ವ್ಯಸನಮುಕ್ತ ಸಮಾಜ ನಿರ್ಮಿಸಿ

Team Udayavani, Sep 10, 2018, 4:30 PM IST

secptember-19.jpg

ಹಾರೂಗೇರಿ: ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ, ಹೊಡೆಯುವುದು ಇನ್ನಿತರ ಗಂಭೀರ ಆಪಾದನೆಗಳು ಶಿಕ್ಷಕರ ಮೇಲೆ ಕೇಳಿ ಬರುತ್ತಿವೆ. ಜೈನ ಧರ್ಮದಲ್ಲಿ ದಿಗಂಬರ ಸಮಾಜಕ್ಕಿಂತ ಶ್ವೇತಾಂಬರ ಪರಂಪರೆಯ ಮಕ್ಕಳಿಗೆ ಜ್ಞಾನ, ಸಂಸ್ಕಾರಯುತ ಶಿಕ್ಷಣ ಕೊಡಲಾಗುತ್ತಿದೆ. ಬಹುತೇಕ ಜೈನ ಮಕ್ಕಳಿಗೆ ಜೈನ ಧರ್ಮವೇ ಗೊತ್ತಿಲ್ಲ. ಈ ಬಗ್ಗೆ ಜೈನ ಶಿಕ್ಷಕರು ಚಿಂತನೆ ಮಾಡಬೇಕಿದೆ ಎಂದು ಬೆಂಗಳೂರಿನ ಕೇಂದ್ರ ಸಾಹಿತ್ಯ ಅಕಾಡೆಮಿ ಸಲಹಾ ಸಮಿತಿ ಸದಸ್ಯೆ ಡಾ| ಪದ್ಮಿನಿ ನಾಗರಾಜು ವಿಷಾದ ವ್ಯಕ್ತಪಡಿಸಿದರು.

ಪಟ್ಟಣದ ಆದಿನಾಥ ದಿಗಂಬರ ಜೈನ ಮಂದಿರದಲ್ಲಿ ರವಿವಾರ 108 ಜ್ಞಾನೇಶ್ವರ ಮುನಿ ಮಹಾರಾಜರ 19ನೇ ಪಾವನ ವರ್ಷಾಯೋಗ-2018 ನಿಮಿತ್ತ ಬೆಳಗಾವಿ ವಿಭಾಗೀಯ 7ನೇ ಜೈನ ಶಿಕ್ಷಕರ ಸಮಾವೇಶ ಮತ್ತು ಶ್ರೀ ಜ್ಞಾನೇಶ್ವರ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಎಲ್ಲರೂ ಬೌದ್ಧ ಧರ್ಮವೇ ಜೈನ ಧರ್ಮವೆಂದು ತಿಳಿದುಕೊಂಡಿದ್ದಾರೆ. ಇನ್ನೊಂದೆಡೆ ಜೈನ ಧರ್ಮವನ್ನೇ ಮರೆಯುವಂತಾಗಿದೆ. ಈ ಬಗ್ಗೆ ಜೈನ ಶಿಕ್ಷಕರು ಚಿಂತನೆ ಮಾಡಬೇಕಿದೆ ಎಂದರು.

ಆಚಾರ್ಯ ಶ್ರೀ 108 ಜ್ಞಾನೇಶ್ವರ ಮುನಿ ಮಹಾರಾಜರು ಆಶೀರ್ವಚನ ನೀಡಿ, ಧರ್ಮದ ತಳಹದಿಯ ಮೇಲೆ ಭಾರತಕ್ಕೆ ಗುರುವಿನ ಸ್ಥಾನವಿದೆ. ಶಿಕ್ಷಣದಿಂದ ಮಕ್ಕಳು ಜ್ಞಾನ, ಧಾರ್ಮಿಕ ಸಂಸ್ಕಾರ ಪಡೆಯುವಂತಾಗಬೇಕು. ಉತ್ತಮ ಸಂಸ್ಕಾರ ಪಡೆದ ಮಕ್ಕಳು ಪರಿಪೂರ್ಣ ವ್ಯಕ್ತಿಗಳಾಗಿ ರೂಪುಗೊಳ್ಳುತ್ತಾರೆ. ವ್ಯಸನಮುಕ್ತ ಸಮಾಜ ನಿರ್ಮಾಣವೇ ಶಿಕ್ಷಕರ ಧ್ಯೇಯವಾಗಬೇಕು. ಶಿಕ್ಷಕರು ಸಂಬಳಕ್ಕಾಗಿ ನೌಕರಿ ಮಾಡದೇ, ಕರ್ತವ್ಯವೆಂದು ತಿಳಿದು ಮಕ್ಕಳಿಗೆ ಗುಣಮಟ್ಟ ಶಿಕ್ಷಣ ನೀಡಬೇಕು ಎಂದರು.

