ಸಿರಿಧಾನ್ಯಕ್ಕೆ ಉತ್ತಮ ಮಾರುಕಟ್ಟೆ ಗುರಿ

Team Udayavani, Jan 16, 2019, 6:25 AM IST

siridanya.jpg

ಬೆಂಗಳೂರು: ಸಾವಯವ ಕೃಷಿ ಹಾಗೂ ಸಿರಿಧಾನ್ಯಗಳಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಮತ್ತು ಮಾರುಕಟ್ಟೆ ಒದಗಿಸಲು ಇದೇ ಜ. 18ರಿಂದ 20ರವರೆಗೆ ಸಾವಯವ-ಸಿರಿಧಾನ್ಯ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ಸಚಿವ ಎನ್‌.ಎಚ್‌. ಶಿವಶಂಕರರೆಡ್ಡಿ ಹೇಳಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಬಿಬಿಎಂಪಿ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಲಾಲ್‌ಬಾಗ್‌ನಲ್ಲಿ ಹಮ್ಮಿಕೊಂಡಿದ್ದ “ಸುಗ್ಗಿ-ಹುಗ್ಗಿ: ಸಿರಿ ಧಾನ್ಯಗಳೊಂದಿಗೆ ಸಂಕ್ರಾಂತಿ ಸಂಭ್ರಮ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಾವಯವ ಕೃಷಿ ಹಾಗೂ ಸಿರಿಧಾನ್ಯಗಳಲ್ಲಿ ಕರ್ನಾಟಕ ಇಡೀ ದೇಶದಲ್ಲಿ ಮುಂಚೂಣಿಯಲ್ಲಿದೆ. ಕೃಷಿ ನೀತಿಯಲ್ಲಿ ಇದಕ್ಕೆ ಸಾಕಷ್ಟು ಒತ್ತು ನೀಡಲಾಗಿದೆ.

ಅದಕ್ಕೆ ಪೂರಕವಾಗಿ ಸರ್ಕಾರ ಹಲವು ಯೋಜನೆ ಮತ್ತು ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಈಗ ಅದಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಕೊಟ್ಟು ಮಾರುಕಟ್ಟೆ ಒದಗಿಸಲು ಬೆಂಗಳೂರಿನ ಅರಮನೆ ಮೈದಾನದಲ್ಲಿ 3 ದಿನಗಳ ಅಂತರರಾಷ್ಟೀಯ ಮಟ್ಟದ ಮೇಳ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

ಭಾರತೀಯ ಸಂಸ್ಕೃತಿಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ನಮ್ಮದೇ ಆದ ಸಂಸ್ಕೃತಿ, ಕೃಷಿ, ಸಂಪ್ರದಾಯವಿದೆ. ಆದರೆ, ಈಗಿನ ಆಧುನಿಕ ಕೃಷಿ ನೆಪದಲ್ಲಿ ವಿದೇಶಿ ಆಹಾರ ಪದಾರ್ಥಗಳ ಬಳಕೆ ಹೆಚ್ಚಾಗಿದೆ. ಇದು ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಹಾಗಾಗಿ, ಸಾವಯವ ಕೃಷಿ ಪದ್ಧತಿ ಹಾಗೂ ಸಿರಿಧಾನ್ಯಗಳಿಗೆ ಮರಳಬೇಕಾಗಿದೆ ಎಂದರು.

ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ಎಂ. ಮಹೇಶ್ವರ ರಾವ್‌, ಆಯುಕ್ತ ಡಾ. ಕೆ.ಜಿ. ಜಗದೀಶ್‌, ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಬಿ. ಕಾಟಪ್ಪ ಕಣ್ಣೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಬಲವಂತರಾವ್‌ ಪಾಟೀಲ್‌ ಮತ್ತಿತರರು ಇದ್ದರು.

ಸುಗ್ಗಿ-ಹುಗ್ಗಿ ಸಂಭ್ರಮ: ಸುಗ್ಗಿ-ಹುಗ್ಗಿ ಸಂಭ್ರಮದ ಪ್ರಯುಕ್ತ ಲಾಲ್‌ಬಾಗ್‌ನ ಮುಖ್ಯದ್ವಾರದ ಪರಿಸರದಲ್ಲಿ ಕರಾವಳಿ-ಮಲೆನಾಡು, ಹಳೆ ಮೈಸೂರು, ಬಯಲುಸೀಮೆ, ಮುಂಬೈ ಕರ್ನಾಟಕ ಹಾಗೂ ಹೈದರಾಬಾದ್‌ ಕರ್ನಾಟಕ ಭಾಗದ ಸಂಪ್ರಾದಾಯಿಕ ಬೆಳೆಗಳು, ಅಲ್ಲಿನ ಕಲೆ-ಸಂಸ್ಕೃತಿ, ಸಂಪ್ರದಾಯಗಳನ್ನು ಬಿಂಬಿಸುವ ಪ್ರದರ್ಶನ ಮಳಿಗೆಗಳನ್ನು ಸ್ಥಾಪಿಸಲಾಗಿತ್ತು. ರಾಶಿ ಪೂಜೆ ನಡೆಸುವ ಮೂಲಕ ಕೃಷಿ ಸಚಿವರು ಸುಗ್ಗಿ-ಹುಗ್ಗಿ ಸಂಬ್ರಮಕ್ಕೆ ಚಾಲನೆ ನೀಡಿದರು. ಇದೇ ವೇಳೆ ಜಾನಪದ ಕಲಾ ತಂಡಗಳಿಂದ ಗಾಯನ, ನೃತ್ಯ, ಕುಣಿತ ನಡೆಯಿತು.

ಟಾಪ್ ನ್ಯೂಸ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.