ಫೆ.21ರಿಂದ ಚಲನಚಿತ್ರೋತ್ಸವ

Team Udayavani, Jan 31, 2019, 6:59 AM IST

blore-11.jpg

ಬೆಂಗಳೂರು: ಸಿನಿಪ್ರಿಯರಿಗೆ ಫೆಬ್ರವರಿ ಯಲ್ಲಿ ಸಿನಿಮಾ ಹಬ್ಬದೂಟ. ಹೌದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದ್ದು, ಫೆಬ್ರವರಿ 21 ರಿಂದ 28 ರವರೆಗೆ ಹನ್ನೊಂ ದನೇ ಬೆಂಗಳೂರು ಅಂತಾ ರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜಿ ಸಲಾ ಗಿದೆ. ಈ ಕುರಿತು ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ನಾಗತಿಹಳ್ಳಿ ಚಂದ್ರಶೇಖರ್‌ ಅವರು ಚಿತ್ರೋತ್ಸವದ ಕಾರ್ಯಕ್ರಮಗಳ ಬಗ್ಗೆ ವಿವರಣೆ ನೀಡಿದರು.

‘ವಿಧಾನಸೌಧದ ಬಾಂಕ್ವೇಟ್ ಹಾಲ್‌ನಲ್ಲಿ ಅಂತಾರಾಷ್ಟ್ರೀಯ ಚಿತ್ರೋತ್ಸವದ ಉದ್ಘಾಟನಾ ಸಮಾರಂಭ ನೆರವೇರಲಿದ್ದು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಚಿತ್ರೋತ್ಸವಕ್ಕೆ ಚಾಲನೆ ನೀಡಲಿ ದ್ದಾರೆ. ಇನ್ನು, ಒಂದು ವಾರದ ಕಾಲ ನಡೆಯಲಿರುವ ಈ ಚಿತ್ರೋತ್ಸವದಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರತಿನಿಧಿಗಳು ಪಾಲ್ಗೊಳ್ಳುತ್ತಿದ್ದಾರೆ. ದೇಶ, ವಿದೇಶಗಳ ಚಲನಚಿತ್ರ ನಿರ್ಮಾಪಕರು, ನಿರ್ದೇಶಕರು, ಕಲಾವಿದರು, ತಂತ್ರಜ್ಞರು ಸಹ ಈ ಚಿತ್ರೋತ್ಸವದ ಮುಖ್ಯ ಆಕರ್ಷಣೆಯಾಗಲಿದ್ದಾರೆ. ಇನ್ನು, ಸಮಾರೋಪ ಸಮಾರಂಭದಲ್ಲಿ ರಾಜ್ಯಪಾಲರಾದ ವಾಜೂಭಾಯಿ ವಾಲಾ ಅವರು ಏಷಿಯನ್‌, ಭಾರತೀಯ ಮತ್ತು ಕನ್ನಡ ಚಿತ್ರ ವಿಭಾಗಗಳಲ್ಲಿ ಸ್ಪರ್ಧಿಸಿ ವಿಜೇತವಾದ ಚಿತ್ರಗಳಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ನಗರದ ಒರಾಯನ್‌ ಮಾಲ್‌ನಲ್ಲಿರುವ ಪಿವಿಆರ್‌ ಸಿನಿಮಾಸ್‌ನ ಹನ್ನೊಂದು ಪರದೆಗಳಲ್ಲಿ ಫೆ.22 ರಿಂದ ಏಳು ದಿನಗಳ ಕಾಲ ಸುಮಾರು 60 ದೇಶಗಳ 200ಕ್ಕೂ ಹೆಚ್ಚಿನ ವಿಶೇಷ ಹಾಗು ಅಪರೂಪದ ಚಲನಚಿತ್ರಗಳು ಪ್ರದರ್ಶನ ಗೊಳ್ಳಲಿವೆ. ಚಲನಚಿತ್ರೋತ್ಸವದ ಪ್ರವೇಶ, ಟಿಕೆಟ್ ಬುಕ್ಕಿಂಗ್‌ ಮತ್ತಿತರ ಮಾಹಿತಿಗಾಗಿ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ವೆಬ್‌ಸೈಟ್‌ಗೆ ಭೇಟಿ ನೀಡ ಬಹುದು’ ಎಂದು ಅಕಾಡೆಮಿ ಅಧ್ಯಕ್ಷ ನಾಗತಿಹಳ್ಳಿ ಚಂದ್ರಶೇಖರ್‌ ಹೇಳಿದರು.

