CONNECT WITH US  

ಸುಟ್ಟ ಸ್ಥಿತಿಯಲ್ಲಿ ಉದ್ಯಮಿ ಶವ ಪತ್ತೆ

ದೊಡ್ಡಬಳ್ಳಾಪುರ: ನಗರದ ಮಾರುತಿನಗರದ ನಿವಾಸಿ ಹಾಗೂ ಭಾಸ್ಕರ್‌ ಮೋಟಾರ್ಸ್‌ ಮಾಲಿಕ ಎನ್‌.ಎಸ್‌.ರಾಜಶೇಖರ್‌ (56) ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಡಿ.ಕ್ರಾಸ್‌ ಸಮೀಪದ ಮೇಲು ಸೇತುವೆ ಬಳಿ ಸೋಮವಾರ ಬೆಳಗ್ಗೆ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ನಗರದ ಕೋರ್ಟ್‌ ರಸ್ತೆಯಲ್ಲಿ ಭಾಸ್ಕರ್‌ ಮೋಟಾರ್ಸ್‌ ಬೈಕ್‌ಗಳ ಶೋ ರೂಂ ಹೊಂದಿರುವ ರಾಜಶೇಖರ್‌, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಭಾನುವಾರ ಸಂಜೆ ಮನೆಯಿಂದ ಹೊರ ಹೋದವರು ಮತ್ತೆ ಮನೆಗೆ ಬಾರದಿದ್ದಾಗ ಕುಟುಂಬದವರು ನಗರ ಠಾಣೆಗೆ ದೂರು ನೀಡಿದ್ದರು.

ಸಾವಿನ ಬಗ್ಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಆದರೆ, ಮೇಲ್ನೋಟಕ್ಕೆ ತಾವೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತೆ ಕಂಡು ಬಂದಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ನಗರ ಠಾಣೆ ಸಬ್‌ಇನ್ಸ್‌ಸ್ಪೆಕ್ಟರ್‌ ಬಿ.ಕೆ.ಪಾಟೀಲ್‌ ತಿಳಿಸಿದ್ದಾರೆ.

ತಾಲೂಕು ವೀರಶೈವ ಲಿಂಗಾಯಿತ ಸಂಘ, ನಗರದ ಅಯ್ಯಪ್ಪ ಸ್ವಾಮಿ ದೇವಾಲಯ ಸಮಿತಿಯ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ರಾಜಶೇಖರ್‌ ಅವರ ಅಂತ್ಯಕ್ರಿಯೆ ಮುಕ್ತಿಧಾಮದಲ್ಲಿ ಸೋಮವಾರ ಸಂಜೆ ನೆರವೇರಿತು. 


Trending videos

Back to Top