CONNECT WITH US  

ಸಂಕಷ್ಟದಲ್ಲಿರುವ ರೈತರ ಕೈ ಬಿಡಲ್ಲ

ದೇವನಹಳ್ಳಿ: ಬಯಲು ಸೀಮೆ ಭಾಗದ ರೈತರ ಅಭಿವೃದ್ಧಿಗಾಗೆ ವಿಶೇಷ ಗಮನಹರಿಸಲಾಗುತ್ತಿದ್ದು ಸಂಕಷ್ಟದಲ್ಲಿರುವ ರೈತರನ್ನು ಕೈ ಬಿಡುವ ಪ್ರಶ್ನೆಯೇ ಇಲ್ಲ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಬೆಂಗಳೂರಿನ ಅವರ ನಿವಾಸದಲ್ಲಿ ಕೆಪಿಸಿಸಿ ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ನಾಗನಾಯಕನಹಳ್ಳಿ ಅಕ್ಕಯ್ಯಮ್ಮ ಮುನಿಯಪ್ಪ ನೇತೃತ್ವದ ತಂಡ ಭೇಟಿ ನೀಡಿ ಬಯಲು ಸೀಮೆ ಭಾಗದ ಪ್ರದೇಶಗಳ ಅಭಿವೃದ್ಧಿಗಾಗಿ ಸರ್ಕಾರದಿಂದ ವಿಶೇಷ ಪ್ರಾತಿನಿಧ್ಯ ನೀಡಬೇಕೆಂಬ ಮನವಿ ಪತ್ರ ಸ್ವೀಕರಿಸಿ ಮಾತನಾಡಿದರು.

ಸಮಿಶ್ರ ಸರ್ಕಾರ ರೈತರ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ರೂಪಿಸಿದೆ. ರಾಜ್ಯದಲ್ಲಿನ ಎಲ್ಲಾ ರೈತರ ಬಗ್ಗೆ ರಾಜ್ಯ ಸರ್ಕಾರ ವಿಶೇಷ ಗಮನಹರಿಸಿದೆ. ರೈತರಿಗೆ ಸಿಗಬೇಕಾದ ಸೌಲಭ್ಯ ತಲುಪಿಸಲು ಕಾರ್ಯೋನ್ಮುಖವಾಗಿದೆ ಎಂದು ಭರವಸೆ ನೀಡಿದರು.

ಕೆಪಿಸಿಸಿ ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ನಾಗನಾಯಕನಹಳ್ಳಿ ಅಕ್ಕಯ್ಯಮ್ಮ, ಪೊಲೀಸ್‌ ಠಾಣೆಗಳಲ್ಲಿ ಕಾರ್ಯವೈಖರಿ ಬಗ್ಗೆ ಸಾಕಷ್ಟು ದೂರುಗಳಿವೆ. ದಲಿತರ ಕುಂದು ಕೊರತೆಗಳ ಸಭೆ ನಡೆದರೂ, ಸಭೆಗಳಲ್ಲಿ ಪ್ರಸ್ತಾಪವಾಗುವ ವಿಚಾರಗಳು ಅನುಷ್ಠಾನಕ್ಕೆ ಬರುತ್ತಿಲ್ಲ.

ಅಲ್ಲದೆ, ರಾಜ್ಯ ಸರ್ಕಾರ, ಬಯಲು ಸೀಮೆ ಭಾಗಕ್ಕೆ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಬೇಕು ಎಂದು ಮನವಿ ಮಾಡಿದರು. ಭಾರತ ಜನಜಾಗೃತಿ ಸೇನೆ ರಾಜ್ಯ ಅಧ್ಯಕ್ಷ ಸಿ.ಮುನಿಯಪ್ಪ, ವಿಶ್ವ ಕರ್ನಾಟಕ ವೇದಿಕೆ ರಾಜ್ಯಾಧ್ಯಕ್ಷ ರಮೇಶ್‌ ಬಾಬು, ಕೆಪಿಸಿಸಿ ಹಿರಿಯ ಉಪಾಧ್ಯಕ್ಷ ಎಂ.ಲಕ್ಷಿನಾರಾಯಣ ಮತ್ತಿತರರಿದ್ದರು.

Trending videos

Back to Top