ವಿದೇಶಿ ವಿದ್ಯಾರ್ಥಿಗಳ ಅಕ್ರಮ ವಾಸ ಅಪಾಯಕಾರಿ

Team Udayavani, Mar 14, 2019, 6:25 AM IST

highcourt.jpg

ಬೆಂಗಳೂರು: ವೀಸಾ ಅವಧಿ ಮುಗಿದ ಬಳಿಕವೂ ವಿದೇಶಿ ವಿದ್ಯಾರ್ಥಿಗಳು ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಸವಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್‌, “ರಾಷ್ಟ್ರೀಯ ಭದ್ರತೆ ದೃಷ್ಟಿಯಿಂದ ಇದೊಂದು ಅಪಾಯಕಾರಿ ಬೆಳವಣಿಗೆ’ ಎಂದು ಆತಂಕ ವ್ಯಕ್ತಪಡಿಸಿದೆ.

ಆದ್ದರಿಂದ, ವೀಸಾ ಅವಧಿ ಮುಗಿದಿದ್ದರೂ ರಾಜ್ಯದಲ್ಲಿ ವಾಸ ಮಾಡುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಎಷ್ಟು, ಅದರಲ್ಲಿ ಎಷ್ಟು ಮಂದಿ ತಲೆ ಮರೆಸಿಕೊಂಡಿದ್ದಾರೆ, ಅವರ ವಿರುದ್ಧ ಏನೆಲ್ಲ ಕ್ರಮಗಳನ್ನು ಕೈಗೊಳ್ಳಳಾಗಿದೆ ಎಂಬ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಹೈಕೋರ್ಟ್‌ ಬುಧವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. 

ವೀಸಾ ಅವಧಿ ಮುಗಿದ್ದಿದ್ದರೂ ರಾಜ್ಯದಲ್ಲಿ ವಾಸ ಮಾಡುತ್ತಿರುವ ಆರೋಪದಲ್ಲಿ ತನ್ನ ವಿರುದ್ಧ ದಾಖಲಿಸಿರುವ ದೂರು ಹಾಗೂ ವಿಚಾರಣೆ ರದ್ದುಗೊಳಿಸುವಂತೆ ಕೋರಿ ಕಾಂಗೋದ ವಿದ್ಯಾರ್ಥಿ ಹೊಸೈ ಬಿಕುಂಡ ಸಿಡ್ನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಅರವಿಂದ ಕುಮಾರ್‌, ವೀಸಾ ಅವಧಿ ಮುಗಿದ ಬಳಿಕವೂ ವಿದೇಶಿ ವಿದ್ಯಾರ್ಥಿಗಳು ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಸ ಮಾಡುತ್ತಿರುವುದು ಅತ್ಯಂತ ಅಪಾಯಕಾರಿ ಬೆಳವಣಿಗೆ ಎಂದು ಹೇಳಿತು.

ವಿಚಾರಣೆ ವೇಳೆ, ಇದು ರಾಷ್ಟ್ರೀಯ ಭದ್ರತೆಗೆ ಅತ್ಯಂತ ಅಪಾಯಕಾರಿ. ಈ ರೀತಿ ವೀಸಾ ಅವಧಿ ಮುಗಿದ ಬಳಿಕ ಇಲ್ಲೇ ವಾಸ ಮಾಡುವ ಬಹುತೇಕ ವಿದೇಶಿ ವಿದ್ಯಾರ್ಥಿಗಳು ಮಾದಕ ದ್ರವ್ಯ ಮತ್ತಿತರರ ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪ್ರಕರಣಗಳು ಕಳವಳಕಾರಿ. ಆದ್ದರಿಂದ ಈ ವಿಚಾರದಲ್ಲಿ ಸರ್ಕಾರ ಅಗತ್ಯ ಸಹಕಾರ ನೀಡಬೇಕು ಎಂದು ಅಡ್ವೋಕೇಟ್‌ ಜನರಲ್‌ ಅವರಿಗೆ ನ್ಯಾಯಪೀಠ ನಿರ್ದೇಶನ ನೀಡಿತು.

ಜೊತೆಗೆ, “ಒಂದು ಅಂದಾಜಿನಂತೆ ವೀಸಾ ಅವಧಿ ಮುಗಿದಿದ್ದರೂ ಸಹ ರಾಜ್ಯದಲ್ಲಿ ಸುಮಾರು 25 ಸಾವಿರ ವಿದೇಶಿ ವಿದ್ಯಾರ್ಥಿಗಳು ಅಕ್ರಮವಾಗಿ ನೆಲೆಸಿದ್ದಾರೆ. ಅವರಲ್ಲಿ ಬಹುತೇಕರು ತಾಂಜೇನಿಯಾ, ಕಾಂಬೋಡಿಯಾ, ಕಾಂಗೋ ಮತ್ತಿತರ ದೇಶದ ವಿದ್ಯಾರ್ಥಿಗಳಾಗಿದ್ದು, ಬಹುತೇಕರು ಮಾದಕ ದ್ರವ್ಯ ಕಳ್ಳ ಸಾಗಣೆ ಮತ್ತಿತರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ. ಇದು ಗಂಭೀರ ವಿಚಾರ’. ಆದ್ದರಿಂದ, ರಾಜ್ಯ ಸರ್ಕಾರ ಬೆಂಗಳೂರಿನಲ್ಲಿರುವ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (ಎಫ್‌ಆರ್‌ಆರ್‌ಒ)ಯಿಂದ ರಾಜ್ಯದಲ್ಲಿ ಎಷ್ಟು ಮಂದಿ ವಿದೇಶಿ ವಿದ್ಯಾರ್ಥಿಗಳ ವೀಸಾ ಅವಧಿ ಮುಗಿದಿದೆ, ಅವರನ್ನು ಗಡಿಪಾರು ಮಾಡಲು ಕೈಗೊಂಡಿರುವ ಕ್ರಮಗಳೇನು ಎಂದು ಮಾಹಿತಿ ಪಡೆದುಕೊಂಡುವ ವಿವರಿಸುವಂತೆ ಸೂಚಿಸಿ ವಿಚಾರಣೆಯನ್ನು ಏ.5ಕ್ಕೆ ಮುಂದೂಡಿತು.

ಅರ್ಜಿಯ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ತಮ್ಮ ಕಕ್ಷಿದಾರ ಸಿಡ್ನಿ ವಿರುದ್ಧ 2017ರಲ್ಲಿಯೇ ಪ್ರಕರಣದ ದಾಖಲಿಸಿ ಕೊಂಡಿದ್ದರೂ, ಇಲ್ಲಿಯವರೆಗೆ ವಿಚಾರಣೆ ನಡೆಸಿಲ್ಲ. ಇತರೆ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ ಎಂದು ತಮ್ಮ ಕಕ್ಷಿದಾರರನ್ನು ಅಲೆದಾಡಿಸಲಾಗುತ್ತಿದೆ. ಆತನ ಪಾಸ್‌ಪೋರ್ಟ್‌ ವಶಪಡಿಸಿಕೊಂಡಿರು ವುದರಿಂದ ಆತ ಸ್ವದೇಶಕ್ಕೆ ಮರಳುವಂತೆಯೂ ಇಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.