ಶಶಿಕಲಾ, ತೆಲಗಿಗೆ ಜೈಲಿನಲ್ಲಿ ರಾಜಾತಿಥ್ಯ ನಿಜ

Team Udayavani, Jan 21, 2019, 6:44 AM IST

sasikala.jpg

ಬೆಂಗಳೂರು: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಎಐಡಿಎಂಕೆ ನಾಯಕಿ ವಿ.ಶಶಿಕಲಾ ಹಾಗೂ ನಕಲಿ ಛಾಪಕಾಗದ ಹಗರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕರೀಂ ಲಾಲಾ ತೆಲಗಿಗೆ ಕಾನೂನು ಬಾಹಿರವಾಗಿ “ವಿಶೇಷ ಅತಿಥ್ಯ’ ನೀಡಲಾಗಿತ್ತು ಎಂಬುದು ಬಹಿರಂಗವಾಗಿದೆ. ಈ ಮೂಲಕ ಐಎಎಸ್‌ ಅಧಿಕಾರಿ ರೂಪಾ ಮಾಡಿದ್ದ ಆರೋಪ ಸಾಬೀತಾದಂತಾಗಿದೆ.

ಈ ಕುರಿತು ನಿವೃತ್ತ ಐಎಎಸ್‌ ಅಧಿಕಾರಿ ವಿನಯ್‌ಕುಮಾರ್‌ ಅವರು ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ತಿಳಿಸಿದ್ದಾರೆ. ಶಶಿಕಲಾ ಹಾಗೂ ಅವರ ಸಂಬಂಧಿ ಇಳವರಸಿ ಶಿಕ್ಷೆಗೆ ಗುರಿಯಾಗಿದ ದಿನದಿಂದಲೂ “ಎ ದರ್ಜೆ’ ಸೌಲಭ್ಯ ನೀಡಲಾಗಿದ್ದು, ಅಡುಗೆ ಮಾಡಲು ಪ್ರತ್ಯೇಕ ಕೊಠಡಿ ಸೇರಿ ಐದು ಕೊಠಡಿಯನ್ನು ಒದಗಿಸಲಾಗಿತ್ತು ಎಂದು ವರದಿಯಲ್ಲಿ ತಿಳಿಸಲಾಗಿದೆ.

ಜೈಲು ಅಕ್ರಮ ಕುರಿತು ತನಿಖೆಗೆ ರಾಜ್ಯ ಸರ್ಕಾರ ರಚಿಸಿದ್ದ ವಿನಯ್‌ಕುಮಾರ್‌ನೆàತೃತ್ವದ ಸಮಿತಿ  ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ, ಶಶಿಕಲಾ ಹಾಗೂ ಅವರ ಸಂಬಂಧಿ ಜೆ.ಇಳವರಸಿ ಅವರ ಖಾಸಗಿ ಬಳಕೆಗೆ ಮಹಿಳಾ ಬ್ಯಾರಕ್‌ನ ಮೊದಲ ಮಹಡಿಯಲ್ಲಿ ಐದು ಕೊಠಡಿವುಳ್ಳ ಕಾರಿಡಾರನ್ನೇ ನೀಡಲಾಗಿತ್ತು. ಐದರಲ್ಲಿ ಒಂದನ್ನು ಶಶಿಕಲಾ ಅಧಿಕೃತವಾಗಿ ಬಳಸುತ್ತಿದ್ದರು. ಉಳಿದ ನಾಲ್ಕು ಕೊಠಡಿಗಳನ್ನು ಜೈಲು ಅಧಿಕಾರಿಗಳು ಯಾರಿಗೂ ನೀಡಿರಲಿಲ್ಲ ಎಂದು ಹೇಳಲಾಗಿದೆ.

ಶಶಿಕಲಾಗೆ ನೀಡಿರುವ ಐದು ಕೋಣೆಗಳಲ್ಲಿ ಒಂದನ್ನು ಅಡುಗೆ ಮಾಡಲು ಬಳಸಲಾಗಿದೆ. ಶಶಿಕಲಾಗೆ ಅಡುಗೆ ಮಾಡಿಕೊಡಲು ಅಜಂತಾ ಎಂಬ ಮಹಿಳಾ ಕೈದಿಯನ್ನು ಜೈಲು ಸಿಬ್ಬಂದಿಯೇ ನೇಮಿಸಿದ್ದರು. ನಿತ್ಯ ಶಶಿಕಲಾ ಹಾಗೂ ಇಳವರಸಿಗೆ ಅಜಂತಾ ಅಡುಗೆ ತಯಾರಿಸಿ ಕೊಡುತ್ತಿದ್ದಳು.

