ಪ್ರಶ್ನೆಪತ್ರಿಕೆ ಸೋರಿಕೆ: ಹೊಸ ನೌಕರರಲ್ಲಿ ಆತಂಕ


Team Udayavani, Jan 16, 2019, 6:25 AM IST

prashne.jpg

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯಲ್ಲಿ ಚಾಲಕ ಕಂ ನಿರ್ವಾಹಕ ಸೇರಿದಂತೆ ಈಚೆಗೆ ನೇಮಕಗೊಂಡ ಸುಮಾರು ಎರಡು ಸಾವಿರ ಅಭ್ಯರ್ಥಿಗಳ ಭವಿಷ್ಯ ಈಗ ಸಿಸಿಬಿ ಪೊಲೀಸರು ನೀಡುವ ವರದಿ ಅವಲಂಬಿಸಿದೆ.

“ಪೊಲೀಸ್‌ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ’ದಲ್ಲಿ ಬಂಧನಕ್ಕೊಳಪಟ್ಟ ಸೋಮಪ್ಪ ಮೇಲಿನಮನಿ ಬಿಎಂಟಿಸಿ ಪರೀಕ್ಷೆಯಲ್ಲಿ ಟಾಪರ್‌ ಆಗಿದ್ದ ಎಂಬ ಅಂಶ ಬೆಳಕಿಗೆ ಬಂದ ಬೆನ್ನಲ್ಲೇ ನಿಗಮವು ಆಂತರಿಕ ತನಿಖೆ ನಡೆಸಿದ್ದು, ಜತೆಗೆ ಸಿಸಿಬಿ ನೀಡುವ ವರದಿಯನ್ನೂ ಎದುರು ನೋಡುತ್ತಿದೆ. ಆ ವರದಿಯ ಫ‌ಲಿತಾಂಶಗಳನ್ನು ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲು ಬಿಎಂಟಿಸಿ ಉದ್ದೇಶಿಸಿದೆ. ಹಾಗಾಗಿ, ಹೊಸದಾಗಿ ನೇಮಕಗೊಂಡವರ ಭವಿಷ್ಯ ಡೋಲಾಯಮಾನ ಆಗಿದೆ. 

1,400 ಚಾಲಕ ಕಂ ನಿರ್ವಾಹಕರು, ಅಂದಾಜು 300 ತಾಂತ್ರಿಕ, 200 ಭದ್ರತಾ ಸಿಬ್ಬಂದಿ ಒಳಗೊಂಡಂತೆ ಎರಡು ಸಾವಿರ ಜನರನ್ನು ಐದು ತಿಂಗಳ ಹಿಂದಷ್ಟೇ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಅವರೆಲ್ಲರಿಗೂ ಆದೇಶದ ಪ್ರತಿಯನ್ನೂ ನೀಡಲಾಗಿದ್ದು, ಕೆಲವರು ಕರ್ತವ್ಯಕ್ಕೂ ಹಾಜರಾಗಿದ್ದಾರೆ. ಈ ಮಧ್ಯೆ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರ ಬಹಿರಂಗವಾಗಿದ್ದು, ಇಡೀ ಪರೀಕ್ಷಾ ಪ್ರಕ್ರಿಯೆಯೇ ಈಗ ಪ್ರಶ್ನಾರ್ಹವಾಗಿದೆ.

ಹಾಗೊಂದು ವೇಳೆ ದೊಡ್ಡ ಪ್ರಮಾಣದಲ್ಲಿ ಇದು ನಡೆದಿದ್ದರೆ, ಪರೀಕ್ಷಾ ಪ್ರಕ್ರಿಯೆ ರದ್ದುಗೊಳಿಸುವ ಸಾಧ್ಯತೆಯೂ ಇದೆ. ಆದರೆ, ಇದು ಯಾವ ಹಂತದಲ್ಲಿ ಸೋರಿಕೆ ಆಗಿದೆ? ಬಿಎಂಟಿಸಿ ವ್ಯಾಪ್ತಿಯಲ್ಲಿ ಸೋರಿಕೆ ಆಗಿದೆಯೇ? ಪರೀಕ್ಷಾ ಪ್ರಕ್ರಿಯೆ ನಡೆಸುವ ಹೊಣೆಹೊತ್ತಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆ ಹಂತದಲ್ಲಿ ಲೋಪ ಆಗಿದೆಯೇ? ಎಷ್ಟು ಪ್ರಮಾಣದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂಬುದನ್ನು ಅವಲಂಬಿಸಿದೆ ಎಂದು ಹೆಸರು ಹೇಳಲಿಚ್ಛಿಸದ ಬಿಎಂಟಿಸಿ ಉನ್ನತ ಅಧಿಕಾರಿಯೊಬ್ಬರು ಹೇಳಿದರು. 