ಅಖಿಲ ಕರ್ನಾಟಕ ಜೈನ ನೌಕರರ ಸಂಘದ ರಾಜ್ಯಾಧ್ಯಕ್ಷ ಡಾ| ಅಜೀತ ಮುರಗುಂಡೆ, ಉಪನ್ಯಾಸಕರಾದ ಗದಗ ಸರ್ಕಾರಿ ಪದವಿ ಕಾಲೇಜು ಪ್ರಾಧ್ಯಾಪಕ ಡಾ| ಅಪ್ಪಣ್ಣ ಹಂಜೆ, ಡಾ| ರಾಜೇಂದ್ರ ಸಾಂಗಾವೆ ಮಾತನಾಡಿದರು. ಶಿಕ್ಷಕರಿಗೆ ಶ್ರೀ ಜ್ಞಾನೇಶ್ವರ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಾಧಕರಿಗೆ ಜೀವಮಾನ ಸಾಧನೆ ಪ್ರಶಸ್ತಿ, ರಾಜ್ಯಮಟ್ಟದ ಪ್ರಶಸ್ತಿ, ಆದರ್ಶ ಜೈನ ಶಿಕ್ಷಕ ದಂಪತಿ ಪ್ರಶಸ್ತಿ ವಿತರಿಸಲಾಯಿತು.

ಖ್ಯಾತ ಉದ್ಯಮಿ ಜಿನ್ನಪ್ಪ ಅಸ್ಕಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಗಣ್ಯರಾದ ಶೇಖರ ಸದಲಗಿ ಸಮಾವೇಶ ಉದ್ಘಾಟಿಸಿದರು. ಚಡಚಣ ಶಿಕ್ಷಣಾಧಿಕಾರಿ ಮಹಾವೀರ ಮಾಲಗಾಂವೆ, ಸಿದ್ದಪ್ಪ ನಾಗನೂರ, ಸಾಹಿತಿ ಡಾ| ಪಿ.ಜಿ. ಕೆಂಪಣ್ಣವರ, ಶ್ರೀಪಾಲ ದಟವಾಡ, ಸಾತಪ್ಪಗೊಂಗಡಿ, ಜೆ.ಪಿ. ತಂಗಡಿ, ವಿ.ಬಿ. ಜೋಡಟ್ಟಿ, ಡಿ.ಎಸ್‌. ಡಿಗ್ರಜ್‌, ವಿಜಯಪುರ ಸಹಾಯಕ ನಿರ್ದೇಶಕ ಸಂಜು ಹುಲ್ಲೋಳ್ಳಿ, ಅರಿಹಂತ ರಾಮತೀರ್ಥ, ಬಿ.ಬಿ. ಕರ್ಣವಾಡಿ, ಸುರೇಶ ಬದ್ನಿಕಾಯಿ, ಬಾಳಪ್ಪ ತಮದಡ್ಡಿ, ಶ್ರೀಧರ ಸದಲಗಿ, ಎ.ಜೆ. ಚೌಗಲಾ, ವಿ.ಡಿ. ಉಪಾಧ್ಯೆ ಇದ್ದರು. ಶ್ರೀಕಾಂತ ಖೋಂಬಾರೆ ಸ್ವಾಗತಿಸಿದರು. ಆದಿನಾಥ ಹಳ್ಳೂರ ನಿರೂಪಿಸಿದರು. ಶ್ರೀಕಾಂತ ತುರಮುರೆ ವಂದಿಸಿದರು.

ಟಾಪ್ ನ್ಯೂಸ್

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.