ಆ ಕೊಠಡಿಯಲ್ಲಿ ಅಡುಗೆ ತಯಾರಿಸುವ ಪರಿಕರಗಳೇ ಇಲ್ಲ ಎಂದು ಜೈಲು ಸಿಬ್ಬಂದಿ ಹೇಳಿಕೆ ನೀಡಿದ್ದರು.  ಆದರೆ, 2017ರ ಜು.19ರಂದು ಸಮಿತಿಯು ಮಹಿಳಾ ಬ್ಯಾರಕ್‌ಗೆ ಭೇಟಿ ನೀಡಿ ಪರಿಶೀಲಿಸಿದಾಗ ಐದು ಕೊಠಡಿ ಪೈಕಿ ಒಂದರಲ್ಲಿ ಅರಿಶಿನ ಪುಡಿ ಪ್ಯಾಕೆಟ್‌ ಪತ್ತೆಯಾಗಿತ್ತು. ಮತ್ತೂಂದು ಕೊಠಡಿಯಲ್ಲಿ ಕುಕ್ಕರ್‌ ಬಳಸಿ ಅಡುಗೆ ಮಾಡಿರುವುದು ಪತ್ತೆಯಾಗಿತ್ತು.

ಶಶಿಕಲಾ ಇದ್ದ ಕೊಠಡಿಯ ಬಾಗಿಲಿಗೆ ಪರದೆ ಹಾಕಲಾಗಿತ್ತು. ಈ ಬಗ್ಗೆ ಜೈಲು ಅಧಿಕಾರಿಗಳನ್ನು ವಿಚಾರಣೆ ನಡೆಸಿದಾಗ, ಬೆಕ್ಕುಗಳು ಹೆಚ್ಚಾಗಿರುವ ಕಾರಣ ಪರದೆ ಹಾಕಲಾಗಿತ್ತು ಎಂದು ಸಮಜಾಯಿಷಿ ನೀಡಿದ್ದರು. ಭದ್ರತೆಯ ಕಾರಣಕ್ಕೆ ಶಶಿಕಲಾ ಇದ್ದ ಕೋಣೆಯ ಅಕ್ಕಪಕ್ಕದ ಕೋಣೆಗಳಲ್ಲಿ ಯಾವುದೇ ಕೈದಿಗಳನ್ನು ಇರಿಸಿರಲಿಲ್ಲ.  ಈ ಕೊಠಡಿಗಳಲ್ಲಿ ಶಶಿಕಲಾ ಮತ್ತು ಇಳವರಸಿ ಬಟ್ಟೆಗಳನ್ನು ಇಡಲು ಬಳಸಿಕೊಂಡಿದ್ದರು.

ಶಶಿಕಲಾ ಭೇಟಿಗೆ ಬರುವ ಸಂಬಂಧಿಕರು ಹಾಗೂ ಸ್ನೇಹಿತರೊಂದಿಗೆ ಮಾತನಾಡಲು ಒಂದು ಕೊಠಡಿ ಬಳಸಲಾಗುತ್ತಿತ್ತು. ಅಲ್ಲದೆ, ಇವರ ಕೊಠಡಿಯಲ್ಲಿ ಮಂಚ, ಹೊದಿಕೆ ಹಾಗೂ ಎಲ್‌ಇಡಿ ಟಿ.ವಿ ಇಡಲಾಗಿತ್ತು ಎಂಬುದು ವರದಿಯಲ್ಲಿದೆ. ನ್ಯಾಯಾಲಯದ ಸೂಚನೆ ಇಲ್ಲದಿದ್ದರೂ ಶಶಿಕಲಾ ಮತ್ತು ಇಳವರಸಿಗೆ “ಎ ದರ್ಜೆ’ ಸೌಲಭ್ಯ ನೀಡಲಾಗಿತ್ತು. ನ್ಯಾಯಾಲಯ ಸ್ಪಷ್ಟವಾಗಿ ಶಶಿಕಲಾ ಪ್ರಕರಣದಲ್ಲಿ “ಎ ದರ್ಜೆ’ ಸೌಲಭ್ಯ ನೀಡುಂತಿಲ್ಲ ಎಂದು ಹೇಳಿದ್ದರೂ ಸೌಲಭ್ಯ ಹಿಂಪಡೆದಿರಲಿಲ್ಲ. ಇದು ಜೈಲು ಅಧಿಕಾರಿಗಳ ಕರ್ತವ್ಯ ಲೋಪ ಎಂದು ವರದಿಯಲ್ಲಿ ವಿವರಿಸಲಾಗಿದೆ.