ಚಿತ್ರೋತ್ಸವದ ವಿಶೇಷತೆಗಳು: ರಾಷ್ಟ್ರಪಿತ ಗಾಂಧೀಜಿ ಅವರ 150 ನೇ ಜನ್ಮದಿನೋತ್ಸವದ ಅಂಗವಾಗಿ ಶ್ಯಾಮ್‌ ಬೆನಗಲ್‌ ಅವರ ‘ಮೇಕಿಂಗ್‌ ಆಫ್ ಮಹಾತ್ಮ’, ಫೀರೋಜ್‌ ಅಬ್ಟಾಸ್‌ಖಾನ್‌ ಅವರ ‘ಗಾಂಧಿ ಮೈ ಫಾದರ್‌’, ಗಿರೀಶ್‌ ಕಾಸರವಳ್ಳಿ ಅವರ ‘ಕೂರ್ಮಾವತಾರ’ ಚಿತ್ರಗಳು ಪ್ರದರ್ಶನಗೊಳ್ಳಲಿವೆ.

ಇನ್ನು, ಇದೇ ಸಂದರ್ಭದಲ್ಲಿ ಇತ್ತೀಚೆಗೆ ಅಗಲಿದ ನಟ ಅಂಬರೀಶ್‌, ನಿರ್ದೇಶಕ ಮೃಣಾಲ್‌ ಸೇನ್‌, ಎಂ.ಭಕ್ತವತ್ಸಲಂ, ಸಾಹಿತಿ ಎಂ.ಎನ್‌.ವ್ಯಾಸರಾವ್‌, ನಟ ಸಿ.ಎಚ್.ಲೋಕನಾಥ್‌ ಅವರಿಗೆ ಶ್ರದ್ಧಾಂಜಲಿ ಸಲ್ಲಿಸ ಲಾಗುವುದು. ಹೆಸರಾಂತ ಛಾಯಾಗ್ರಾಹಕ ಜಿ.ಎಚ್.ಭಾಸ್ಕರ್‌ ಅವರ ಸಲಹೆಯೊಂದಿಗೆ ಬೆಂಗಳೂರು ಮೂಲದ ಸಾಕ್ಷ್ಯ ಚಿತ್ರ ನಿರ್ಮಾತೃ ವಿನೋದ್‌ರಾಜ್‌ ಉತ್ಸವದ ಪ್ರಾಕೃತಿಕ ವಿಕೋಪ ವಿಷಯ ಕುರಿತು ಸಂಗ್ರಹಿಸಿದ ಸಾಕ್ಷ್ಯಚಿತ್ರ ಪ್ರದರ್ಶನ ಗೊಳ್ಳಲಿದೆ. ಜತೆಗೆ ಮನರಂಜನಾ ಸ್ಪರ್ಧೆಗಳನ್ನೂ ಏರ್ಪಡಿಸಲಾಗಿದೆ.

ಇದರೊಂದಿಗೆ ಆತ್ಮಕಥೆ ವ್ಯಕ್ತಿಚಿತ್ರಗಳ ವಿಭಾಗದಲ್ಲಿ ನಿರ್ದೇಶಕ ಋತುಪರ್ಣೋ ಘೋಷ್‌, ಚಿತ್ರತಾರೆ ರೋಮಿ ಸ್ನೆ„ಡರ್‌, ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ, ಗೀತರಚನೆಕಾರ ಡಾ.ದೊಡ್ಡ ರಂಗೇಗೌಡ, ಸಾವಯವ ಕೃಷಿಕ ನಾಡೋಜ ನಾರಾಯಣ ಗೌಡ ಅವರ ಸಾಕ್ಷ್ಯಚಿತ್ರ ಪ್ರದರ್ಶನವಿದೆ.

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.