CONNECT WITH US  

ಇಂದು ನೆಲಮಂಗಲದಲ್ಲಿ ಪ್ರತಿಭಾ ಕಾರಂಜಿ

ನೆಲಮಂಗಲ: ಜಿಪಂ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಬುಧವಾರ ಬೆಳಗ್ಗೆ 9.30ಕ್ಕೆ ಪಟ್ಟಣದ ಸನ್‌ರೈಸ್‌ಆಂಗ್ಲಶಾಲೆ ಆವರಣದಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್‌ ಇಲಾಖೆ ಸಚಿವ ಕೃಷ್ಣಭೈರೇಗೌಡ ಉದ್ಘಾಟಿಸಲಿದ್ದು ಕ್ಷೇತ್ರದ ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ.

ಸಂಸದ ಎಂ.ವೀರಪ್ಪಮೊಯ್ಲಿ, ಜಿಪಂ ಅಧ್ಯಕ್ಷ ವಿ.ಪ್ರಸಾದ್‌, ವಿಧಾನ ಪರಿಷತ್‌ ಸದಸ್ಯ ಅ.ದೇವೇಗೌಡ, ಪುಟ್ಟಣ್ಣ, ಎಸ್‌.ರವಿ, ಬಿಎಂಎಲ್‌.ಕಾಂತರಾಜು ಮತ್ತು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಮುಖಂಡರು ಭಾಗವಹಿಸಲಿದ್ದಾರೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಲ್ಮಾಸ್‌ಫ‌ರ್ವಿನ್‌ ತಾಜ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


Trending videos

Back to Top