CONNECT WITH US  

ವಿಮಾನ, ರೈಲು ನಿಲ್ದಾಣಗಳಿಗೆ ಬಾಂಬ್‌ ಬೆದರಿಕೆ ಕರೆ

ದೇವನಹ‌ಳ್ಳಿ/ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಗಳಲ್ಲಿ ಬಾಂಬ್‌ ಸ್ಫೋಟಿಸುವುದಾಗಿ ಸೋಮವಾರ ಅನಾಮಿಕ ಬೆದರಿಕೆ ಕರೆಗಳು ಬಂದಿದೆ. 

ಮಧ್ಯಾಹ್ನ 1.45 ಗಂಟೆಗೆ ವಿಮಾನ ನಿಲ್ದಾಣದ ಟರ್ಮಿನಲ್‌ ವ್ಯವಸ್ಥಾಪಕರಿಗೆ ಕರೆ ಮಾಡಿದ ಅನಾಮಿಕ ವ್ಯಕ್ತಿಯೊಬ್ಬ, ಮಧ್ಯಾಹ್ನ 2 ಗಂಟೆಗೆ ವಿಮಾನ ನಿಲ್ದಾಣದಲ್ಲಿ ಬಾಂಬ್‌ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ.

ಈ ಸಂಬಂಧ ಟರ್ಮಿನಲ್‌ ಅಧಿಕಾರಿಗಳು ವಿಮಾನ ನಿಲ್ದಾಣದ ಪೊಲೀಸರಿಗೆ ದೂರು ನೀಡಿದ್ದಾರೆ. ಅನಾಮಿಕ ಕರೆ ಬಗ್ಗೆ ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದು ಈ ವಾರದಲ್ಲಿ ಬಂದ ಎರಡನೇ ಬಾಂಬ್‌ ಬೆದರಿಕೆ ಕರೆಯಾಗಿದೆ.

ಮತ್ತೂಂದೆಡೆ ಅಪರಿಚತ ವ್ಯಕ್ತಿ ರೈಲ್ವೆ ನಿಲ್ದಾಣದ ನಿಯಂತ್ರಣ ಕೊಠಡಿಗೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ಕರೆ ಮಾಡಿ ನಿಲ್ದಾಣದ ಪಾರ್ಸ್‌ಲ್‌ ಕೊಠಡಿಗೆ ಬಾಂಬ್‌ ಇಟ್ಟಿದ್ದೇನೆ. ಇನ್ನು ಕೆಲವೇ ಕ್ಷಣಗಳಲ್ಲಿ ಸ್ಫೋಟಗೊಳ್ಳಲಿದೆ ಎಂದು ಕರೆ ಸ್ಥಗಿತಗೊಳಿಸಿದ್ದಾನೆ.

ಇದರಿಂದ ಒಂದು ಕ್ಷಣ ಆತಂಕಗೊಂಡ ರೈಲ್ವೆ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಇಡೀ ನಿಲ್ದಾಣವನ್ನು ಶ್ವಾನದಳ, ಬಾಂಬ್‌ ನಿಷ್ಕ್ರಿಯ ದಳ ಜತೆ ತಪಾಸಣೆ ನಡೆಸಿದ್ದಾರೆ. ಆದರೆ, ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಬಳಿಕ ಇದೊಂದು ಹುಸಿ ಕರೆ ಎಂದು ತಿಳಿದು ಬಂದಿದ್ದು, ಈ ಸಂಬಂಧ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇಂದು ಹೆಚ್ಚು ಓದಿದ್ದು

ಚುನಾವಣೆ ಹಿನ್ನೆಲೆಯಲ್ಲಿ ಜೈಪುರದಲ್ಲಿ ಬುಧವಾರ ಬಿಜೆಪಿ ಮತ್ತು ಕಾಂಗ್ರೆಸ್‌ಗಾಗಿ ಪ್ರಚಾರ ಸಾಮಗ್ರಿಗಳನ್ನು ಸಿದ್ಧಪಡಿಸುತ್ತಿರುವ ಕಾರ್ಯಕರ್ತರು.

Nov 15, 2018 07:29am

Trending videos

Back to Top