ಚಾಕು ತೋರಿಸಿದ ಅಪ್ರಾಪ್ತ ಸೆರೆ


Team Udayavani, Mar 21, 2019, 9:06 AM IST

arrested.jpg

ಬೆಂಗಳೂರು: ತಾನು ಪ್ರೀತಿಸುತ್ತಿದ್ದ ವಿದ್ಯಾರ್ಥಿನಿಗೆ ತನ್ನ ಪ್ರೀತಿ ವಿಚಾರ ತಿಳಿಸಿ, ತನ್ನನ್ನೇ ಮದುವೆಯಾಗುವಂತೆ ಒಪ್ಪಿಸಲು ಮತ್ತೂಬ್ಬ ವಿದ್ಯಾರ್ಥಿನಿಗೆ ಅಪ್ರಾಪ್ತನೊಬ್ಬ ಚಾಕು ತೋರಿಸಿ ಹೆದರಿಸಿ, ಕಿರುಕುಳ ನೀಡಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗದ ಮಧ್ಯ ಪ್ರವೇಶದಿಂದ (ಎನ್‌ಸಿಪಿಸಿಆರ್‌) ಆರೋಪಿತನ ವಿರುದ್ಧ ಹೆಣ್ಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಜನವರಿ 25ರಂದು ಮಧ್ಯಾಹ್ನ ಘಟನೆ ನಡೆದಿದ್ದು, ಸಂತ್ರಸ್ತ ಬಾಲಕಿಯ ತಂದೆ ಎನ್‌ ಸಿಪಿಸಿಆರ್‌ಗೆ ಇ-ಮೇಲ್‌ ಮುಖಾಂತರ ದೂರು ನೀಡಿದ್ದರು. ಈ ದೂರನ್ನು ಗಂಭೀರವಾಗಿ ಪರಿಗಣಿಸಿದ್ದ ಆಯೋಗ, ಕೂಡಲೇ ಘಟನೆ ಸಂಬಂಧ ಕ್ರಮ ಕೈಗೊಳ್ಳುವಂತೆ ನೀಡಿದ ಸೂಚನೆ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಪೊಲೀಸರು, ಸಂತ್ರಸ್ತೆಯಿಂದ ಘಟನೆ ಬಗ್ಗೆ ವಿವರ ಪಡೆದು, ಆರೋಪಿತ ಅಪ್ರಾಪ್ತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಆರೋಪಿಯು 15 ವರ್ಷದವನಾಗಿದ್ದು, ಖಾಸಗಿ ಶಾಲೆಯೊಂದರ ಬಸ್‌ನಲ್ಲಿ ಕೆಲಸ ಮಾಡಿಕೊಂಡಿದ್ದಾನೆ. ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಜತೆಗೆ, ಪ್ರಕರಣ ಸಂಬಂಧ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ವರದಿ ನೀಡಲಿದ್ದು, ತನಿಖೆ ಮುಂದುವರಿದಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಖಾಸಗಿ ಶಾಲೆಯಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ಸಂತ್ರಸ್ತ ವಿದ್ಯಾರ್ಥಿನಿ, ಜ.25ರಂದು ಮಧ್ಯಾಹ್ನ ಒಬ್ಬರೇ ನಡೆದು ಹೋಗುವಾಗ ಬೈಕ್‌ನಲ್ಲಿ ಬಂದು ಅಡ್ಡಗಟ್ಟಿದ್ದ ಆರೋಪಿ, “ನಿಮ್ಮ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯನ್ನು ನಾನು ಪ್ರೀತಿಸುತ್ತಿದ್ದೇನೆ. ಈ ವಿಚಾರವನ್ನು ಆಕೆಗೆ ತಿಳಿಸಬೇಕು. ಇಲ್ಲದಿದ್ದರೆ ನಿನಗೆ ಒಂದು ಗತಿ ಕಾಣಿಸುತ್ತೇನೆ’ ಎಂದು ಚಾಕು ತೋರಿಸಿ ಬೆದರಿಸಿದ್ದ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಜೆ ನಾಲ್ಕು ಗಂಟೆಯಾದರು ಮಗಳು ಮನೆಗೆ ಬಾರದ್ದರಿಂದ ಆಕೆಯನ್ನು ಕರೆದುಕೊಂಡು ಬರಲು ಅವರ ತಂದೆ ಶಾಲೆ ಬಳಿ ತೆರಳುತ್ತಿದ್ದಾಗ ರಸ್ತೆಯ ಸಮೀಪ ಮಗಳು ಅಳುತ್ತಾ ಬರುತ್ತಿರುವುದು ಕಂಡುಬಂದಿದೆ. ಕೂಡಲೇ ಮನೆಗೆ ಕರೆದೊಯ್ದು ವಿಚಾರಿಸಿದಾಗ ಘಟನೆ ಬಗ್ಗೆ ಮಾಹಿತಿ ನೀಡಿದ್ದಾಳೆ. ಹೀಗಾಗಿ ವಿದ್ಯಾರ್ಥಿನಿಯ ತಂದೆ ಎನ್‌ಸಿಪಿಸಿಆರ್‌ಗೆ ದೂರು ನೀಡಿದ್ದರು ಎಂದು ಅಧಿಕಾರಿ ಹೇಳಿದರು.

ಟಾಪ್ ನ್ಯೂಸ್

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.