ವಿಟ್ಲ: ಗೃಹರಕ್ಷಕ ದಳದ ಸಿಬಂದಿಗೆ ನಿಂದಿಸಿದ ರಿಕ್ಷಾ ಚಾಲಕನಿಗೆ ದಂಡ
Team Udayavani, Aug 14, 2018, 12:00 PM IST
ವಿಟ್ಲ: ವಿಟ್ಲ – ಪುತ್ತೂರು ರಸ್ತೆಯಲ್ಲಿ ಅಕ್ರಮವಾಗಿ ವಾಹನ ನಿಲ್ಲಿಸಿದ್ದಲ್ಲದೆ, ಪ್ರಶ್ನಿಸಿದ ಗೃಹರಕ್ಷಕ ದಳದ ಸಿಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ರಿûಾ (ನಾಲ್ಕು ಚಕ್ರದ ಹೊಸ ಮಾದರಿಯ ವಾಹನ) ಚಾಲಕನನ್ನು ವಶಕ್ಕೆ ಪಡೆದುಕೊಂಡು, ದಂಡ ವಿಧಿಸಿದ ಘಟನೆ ಸೋಮವಾರ ಸಂಭವಿಸಿದೆ.
ವಿಟ್ಲದಿಂದ ಉಕ್ಕುಡ ಕಡೆಗೆ ಸಂಚಾರ ಮಾಡುವ ರಿûಾದ ಚಾಲಕ ಅಡ್ಡದಬೀದಿ ರಸ್ತೆಯಲ್ಲಿ ವಾಹನ ನಿಲ್ಲಿಸಿ, ಪ್ರಯಾಣಿಕರನ್ನು ಹತ್ತಿಸುತ್ತಿದ್ದ. ಪರಿಣಾಮ ವಿಟ್ಲ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ವಿಟ್ಲ ಠಾಣೆ ನಿಯೋಜಿಸಿದ ಗೃಹರಕ್ಷಕದಳದ ಸಿಬಂದಿ ವಾಹನ ತೆರವುಗೊಳಿಸಲು ಹೇಳಿದ್ದರಿಂದ ಕುಪಿತನಾದ ಚಾಲಕ ಅವರ ಮೇಲೆ ರೇಗಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.
ವಿಟ್ಲ ಪೊಲೀಸರು ವಾಹನ ಹಾಗೂ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ, ದಂಡ ವಿಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