ನ. 24: ಸತ್ಯ-ಧರ್ಮ ಜೋಡುಕರೆ ಬಯಲು ಕಂಬಳ 

Team Udayavani, Nov 22, 2018, 11:45 AM IST

22-november-8.gif

ಪುಂಜಾಲಕಟ್ಟೆ: ಬಂಟ್ವಾಳ ತಾಲೂಕು ಉಳಿ ಗ್ರಾಮದ ಕಕ್ಯಪದವಿನ ಮೈರ ಬರ್ಕೆಜಾಲುನಲ್ಲಿ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ 6ನೇ ವರ್ಷದ ಹೊನಲು ಬೆಳಕಿನ ಸತ್ಯ-ಧರ್ಮ ಜೋಡುಕರೆ ಬಯಲು ಕಂಬಳವು ನ. 24ರಂದು ಜರಗಲಿದೆ.

ಕಳೆದ 17 ವರ್ಷಗಳಿಂದ ಧಾರ್ಮಿಕ, ಶೈಕ್ಷಣಿಕ, ಕ್ರೀಡಾ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಅನುಪಮ ಸೇವೆಗೈಯುತ್ತಿರುವ ಶ್ರೀ ರಾಮಾಂಜನೇಯ ಗೆಳೆಯರ ಬಳಗ ಕಳೆದ ಐದು ವರ್ಷಗಳಂತೆ ಈ ಬಾರಿಯೂ ಕಂಬಳಾಭಿಮಾನಿಗಳ ಸಹಕಾರದಿಂದ ತುಳುನಾಡಿನ ಜಾನಪದ ಕ್ರೀಡೆ ಕಂಬಳವನ್ನು ನಡೆಸಲು ಮುಂದಾಗಿದೆ. ವೇ| ಮೂ| ರಾಘವೇಂದ್ರ ಭಟ್‌ ಕೊಡಂಬೆಟ್ಟು ಅವರ ಮಾರ್ಗದರ್ಶನದಲ್ಲಿ ಕಂಬಳ ಸಮಿತಿ ಗೌರವಾಧ್ಯಕ್ಷ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರ ನೇತೃತ್ವದಲ್ಲಿ ಕಂಬಳ ಪೋಷಕರ ಸಹಕಾರದಿಂದ ಈ ಬಾರಿಯ ಕಂಬಳ ಋತುವಿನ ಪ್ರಥಮ ಮತ್ತು ಬಂಟ್ವಾಳ ತಾಲೂಕಿನ ಏಕೈಕ ಕಂಬಳ ನಡೆಯುತ್ತಿದೆ.

ಬೆಳಗ್ಗೆ 8.30ಕ್ಕೆ ಕಂಬಳಕ್ಕೆ ಚಾಲನೆ ದೊರಕಲಿದ್ದು, ಕಜೆಕಾರಿನ ಪ್ರಗತಿಪರ ಕೃಷಿಕ ಕೆ. ಸುಂದರ ಪೂಜಾರಿ ಕೊರಂಜಿಕೋಡಿ ಅವರು ಕಂಬಳದ ಉದ್ಘಾಟನೆ ನೆರವೇರಿಸಲಿದ್ದು, ಹಿರಿಯ ಕಂಬಳ ಓಟಗಾರ ಜಯಶೆಟ್ಟಿ ಅವರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿರುವರು.

ಇದಕ್ಕೂ ಮುನ್ನ ಮೈರ ಮಹಾಕಾಳಿ ಅಮ್ಮನವರ ಸನ್ನಿಧಿಯಲ್ಲಿ ಸಹ ಪರಿವಾರ ದೈವಗಳಿಗೆ ವಿಶೇಷ ಪೂಜೆ ನಡೆದ ಬಳಿಕ ಓಟದ ಕೋಣಗಳನ್ನು ಕಂಬಳಗದ್ದೆಗೆ ಅದ್ದೂರಿಯ ಮೆರವಣಿಗೆಯಲ್ಲಿ ತರಲಾಗುವುದು. ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಬಿಜೆಪಿ ಯುವ ನಾಯಕ ವಿಜಯೇಂದ್ರ ಯಡಿಯೂರಪ್ಪ, ಸಂಸದ ನಳಿನ್‌ ಕುಮಾರ್‌ ಕಟೀಲು, ಶಾಸಕ ಹರೀಶ್‌ ಪೂಂಜ, ವಿ.ಪ. ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್‌. ಶೆಟ್ಟಿ, ಜಿಲ್ಲಾ ಬಿಜೆಪಿ ವಕ್ತಾರ ಹರಿಕೃಷ್ಣ ಬಂಟ್ವಾಳ, ಜಿ.ಪಂ. ಸದಸ್ಯ ಎಂ. ತುಂಗಪ್ಪ ಬಂಗೇರ ಮತ್ತಿತರರು ಭಾಗವಹಿಸಲಿದ್ದಾರೆ.

ಕಂಬಳ ಸಮಿತಿ ಅಧ್ಯಕ್ಷ ಹರೀಶ್ಚಂದ್ರ ಪೂಜಾರಿಯವರ ಮಾರ್ಗದರ್ಶನದಲ್ಲಿ ಸಮಿತಿಯು ಕಂಬಳದ ಯಶಸ್ಸಿಗೆ ಶ್ರಮಿಸುತ್ತಿದೆ. ಕರ್ನಾಟಕ ಸರಕಾರ ರೂಪಿಸಿದ ನಿಯಮವನ್ನು ಕಂಬಳಕೂಟದಲ್ಲಿ ಕಡ್ಡಾಯವಾಗಿ ಪಾಲಿಸಲಾಗುವುದು ಎಂದುಸಂಘಟಕರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.