ಬಿಎಸ್ವೈ ಹೇಳಿಕೆ ನಾಚಿಕೆಗೇಡು: ವೇಣುಗೋಪಾಲ್
Team Udayavani, Mar 1, 2019, 6:10 AM IST
ಬೆಂಗಳೂರು: ಪಾಕಿಸ್ತಾನದ ವಿರುದ್ಧ ಭಾರತೀಯ ವಾಯುಸೇನೆ ದಾಳಿ ನಡೆಸಿರುವುದು ಬಿಜೆಪಿಗೆ ಅನುಕೂಲವಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿರುವುದು ನಾಚಿಕೆಗೇಡಿನ ಸಂಗತಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸೈನಿಕರ ಸೇವೆ ಹಾಗೂ ಅವರ ಸಾಧನೆಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವುದು ನಾಚಿಕೆಗೇಡಿನ ಸಂಗತಿ ಅಷ್ಟೇ ಅಲ್ಲ, ಖಂಡನೀಯ. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ರಾಜಕೀಯ ಅಜೆಂಡಾ ಏನು ಎನ್ನುವುದನ್ನು ಯಡಿಯೂರಪ್ಪ ಬಹಿರಂಗಗೊಳಿಸಿದ್ದಾರೆ.
ಸೈನಿಕರ ಪರಮ ಕರ್ತವ್ಯದ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುತ್ತಿರುವಾಗ ಬಿಜೆಪಿ ರಾಷ್ಟ್ರೀಯ ನಾಯಕರು ಅವರ ಸಾಧನೆಯನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ. ಭಯೋತ್ಪಾದಕರ ವಿರುದ್ಧದ ಹೋರಾಟದಲ್ಲಿ ದೇಶ ಏಕತೆಯ ಸಂದೇಶ ಸಾರಬೇಕಾದ ಸಂದರ್ಭದಲ್ಲಿ ಬಿಜೆಪಿ ನಾಯಕರ ಅದರಿಂದ ರಾಜಕೀಯ ಲಾಭ ಪಡೆಯುವುದು ಹೇಗೆ ಎಂಬ ಲೆಕ್ಕಾಚಾರ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