ಆಹಾರ ಸಂಸ್ಕರಣಾ ಉದ್ದಿಮೆಗೆ ವಿಫುಲ ಅವಕಾಶ: ರಾಮಚಂದ್ರನ್‌

Team Udayavani, Oct 17, 2018, 4:13 PM IST

17-october-18.gif

ಬೆಳಗಾವಿ: ದೇಶದಲ್ಲಿ ಆಹಾರ ಸಂಸ್ಕರಣಾ ಉದ್ದಿಮೆಗೆ ವಿಫುಲ ಅವಕಾಶಗಳಿವೆ. ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡರೆ ಕೃಷಿ ಉತ್ಪನ್ನಗಳಿಗೆ ಸೂಕ್ತ ಬೇಡಿಕೆ ಮತ್ತು ತಕ್ಕ ಬೆಲೆ ಸಿಗಲು ಸಾಧ್ಯ ಎಂದು ಜಿಪಂ ಸಿಇಒ ರಾಮಚಂದ್ರನ್‌ ಆರ್‌. ಅಭಿಪ್ರಾಯಪಟ್ಟರು. ಉದ್ಯಮಬಾಗದಲ್ಲಿರುವ ಬೆಳಗಾವಿ ಫೌಂಡ್ರಿ ಕ್ಲಸ್ಟರ್‌ ಸಭಾಭವನದಲ್ಲಿ ಮಂಗಳವಾರ ಕೃಷಿ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ನಡೆದ ಆಹಾರ ಸಂಸ್ಕರಣೆ ಉತ್ತೇಜನಕ್ಕೆ ಇರುವ ಯೋಜನೆಗಳು ಮತ್ತು ಸಹಾಯಧನ ಸೌಲಭ್ಯಗಳು ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಆಹಾರ ಸಂಸ್ಕರಣೆ ಉದ್ಯಮ ಪ್ರೋತ್ಸಾಹಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭಾರೀ ಪ್ರಮಾಣದಲ್ಲಿ ಸಹಾಯಧನ ನೀಡುತ್ತಿವೆ. ಮೆಗಾ ಫುಡ್‌ಪಾರ್ಕ್‌ ಸ್ಥಾಪನೆಗೆ 50 ಕೋಟಿ ರೂ.ವರೆಗೆ ಸಹಾಯಧನ ನೀಡುತ್ತಿರುವುದು ಇದಕ್ಕೆ ಸಾಕ್ಷಿ. ಹೀಗಾಗಿ ರೈತರೂ ಆಹಾರ ಸಂಸ್ಕರಣಾ ಉದ್ದಿಮೆ ಆರಂಭಿಸುವ ಮೂಲಕ ಕೃಷಿ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಹಾಯಧನ ಸದ್ಬಳಕೆ ಆಗಲಿ ಎಂಬ ಉದ್ದೇಶಕ್ಕೆ ಸರ್ಕಾರ ಹಲವಾರು ಷರತ್ತು ವಿಧಿಸಿದೆ. ಆದರೆ ಸಂಬಂಧಪಟ್ಟ ಇಲಾಖೆ ಅಧಿ ಕಾರಿಗಳು ನಿಯಮಗಳನ್ನು ಸರಳಗೊಳಿಸಿ ರೈತ ಉದ್ದಿಮೆದಾರರನ್ನು ಪ್ರೋತ್ಸಾಹಿಸಬೇಕು. ರಾಸಾಯನಿಕ ಮಿತಿಮೀರಿ ಬಳಕೆ ಮಾಡಿರುವುದರಿಂದ ಮಣ್ಣಿನ ಫಲವತ್ತತೆ ನಾಶವಾಗಿದ್ದು, ಇದೀಗ ಸಾವಯವ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗಿದೆ. ರೈತರು ಇದನ್ನು ಅರಿತು ಆಹಾರ ಸಂಸ್ಕರಣಾ ಉದ್ಯಮ ಆರಂಭಿಸಬೇಕು ಎಂದರು. ಸರ್ಕಾರಿ ಯೋಜನೆಗಳ ಮಾಹಿತಿ ಕೊರತೆಯಿಂದ ಸೌಲಭ್ಯ ಪಡೆದುಕೊಳ್ಳಲು ಜನರು ಮುಂದೆ ಬರುತ್ತಿಲ್ಲ. ಅಧಿಕಾರಿಗಳು ಅರ್ಹ ರೈತರು ಮತ್ತು ಸಾರ್ವಜನಿಕರಿಗೆ ಸರ್ಕಾರಿ ಯೋಜನೆಗಳ ಮಾಹಿತಿ ತಲುಪಿಸಬೇಕು ಎಂದರು.

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಅಪರ ನಿರ್ದೇಶಕ ಮಹಾಂತೇಶ ಕರೂರ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೃಷಿ, ಕೈಗಾರಿಕೆ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿದರೆ ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನ ಸಾಧ್ಯವಾಗಲಿದೆ ಎಂದು ಹೇಳಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಿಲಾನಿ ಮೊಖಾಶಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ದೊಡ್ಡಬಸವರಾಜ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರವೀಂದ್ರ ಹಕಾಟಿ, ಕೃಷಿ ಇಲಾಖೆ ಉಪನಿರ್ದೇಶಕ ಸಲೀಂ, ಗ್ಲೋಬಲ್‌ ಸಂಸ್ಥೆಯ ರಾವಸಾಹೇಬ್‌ ಮೋಹಿತೆ, ಚಂದ್ರಕುಮಾರ ಸೇರಿದಂತೆ ಇತರರು ಇದ್ದರು. ವಿವಿಧ ತಾಂತ್ರಿಕ ಗೋಷ್ಠಿಗಳು ನಡೆದವು. ಜಿಲ್ಲೆಯ ವಿವಿಧ ಭಾಗಗಳಿಂದ ರೈತರು, ಆಹಾರ ಸಂಸ್ಕರಣೆಯ ಉದ್ದಿಮೆದಾರರು ಹಾಗೂ ಉದ್ಯಮಾಸಕ್ತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.