ಅಲ್ಲಿಪಾದೆ: ನಾಲ್ವರಿಗೆ ಎಸೆಸೆಲ್ಸಿ ಪರೀಕ್ಷೆ ನಿರಾಕರಣೆ 


Team Udayavani, Mar 23, 2019, 1:20 AM IST

sslc-ec.jpg

ಪುಂಜಾಲಕಟ್ಟೆ: ಕಲಿಕೆಯಲ್ಲಿ ಹಿಂದುಳಿದಿರುವ ಹಿನ್ನೆಲೆಯಲ್ಲಿ ಎಸೆಸೆಲ್ಸಿಯ ನಾಲ್ವರು ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆಗೆ ಅವಕಾಶ ನಿರಾಕರಿಸಿದ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಕ್ಷೇತ್ರ ಶಿಕ್ಷಣಾಧಿಕಾರಿ ಶಾಲೆಗೆ ಭೇಟಿ ನೀಡಿ 24 ಗಂಟೆಗಳೊಳಗೆ ಸ್ಪಷ್ಟೀಕರಣ ನೀಡುವಂತೆ ಆದೇಶಿಸಿದ್ದಾರೆ.

ಬಂಟ್ವಾಳ ತಾಲೂಕಿನ ಅಲ್ಲಿಪಾದೆಯ ಖಾಸಗಿ ವಿದ್ಯಾ ಸಂಸ್ಥೆಯಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಕನ್ನಡ ಮಾಧ್ಯಮದಲ್ಲಿ ಕಲಿಯುತ್ತಿರುವ ಎಸೆಸೆಲ್ಸಿಯ ನಾಲ್ವರು ಬಾಲಕರು ಈ ಬಾರಿಯ ಅಂತಿಮ ಪರೀಕ್ಷೆಯಿಂದ ವಂಚಿತರಾಗಿದ್ದಾರೆ.

ಪ್ರಸಕ್ತ ಸಾಲಿನಲ್ಲಿ 32 ವಿದ್ಯಾರ್ಥಿಗಳು ಎಸೆಸೆಲ್ಸಿಯಲ್ಲಿ ವಿದ್ಯಾರ್ಜನೆ ಮಾಡುತ್ತಿದ್ದು, ಅವರಲ್ಲಿ ನಾಲ್ವರು ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎನ್ನುವ ಕಾರಣಕ್ಕೆ ಶಾಲಾ ಆಡಳಿತ ಮಂಡಳಿಯು ಅವರನ್ನು ಅಂತಿಮ ಪರೀಕ್ಷೆಗೆ ಹಾಜರಾಗದಂತೆ ನಿರ್ಧಾರ ಕೈಗೊಂಡಿದೆ. ಈ ನಾಲ್ವರ ಹೆಸರನ್ನು ನೋಂದಣಿ ಮಾಡಿರಲಿಲ್ಲ. ಹೀಗಾಗಿ ಗುರುವಾರ ಆರಂಭಗೊಂಡ ಅಂತಿಮ ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ದೊರೆಯದ ಕಾರಣ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಿಲ್ಲ.

ಈ ವಿಚಾರವಾಗಿ ಪರೀಕ್ಷೆ ವಂಚಿತರಾದ ವಿದ್ಯಾರ್ಥಿಗಳ ಪೊಷಕರಿಂದ ಯಾವುದೇ ದೂರು ಬಂದಿಲ್ಲ. ಘಟನೆಯ ಬಗ್ಗೆ ಮಾಹಿತಿ ತಿಳಿದ ಬಳಿಕ ಶಾಲೆಗೆ ತೆರಳಿ ಮಾಹಿತಿ ಸಂಗ್ರಹಿಸಲಾಗಿದೆ. ಈ ಬಗ್ಗೆ ಶಾಲೆಯ ಆಡಳಿತ ಮಂಡಳಿ ಮತ್ತು ಪೋಷಕರೊಂದಿಗೆ ಮಾತುಕತೆ ನಡೆಸಲಾಗಿದೆ. ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿದ್ದು, ಒಂದು ದಿನದೊಳಗೆ ಸ್ಪಷ್ಟೀಕರಣ ನೀಡುವಂತೆ ಸೂಚಿಸಲಾಗಿದೆ ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್‌ ಎನ್‌. ತಿಳಿಸಿದ್ದಾರೆ. ನಾಲ್ವರು ವಿದ್ಯಾರ್ಥಿಗಳು ಕಲಿಕೆಯಲ್ಲಿ ತೀರಾ ಹಿಂದುಳಿದಿದ್ದು, ಈ ಬಾರಿ ಎಸೆಸೆಲ್ಸಿ ಪರೀಕ್ಷೆಗೆ ನೊಂದಾವಣೆ ಮಾಡಿರಲಿಲ್ಲ. ವಿದ್ಯಾರ್ಥಿಗಳ ಭವಿಷ್ಯದ ಕಲಿಕಾ ಹಿತದೃಷ್ಟಿಯಿಂದ ಪೋಷಕರ ಸಹಮತದೊಂದಿಗೆ ಈ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ಶಾಲಾ ಮುಖ್ಯ ಶಿಕ್ಷಕಿ ಸಿ| ಶಾಲಿನಿ ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.