ಮೂವರು ದರೋಡೆಕೋರರ ಸೆರೆ


Team Udayavani, Feb 21, 2019, 6:38 AM IST

arrested.jpg

ಬೆಂಗಳೂರು: ತಾವರೆಕೆರೆ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಬ್‌ಗಾಗಿ ಕಾಯುತ್ತಿದ್ದ ಖಾಸಗಿ ಕಂಪನಿ ಉದ್ಯೋಗಿಯನ್ನು ಸುಲಿಗೆ ಮಾಡಿದ್ದ ಮೂವರು ಆರೋಪಿಗಳನ್ನು ನಂದಗುಡಿ ಪೊಲೀಸರು ಬಂಧಿಸಿದ್ದಾರೆ.

ಡಿ.ಜೆ.ಹಳ್ಳಿ ನಿವಾಸಿಗಳಾದ ಜಾಫ‌ರ್‌ ಷರೀಫ್ (28), ಇಲಿಯಾಜ್‌ ಪಾಷ (28) ಮತ್ತು ಸಮೀರ್‌ ಪಾಷ (20) ಬಂಧಿತರು. ಕೃತ್ಯಕ್ಕೆ ಬಳಸಿದ್ದ ಆಟೋ, ಚಾಕು ಹಾಗೂ ಎರಡು ಸಾವಿರ ರೂ. ನಗದು ವಶಕ್ಕೆ ಪಡೆಯಲಾಗಿದೆ. ಬಾಗಲಕೋಟೆ ಜಿಲ್ಲೆ ಮೂಲದ ಪ್ರವೀಣ್‌ ಸಂಗಪ್ಪ ಎಂಬುವವರು ತಾವರೆಕೆರೆ ಗ್ರಾಮದಲ್ಲಿ ವಾಸವಾಗಿದ್ದು, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಫೆ.16ರಂದು ಮುಂಜಾನೆ 5.15ರ ಸುಮಾರಿಗೆ ಕೆಲಸಕ್ಕೆ ಹೋಗಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಬ್‌ಗಾಗಿ ಕಾಯುತ್ತಿದ್ದರು. ಇದೇ ವೇಳೆ ಆಟೋದಲ್ಲಿ ಬಂದ ಆರೋಪಿಗಳು, ಚಾಕು ತೋರಿಸಿ, ಪ್ರವೀಣ್‌ ಬಳಿಯಿದ್ದ ಎರಡು ಸಾವಿರ ರೂ. ನಗದು ಸುಲಿಗೆ ಮಾಡಿ ಪರಾರಿಯಾಗಿದ್ದರು. ಆರೋಪಿಗಳು ಗಾಂಜಾ, ಮದ್ಯ ವ್ಯಸನಕ್ಕಾಗಿ ಸಾರ್ವಜನಿಕರ ಸುಲಿಗೆ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು.

ಗಾಂಜಾ ಮಾರಾಟಗಾರನ ಬಂಧನ: ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಕೊಂಡೊಯ್ಯುತ್ತಿದ್ದ ಆರೋಪಿಯನ್ನು ನಂದಗುಡಿ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಶಫಿವುಲ್ಲಾ (28) ಬಂಧಿತ. ಈತನಿಂದ 84 ಸಾವಿರ ರೂ. ಮೌಲ್ಯದ 12 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ.ಆರೋಪಿ ಆಂಧ್ರಪ್ರದೇಶ, ಚಿಕ್ಕಬಳ್ಳಾಪುರ ಕಡೆಯಿಂದ ಗಾಂಜಾ ತಂದು ಮಾಡುತ್ತಿದ್ದ. ಫೆ.18ರಂದು ಬೆಳಗ್ಗೆ ಗಾಂಜಾ ಕೊಂಡೊಯ್ಯುತ್ತಿರುವ ಬಗ್ಗೆ ಮಾಹಿತಿ ಸಿಕ್ಕ ಆಧಾರದಲ್ಲಿ ದಾಳಿ ನಡೆಸಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಯುವತಿ ಮುಂದೆ ಅಸಭ್ಯ ವರ್ತನೆ
ಬೆಂಗಳೂರು: ಓವರ್‌ಟೇಕ್‌ ಮಾಡಲು ಅವಕಾಶ ನೀಡಲಿಲ್ಲ ಎಂಬ ಕಾರಣಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ, ನಡುರಸ್ತೆಯಲ್ಲಿ ಯುವತಿ ಮುಂದೆ ಪ್ಯಾಂಟ್‌ ಜಿಪ್‌ ಬಿಚ್ಚಿ ಅಸಭ್ಯವಾಗಿ ವರ್ತಿಸಿ, ಹಲ್ಲೆ ನಡೆಸಿರುವ ಘಟನೆ ಎಚ್‌ಎಎಲ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 

ಈ ಕುರಿತು ಸಂತ್ರಸ್ತೆ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ. “ಮಂಗಳವಾರ ಮಧ್ಯಾಹ್ನ 12.30ರ ವೇಳೆಗೆ ದ್ವಿಚಕ್ರವಾಹನದಲ್ಲಿ ಎಚ್‌ಎಎಲ್‌ ಜಂಕ್ಷನ್‌ ಬಳಿ ಬರುತ್ತಿದ್ದೆ. ಈ ವೇಳೆ ಹಿಂದಿನಿಂದ ಬೈಕ್‌ನಲ್ಲಿ ಬಂದ ಆರೋಪಿಗೆ ಮುಂದೆ ಹೋಗಲು ಅವಕಾಶ ನೀಡಿರಲಿಲ್ಲ. ಇದಾದ ಕೆಲ ಸಮಯದ ಬಳಿಕ ಆತ ಬೈಕ್‌ ನಿಲ್ಲಿಸಿ ಅಡ್ಡಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ.

ತನ್ನ ಪ್ಯಾಂಟ್‌ನ ಜಿಪ್‌ ಬಿಚ್ಚಿ ಅಸಭ್ಯವಾಗಿ ವರ್ತಿಸಿದ. ಹೀಗಾಗಿ ಮೊಬೈಲ್‌ನಲ್ಲಿ ಆತನ ಫೋಟೋ ತೆಗೆಯಲು ಮುಂದಾಗಿದ್ದಕ್ಕೆ ಮೊಬೈಲ್‌ ಕಿತ್ತುಕೊಂಡು ನೆಲಕ್ಕೆ ಹಾಕಿ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ’ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.