ಪ್ರಾಣಿ ಸಂಗ್ರಹಾಲಯ ಅಭಿವೃದ್ಧಿಗೆ ಹೆಚ್ಚು ಒತ್ತು

Team Udayavani, Jan 7, 2019, 12:15 PM IST

7-january-22.jpg

ಬೆಳಗಾವಿ: ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಪ್ರಾಣಿ ಉದ್ಯಾನದಲ್ಲಿರುವ ಪ್ರಾಣಿ ಸಂಗ್ರಹಾಲಯವನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಅರಣ್ಯ ಮತ್ತು ಪರಿಸರ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.

ತಾಲೂಕಿನ ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಪ್ರಾಣಿ ಸಂಗ್ರಹಾಲಯದಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ವತಿಯಿಂದ ಕೈಗೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ರವಿವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿ, ಪ್ರಾಣಿ ಸಂಗ್ರಹಾಲಯವನ್ನು ಮಾದರಿಯನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಈ ಭಾಗದಲ್ಲಿಯೇ ಅತ್ಯುತ್ತಮ ಸಂಗ್ರಹಾಲಯ ಇದಾಗಲಿದೆ. ಈಗಾಗಲೇ ರಾಜ್ಯ ಸರ್ಕಾರ ಅನುದಾನ ನೀಡುವ ಮೂಲಕ ಅಭಿವೃದ್ಧಿಗೆ ಕೈ ಜೋಡಿಸುತ್ತಿದೆ. ಇನ್ನು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಕ್ರಮವಾಗಿ ಕೆಲವು ಯೋಜನೆಗಳನ್ನು ಹಾಕಿಕೊಳ್ಳಲಾಗುವುದು. ಪ್ರವಾಸಿಗರನ್ನು ಸಂಗ್ರಹಾಲಯದತ್ತ ಸೆಳೆಯುವ ಪ್ರಯತ್ನ ಸರಕಾರದ್ದಾಗಿದೆ ಎಂದರು.

ಪ್ರಾಣಿ ಸಂಗ್ರಹಾಲಯಕ್ಕಾಗಿ 1.85 ಕಿ.ಮೀ. ಉದ್ದ ಹಾಗೂ 8 ಅಡಿ ಎತ್ತರದ ತಡೆ ಗೋಡೆ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರ ಎರಡು ಕೋಟಿ ರೂ. ಮಂಜೂರಾಗಿದೆ. ಮತ್ತೆ ಕ್ರಮವಾಗಿ ಅರಣ್ಯ ಇಲಾಖೆಯಿಂದ ಅನುದಾನವನ್ನು ಬಿಡುಗಡೆಗೊಳಿಸಲಾಗುವುದು. ಈ ಭಾಗದ ಎಲ್ಲ ಜನರಿಗೂ ಈ ಉದ್ಯಾನವನ ಪ್ರಶಾಂತ ತಾಣವಾಗಿ ರೂಪಿತವಾಗಲಿದೆ. ಅಧಿಕಾರಿಗಳೊಂದಿಗೆ ಚರ್ಚಿಸಿ ಇಲ್ಲಿ ಯಾವ ಅಭಿವೃದ್ಧಿ ಕೈಗೊಳ್ಳಬೇಕು ಎಂಬುದರ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗುವುದು ಎಂದರು.

ಈ ವೇಳೆ ಸಂಸದ ಸುರೇಶ ಅಂಗಡಿ, ಮೇಯರ್‌ ಬಸಪ್ಪ ಚಿಕ್ಕಲದಿನ್ನಿ, ಜಿಲ್ಲಾಧಿಕಾರಿ ಡಾ| ಎಸ್‌.ಬಿ. ಬೊಮ್ಮನಹಳ್ಳಿ, ಪಾಲಿಕೆ ಆಯುಕ್ತ ಶಶಿಧರ ಕುರೇರ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪಿ.ಬಿ. ಕರುಣಾಕರ, ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ವಿ. ಅಮರನಾಥ ಸೇರಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು, ಅರಣ್ಯ ರಕ್ಷಕರು ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

ಭೂತರಾಮನಹಟ್ಟಿಗೆ ಎರಡು ಹುಲಿ
ಭೂತರಾಮನಹಟ್ಟಿ ಪ್ರಾಣಿ ಸಂಗ್ರಹಾಲಯ ಬೆಳೆಸುವ ಉದ್ದೇಶದಿಂದ ಮೊದಲ ಹಂತದಲ್ಲಿ ಎರಡು ಹುಲಿಗಳನ್ನು ತರಿಸಲಾಗುವುದು. ಪ್ರವಾಸಿ ತಾಣವನ್ನಾಗಿ ಮಾಡುವ ಮೂಲಕ ಇದನ್ನು ಅಭಿವೃದ್ಧಿಪಡಿಸಲಾಗುವುದು. ಎರಡು ಹುಲಿಗಳನ್ನು ಬಿಟ್ಟು ಟೈಗರ್‌ ಸಫಾರಿ ಮಾಡಲಾಗುವುದು. ಜತೆಗೆ 18 ವಿವಿಧ ಪ್ರಕಾರದ ಪ್ರಾಣಿಗಳನ್ನು ಸಂಗ್ರಹಾಲಯದಲ್ಲಿ ಇರಿಸಲಾಗುವುದು. ಉದ್ಯಾನ ಮತ್ತು ಪ್ರಾಣಿ ಸಂಗ್ರಹಾಲಯಕ್ಕೆ ಕುಡಿಯುವ ನೀರು ಪೂರೈಸಲು ಮಾರ್ಕಂಡೇಯ ನದಿಯಿಂದ ನೀರು ಒದಗಿಸಲಾಗುವುದು ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೆಟ್ಟರ್ ನಾಮಪತ್ರ ಸಲ್ಲಿಕೆ

Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.