ಪಿಯುಸಿಯಲ್ಲಿ ಶೇ. 75 ಅಂಕ: ಪ್ರಶ್ನೆಪತ್ರಿಕೆ ಮೊದಲೇ ಅಭ್ಯರ್ಥಿಗಳಿಗೆ ಸಿಕ್ಕಿರಬಹುದು ಅಥವಾ ಮೇಲ್ವಿಚಾರಕರನ್ನು ಬುಕಿಂಗ್‌ ಮಾಡಿ, ಪರೀಕ್ಷೆ ಬರೆಯಲು ಪೂರಕ ವ್ಯವಸ್ಥೆ ರೂಪಿಸಿರಬಹುದು. ಎಷ್ಟು ಜನರಿಗೆ ಇದು ತಲುಪಿದೆ ಎನ್ನುವುದು ಸೇರಿದಂತೆ ಎಲ್ಲವೂ ಸಿಸಿಬಿ ಪೊಲೀಸರ ತನಿಖಾ ವರದಿಯಿಂದ ಬೆಳಕಿಗೆ ಬರಲಿದೆ. ಈ ಮಧ್ಯೆ ಪ್ರಾಥಮಿಕ ಹಂತದಲ್ಲಿ ಆಂತರಿಕ ತನಿಖೆಯಲ್ಲಿ ಬಿಎಂಟಿಸಿಯಿಂದ ಯಾವುದೇ ಲೋಪಗಳು ಕಂಡುಬಂದಿಲ್ಲ.

ಅದೇ ರೀತಿ, ಬಂಧನಕ್ಕೊಳಗಾದ ಆರೋಪಿ ಸೋಮಪ್ಪ ಮೇಲಿನಮನಿ ನೇಮಕಾತಿ ವೇಳೆ ಸಲ್ಲಿಸಿದ ದಾಖಲಾತಿಗಳನ್ನೂ ಪರಿಶೀಲನೆಗೊಳಪಡಿಸಿದ್ದು, ಆತ ಪಿಯುಸಿಯಲ್ಲಿ 440ಕ್ಕೂ ಹೆಚ್ಚು ಅಂಕ ಪಡೆದಿದ್ದ ಎಂದು ನಿಗಮದ ಮೂಲಗಳು ತಿಳಿಸಿವೆ. ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಅತ್ಯಂತ ಕಡಿಮೆ ಅಂಕದಲ್ಲಿ ನೌಕರಿಯಿಂದ ವಂಚಿತರಾದ ಅಭ್ಯರ್ಥಿಗಳಿಂದ ಪರೀಕ್ಷಾ ಪ್ರಕ್ರಿಯೆ ವಿರುದ್ಧ ಕೂಗು ಕೇಳಿಬರುತ್ತಿದೆ.

ಸಾಧ್ಯವಾದರೆ ಇದನ್ನು ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲೇರುವ ಎಚ್ಚರಿಕೆಯನ್ನೂ ಅವರು ನೀಡುತ್ತಿದ್ದಾರೆ. ಆದರೆ, ಪ್ರಕರಣದ ವರದಿಯನ್ನು ಬಿಎಂಟಿಸಿಗೆ ಸಲ್ಲಿಸಿದ ನಂತರ ಈ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳುವುದಾಗಿ ಹೆಸರು ಹೇಳಲಿಚ್ಛಿಸದ ಅಭ್ಯರ್ಥಿಗಳು ಸ್ಪಷ್ಟಪಡಿಸಿದ್ದಾರೆ. ಮತ್ತೂಂದೆಡೆ ಹೊಸದಾಗಿ ನೌಕರಿ ಸೇರಿರುವ ಅಭ್ಯರ್ಥಿಗಳಿಗೂ ಈ ಪ್ರಕರಣ ಅಭದ್ರತೆಯ ಆತಂಕ ಸೃಷ್ಟಿಸಿದೆ.

ಆರೋಪಿ ಅಮಾನತು: ಈ ಮಧ್ಯೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಡಿ ಬಂಧನಕ್ಕೊಳಗಾದ ಬಿಎಂಟಿಸಿ ಚಾಲಕ ಸೋಮಪ್ಪ ಮೇಲಿನಮನಿ ಅಮಾನತುಗೊಂಡಿದ್ದಾರೆ ಎಂದು ಬಿಎಂಟಿಸಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. 48 ಗಂಟೆಗಳಿಗಿಂತ ಹೆಚ್ಚು ಅವಧಿ ನಿಗಮದ ಯಾವುದೇ ನೌಕರ ಜೈಲಿನಲ್ಲಿದ್ದರೆ, ಅಟೋಮೆಟಿಕ್‌ ಆಗಿ ಆತ ಅಮಾನತುಗೊಳ್ಳುತ್ತಾನೆ. ಸೋಮಪ್ಪ ವಿಚಾರದಲ್ಲೂ ಈ ನಿಯಮ ಅನ್ವಯ ಆಗಲಿದೆ ಎಂದು ಅಧಿಕಾರಿಗಳು ತಿಳಿಸಿದರು.

ಇಲಾಖಾ ತನಿಖೆ ನಡೆಸುವುದರ ಜತೆಗೆ ಸಿಸಿಬಿ ಪೊಲೀಸರಿಂದಲೂ ನಮಗೆ ತನಿಖಾ ವರದಿ ಸಲ್ಲಿಕೆ ಆಗಲಿದೆ. ಅದರಿಂದ ಯಾವ ಮಟ್ಟದ ಅಕ್ರಮ ನಡೆದಿದೆ ಎಂಬುದು ತಿಳಿಯಲಿದ್ದು, ಅದನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. 
-ಅನುಪಮ್‌ ಅಗರವಾಲ್‌, ನಿರ್ದೇಶಕರು, ಬಿಎಂಟಿಸಿ. 

* ವಿಜಯಕುಮಾರ ಚಂದರಗಿ

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.