ವಿಟ್ಲ : ಲಾರಿಗೆ ಬೆಂಕಿ, ಬಸ್ಸಿಗೆ ಕಲ್ಲು

Team Udayavani, Feb 26, 2017, 1:09 PM IST

2502VTL-Lorry1.jpg

ವಿಟ್ಲ: ವಿಟ್ಲದಲ್ಲಿ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು, ಖಾಸಗಿ ಬಸ್‌ ಸಂಚಾರವಿರಲಿಲ್ಲ. ಜನಸಂಖ್ಯೆ ತೀರಾ ವಿರಳವಾಗಿತ್ತು. ಹೆಚ್ಚಿನ ಖಾಸಗಿಶಾಲೆಗಳಿಗೆ ರಜೆ ಸಾರಲಾಯಿತು. ವಿಟ್ಲದ ಕುದ್ದುಪದವು ಎಂಬಲ್ಲಿ ಕೇರಳ ಖಾಸಗಿ ಬಸ್ಸಿಗೆ, ವಿಟ್ಲ ಪೇಟೆಯಲ್ಲಿ ಮೂರು ಕೆಎಸ್‌ಆರ್‌ಟಿಸಿ ಬಸ್ಸಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ವಿಟ್ಲ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಬಸ್ಸಿಗೆ ಬೆಂಕಿ ಹಚ್ಚಲು ಯತ್ನಿಸಿರುವ ಘಟನೆಯೂ ನಡೆದಿದೆ.

ಕಂಬಳಬೆಟ್ಟು ಹಾಗೂ ಮಿತ್ತೂರು ರೈಲ್ವೇ ಸೇತುವೆ ಕೆಳಗಡೆ ರಸ್ತೆ ಮಧ್ಯೆ ಟಯರ್‌ಗೆ ಬೆಂಕಿ ಹಚ್ಚಲಾಗಿದೆ. ಒಕ್ಕೆತ್ತೂರು ನಿವಾಸಿ ಅಬೂಬಕ್ಕರ್‌ ಹೈವೆ ಅವರು ಮನೆಯ ಮುಂಭಾಗದ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ದುಷ್ಕರ್ಮಿಗಳ ತಂಡ ಬೆಂಕಿ ಹಚ್ಚಿತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಬಂಟ್ವಾಳ ಆಗ್ನಿಶಾಮಕ ದಳದ ಸಿಬಂದಿ ಬೆಂಕಿ ನಂದಿಸಿದ್ದಾರೆ. ಲಾರಿ ಮುಂಭಾಗ ಉರಿದುಹೋಗಿದೆ. ಅದಲ್ಲದೇ ಕಂಬಳಬೆಟ್ಟು ಹಾಗೂ ಉರಿಮಜಲು ಎಂಬಲ್ಲಿ ಆಲದ ಮರದ ಗೆಲ್ಲುಗಳನ್ನು ಕಡಿದು ರಸ್ತೆಗೆ  ಹಾಕಲಾಗಿದೆ.

ವಿಟ್ಲದ ಚಂದಳಿಕೆಯಲ್ಲಿ  ರಸ್ತೆ ಬಂದ್‌ ಮಾಡಲು ಯತ್ನಿಸಿದ ಆರೋಪದಲ್ಲಿ 2 ದ್ವಿಚಕ್ರ ವಾಹನ ಸವಾರರನ್ನು ಬಂಟ್ವಾಳ ವೃತ್ತ ನಿರೀಕ್ಷಕ ಮಂಜಯ್ಯ ನೇತೃತ್ವದ ತಂಡ ವಶಕ್ಕೆ ತೆಗೆದುಕೊಂಡಿದೆ. ಬಳಿಕ ಪುತ್ತೂರಿಗೆ ತೆರಳುವ ಸರಕಾರಿ ಬಸ್‌ಗಳ ಮುಂದೆ ಇಬ್ಬರು ಪೊಲೀಸರು ಬೈಕ್‌ನಲ್ಲಿ ತೆರಳಿ ರಕ್ಷಣೆ ಒದಗಿಸಿದ್ದಾರೆ. ವಿಟ್ಲ ಪೇಟೆಯಲ್ಲಿ ಔಷಧಿ, ಹಾಲು ಹಾಗೂ ದಿನಪತ್ರಿಕೆ ಅಂಗಡಿಗಳು ತೆರೆದಿದ್ದು ಕೆಲವು ಆಟೋ ರಿûಾಗಳು, ದ್ವಿಚಕ್ರ ವಾಹನಗಳು ಸಂಚರಿಸುತ್ತಿದ್ದವು. ವಿಟ್ಲ ಪೇಟೆ ಸಂಪೂರ್ಣ ಬಂದ್‌ ಆಗಿದ್ದು, ಮೇಗಿನಪೇಟೆ ಒಕ್ಕೆತ್ತೂರು, ಮಂಗಳಪದವು ಎಂಬಲ್ಲಿ ಕೆಲವು ಅಂಗಡಿಗಳು ಬಾಗಿಲು ತೆರೆದಿದ್ದವು.

ಕನ್ಯಾನದಲ್ಲಿ ಬಹುತೇಕ ಅಂಗಡಿಗಳು ಬಾಗಿಲು ತೆರೆದು ವ್ಯಾಪಾರ ನಡೆಸಿವೆ. ಮಾಣಿಯಲ್ಲಿ ವಾರದ ಸಂತೆ ಎಂದಿನಂತೆ ವ್ಯಾಪಾರ ವಹಿವಾಟು ನಡೆಸಿದ್ದು, ಬಹುತೇಕ ಅಂಗಡಿಗಳು ಬಾಗಿಲು ತೆರೆದಿದ್ದವು.

“ಸಂಘ ಪರಿವಾರ ಅಲ್ಲ’
ವಿಟ್ಲ ಪಟ್ಟಣ ಪಂಚಾಯತ್‌ ಅಧ್ಯಕ್ಷ ಅರುಣ ಎಂ.ವಿಟ್ಲ ಅವರು ಪತ್ರಿಕಾ ಪ್ರತಿನಿಧಿ ಜತೆ ಮಾತನಾಡಿ, ಬಸ್ಸಿಗೆ ಕಲ್ಲು ತೂರಾಟ, ಲಾರಿಗೆ ಬೆಂಕಿ ಇನ್ನಿತರ ಅಹಿತಕರ ಘಟನೆಗಳಿಗೆ ವಿಟ್ಲದ ಸಂಘ ಪರಿವಾರ ಸಂಘಟನೆಗಳ ಪದಾಧಿಕಾರಿಗಳು ಕಾರಣರಲ್ಲ. ಆ ಕೃತ್ಯದಲ್ಲಿ ತೊಡಗಿಸಿದವರ ಪರಿಚಯವೂ ನಮಗಿಲ್ಲ ಎಂದು ಹೇಳಿದ್ದಾರೆ.
 
ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.