆ ಪಡೆದು ಕಾಮಗಾರಿ ಆರಂಭಿಸದ, ಕಾಮಗಾರಿ ಪೂರ್ಣಗೊಳಿಸಿ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯದ ಹಾಗೂ ಹೊಸ ಕಟ್ಟಡಕ್ಕೆ ಅನುಮತಿ ಕೋರಿ ಅರ್ಜಿ ಸಲ್ಲಿಸಿರುವವರಿಗೆ ಪಾಲಿಕೆಯಿಂದ ಯಾವುದೇ ಅನುಮತಿ ಹಾಗೂ ಪ್ರಮಾಣ ಪತ್ರ ನೀಡಲು ಬರುವುದಿಲ್ಲ. ಇದರಿಂದಾಗಿ ಜನ ತೊಂದರೆ ಅನುಭವಿಸುವಂತಾಗಿದೆ.

ಮರು ಪರಿಶೀಲನೆಗೆ ಅರ್ಜಿ?: ಬೆಂಗಳೂರು ನಗರಕ್ಕೆ ಅನ್ವಯವಾಗುವಂತೆ ಮಾತ್ರ ಕೆರೆಯಿಂದ 75 ಮೀಟರ್‌ ಬಫ‌ರ್‌ ವ್ಯಾಪ್ತಿ ಎಂದು ಎನ್‌ಜಿಟಿ ಆದೇಶಿಸಿದೆ. ಆದರೆ, ದೆಹಲಿ ಸೇರಿದಂತೆ ಇತರೆ ಪ್ರಮುಖ ನಗರಗಳಲ್ಲಿ ಈ ವ್ಯಾಪ್ತಿ 15-20 ಮೀಟರ್‌ಗೆ ನಿಗದಿಪಡಿಸಲಾಗಿದೆ. ಜತೆಗೆ ಕೆರೆಯಿಂದ 75 ಮೀಟರ್‌ ಜಾರಿಗೊಳಿಸಲು ಮುಂದಾದರೆ ಲಕ್ಷಾಂತರ ಜನರಿಗೆ ತೊಂದರೆಯಾಗುತ್ತದೆ. ಹೀಗಾಗಿ ಆದೇಶವನ್ನು ಮರು ಪರಿಶೀಲಿಸುವಂತೆ ಎನ್‌ಜಿಟಿಯನ್ನು ಕೋರುವುದಾಗಿ ಈ ಹಿಂದೆ ಉಪಮುಖ್ಯಮಂತ್ರಿಗಳು ತಿಳಿಸಿರುವುದು ಮತ್ತಷ್ಟು ಅನಧಿಕೃತ ಕಟ್ಟಡಗಳ ನಿರ್ಮಾಣಕ್ಕೆ ದಾರಿ ಮಾಡಿಕೊಟ್ಟಂತಾಗಿದೆ.

ಎನ್‌ಜಿಟಿ ಆದೇಶದಲ್ಲೇನಿದೆ?: ಕೆರೆಗಳ ಸಂರಕ್ಷಣೆಗಾಗಿ ಕೆರೆಯ ಅಂಚಿನಿಂದ 75 ಮೀಟರ್‌, ಪ್ರಾಥಮಿಕ ಕಾಲುವೆಯ ಅಂಚಿನಿಂದ 50 ಮೀಟರ್‌, ದ್ವೀತಿಯ ಕಾಲುವೆಯ ತಡೆಗೋಡೆಯಿಂದ 35 ಮೀಟರ್‌ ಹಾಗೂ ತೃತೀಯ ಕಾಲುವೆ ಅಂಚಿನಿಂದ 25 ಮೀಟರ್‌ ಪ್ರದೇಶವನ್ನು ಬಫ‌ರ್‌ ವ್ಯಾಪ್ತಿ ಎಂದು ಕಾಯ್ದಿರಿಸಬೇಕು. ಬಫ‌ರ್‌ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಕಟ್ಟಡ ನಿರ್ಮಾಣ ಕಾರ್ಯ ನಡೆಸುವಂತಿಲ್ಲ ಎಂದು ಎನ್‌ಜಿಟಿ ಆದೇಶ ನೀಡಿದೆ.

* ವೆಂ.ಸುನೀಲ್‌ಕುಮಾರ್‌

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.