ಕರೀಂ ಲಾಲಾ ತೆಲಗಿಗೂ ವಿಶೇಷ ಆತಿಥ್ಯ: ನಕಲಿ ಛಾಪಾ ಕಾಗದ ಹಗರಣದಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲಿನಲ್ಲೇ ಮೃತಪಟ್ಟ ಕರೀಂ ಲಾಲಾ ತೆಲಗಿಗೆ ನೀಡಲಾಗಿದ್ದ ಸೌಲಭ್ಯದ ವಿಚಾರದಲ್ಲೂ ಕಾನೂನು ಉಲ್ಲಂಘನೆಯಾಗಿರುವುದು ಕಂಡುಬಂದಿದೆ. ತೆಲಗಿ ಇದ್ದ ಕೊಠಡಿ ಪರಿಶೀಲಿಸಿದಾಗ ಕೊಠಡಿಯಲ್ಲಿ ಮಂಚ, ಹೊದಿಕೆ, ಕುರ್ಚಿ ಹಾಗೂ ಟಿ.ವಿ ವ್ಯವಸ್ಥೆ ಕಲ್ಪಿಸಿದ್ದು ಬೆಳಕಿಗೆ ಬಂದಿದೆ. ಸಹಾಯಕ್ಕಾಗಿ ನಾಲ್ವರು ವಿಚಾರಣಾಧೀನ ಕೈದಿಗಳನ್ನು ನೀಡಲಾಗಿತ್ತು ಎಂದು ಸಮಿತಿ ವರದಿಯಲ್ಲಿ ಉಲ್ಲೇಖೀಸಲಾಗಿದೆ.

ಶಶಿಕಲಾ ಸೇರಿ ಹಲವರಿಂದ ಹಣ ಪಡೆದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಅತಿಥ್ಯ ನೀಡಲಾಗುತ್ತಿದೆ ಎಂದು ಅಂದಿನ ಕಾರಾಗೃಹ ಇಲಾಖೆ ಡಿಐಜಿಯಾಗಿದ್ದ ಡಿ.ರೂಪಾ ಅವರು ವರದಿ ನೀಡಿದ್ದರು. ಇದು ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಸರ್ಕಾರ ನಿವೃತ್ತ ಐಎಎಸ್‌ ಅಧಿಕಾರಿ ವಿನಯ್‌ಕುಮಾರ್‌ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು.

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿನ ಅಕ್ರಮದ ಬಗ್ಗೆ ನಾನು ಮೊದಲೇ ತನಿಖೆ ನಡೆಸಿ ವರದಿ ನೀಡಿದ್ದೆ. ಈ ಸಂಬಂಧ ಸರ್ಕಾರ ರಚಿಸಿದ್ದ ಸಮಿತಿ ತನಿಖೆ ನಡೆಸಿ ನೀಡಿರುವ ವರದಿ ತೃಪ್ತಿಕರವಾಗಿದೆ. ನಾನು ನೀಡಿದ್ದ ವರದಿಗಿಂತ ಸಮಗ್ರವಾಗಿ ತನಿಖೆ ಮಾಡಿ ಹಲವಾರು ಸಂಗತಿಗಳನ್ನು ಬಯಲಿಗೆಳೆಯಲಾಗಿದೆ.
-ಡಿ.ರೂಪಾ, ಡಿಐಜಿ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.