ಜನರ ಸಮಸ್ಯೆ ಪರಿಹರಿಸುವಲ್ಲಿ ನಗರಸಭೆ ವಿಫ‌ಲ


Team Udayavani, Sep 16, 2017, 12:29 PM IST

16-bellary-3.jpg

ಹೊಸಪೇಟೆ: ನಗರದಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ ವ್ಯವಸ್ಥೆ ಸೇರಿದಂತೆ ಸಮರ್ಪಕ ಮೂಲ‌ ಸೌಲಭ್ಯಗಳನ್ನು
ಒದಗಿಸಲು ನಗರಸಭೆ ಆಡಳಿತ ಮಂಡಳಿ, ಸಂಪೂರ್ಣವಾಗಿ ವಿಫ‌ಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಶಾಸಕ ಆನಂದ್‌ ಸಿಂಗ್‌, ದಿಢೀರ್‌ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಕಚೇರಿಯಿಂದ ಹೊರ ಕಳುಹಿಸಿದ ಘಟನೆ ಶುಕ್ರವಾರ ನಡೆಯಿತು.

ಶಾಸಕರು ಹೇಳುತ್ತಿದಂತಯೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಒಬೊಬ್ಬರಾಗಿ ಕಚೇರಿಯಿಂದ ಹೊರ ನಡೆದರು. ಕೆಲ ಸದಸ್ಯರು, ಶಾಸಕರನ್ನು ಹಿಂಬಾಲಿಸಿದರೆ, ಕೆಲ ಸದಸ್ಯರು ಕಚೇರಿಯಲ್ಲಿ ಉಳಿದರು. ಕೆಲವರು ಹೊರ ಬಾರದಿದಕ್ಕೆ ಕುಪಿತಗೊಂಡ ಶಾಸಕರು, ಸಾರ್ವಜನಿಕರು, ನಗರಸಭೆಯನ್ನು ಬಹಿಷ್ಕರಿಸುವಂತೆ ಕರೆ ನೀಡಿದರು.

ನಗರದಲ್ಲಿ ಕುಡಿವ ನೀರು ಹಾಗೂ ಒಳ ಚರಂಡಿ ಯೋಜನೆ ಆರಂಭವಾಗಿ ಆರೇಳು ವರ್ಷಗಳಾಗಿದ್ದರೂ, ಕಾಮಗಾರಿ ಪೂರ್ಣಗೊಂಡಿಲ್ಲ. ಇದಕ್ಕಾಗಿ ರಸ್ತೆಯನ್ನೆಲ್ಲ ಅಗೆದು, ಹಾಳು ಮಾಡಲಾಗಿದ್ದು, ಮಳೆಗಾಲದಲ್ಲಿ ರಸ್ತೆಗಳು ಕೆಸರು ಗದ್ದೆಗಳಾಗಿ ಮಾರ್ಪಾಟ್ಟಿವೆ.

ನಗರದಲ್ಲಿ ಕುಡಿವ ನೀರು ಹಾಗೂ ಒಳ ಚರಂಡಿ ಯೋಜನೆ ಆರಂಭವಾಗಿ ಆರೇಳು ವರ್ಷಗಳಾಗಿದ್ದರೂ, ಕಾಮಗಾರಿ
ಪೂರ್ಣಗೊಂಡಿಲ್ಲ. ಇದಕ್ಕಾಗಿ ರಸ್ತೆಯನ್ನೆಲ್ಲ ಅಗೆದು, ಹಾಳು ಮಾಡಲಾಗಿದ್ದು, ಮಳೆಗಾಲದಲ್ಲಿ ರಸ್ತೆಗಳು ಕೆಸರು ಗದ್ದೆಗಳಾಗಿ ಮಾರ್ಪಾಟ್ಟಿವೆ. ನಗರದಲ್ಲಿ ಡೆಂಘೀ ಎಂತಹ ಮಾರಕ ಕಾಯಿಲೆಗಳು ಜನರು ತಮ್ಮ ಪ್ರಾಣಗಳನ್ನು ಕಳೆದು ಕೊಳ್ಳುವಂತಾಗಿದೆ. ಎಲ್ಲದಕ್ಕೂ ಅಧಿಕಾರಿಗಳು ಸಬೂಬು ಹೇಳುವುದನ್ನೇ ಮೈಗೂಡಿಸಿಕೊಂಡಿದ್ದಾರೆ. ಕೆಲಸ ಮಾತ್ರ ಶೂನ್ಯ ಎಂದು ತರಾಟೆ ತೆಗೆದುಕೊಂಡರು. ನಗರದಲ್ಲಿ ಉಲ್ಬಣಗೊಂಡಿರುವ ಡೆಂಘೀ, ಮಲೇರಿಯಾ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗ-ರುಜಿನಗಳಿಗೆ ಹತೋಟಿಗೆ ಬಾರದೆ ನಾಗರಿಕರು ಪರದಾಡುವಂತಾಗಿದೆ. ಅಧಿಕಾರಿಗಳ ಕಾರ್ಯವೈಖರಿಗೆ ಬೇಸರ ವ್ಯಕ್ತಪಡಿಸಿ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪಟ್ಟು ಹಿಡಿದರು.

ಕೊನೆಗೆ ಪೌರಾಯುಕ್ತ ರಮೇಶ್‌ ಸೇರಿ ಇತರರು 45  ನಗಳಲ್ಲಿ ನಗರದ ಬಹತೇಕ ಸಮಸ್ಯೆಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ಮೇಲೆ ಶಾಸಕರು ನಗರಸಭೆಯಿಂದ ಮರಳಿದರು. ಎಇಇ ಸೈಯದ್‌ ಮಹ್ಮಮದ್‌ ಮನ್ಸೂರ್‌, ಕುಡಿವ ನೀರು ಯೋಜನೆ ಅಭಿಯಂತರ ಖಾಜಿ, ಕಂದಾಯ ಅಧಿಕಾರಿ ಅಜಿತ್‌ ಸಿಂಗ್‌, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಧರ ನಾಯ್ಡು, ಸದಸ್ಯರಾದ ಗುಡಗಂಟಿ ಮಲ್ಲಿಕಾರ್ಜುನ, ಗಿಂಜಿ ಮಂಜುನಾಥ ಇದ್ದರು.

ಸ್ವಾರ್ಥ ರಾಜಕೀಯ ಸಲ್ಲ: ಕೊಟ್ರೇಶ್‌ ತಾತ್ವಿಕ ಮತ್ತು ಸೈದ್ಧಾಂತಿಕ ನಿಲುವು ಇಲ್ಲದವರಿಗೆ ಸಾಮಾಜಿಕ ಜವಾಬ್ದಾರಿಗಳು ಬರೋಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅನ್ಯಪಕ್ಷದವರನ್ನು ರಾಜಕೀಯವಾಗಿ ಬಲಹೀನಗೊಳಿಸುವುದು ಕೂಡ ಭ್ರಷ್ಟಾಚಾರ. ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕೆಂದು ಜನರು ಶಾಸಕರನ್ನು ಆಯ್ಕೆ ಮಾಡಿ ಕಳಿಸಿದರೆ ಸುಮಾರು ನಾಲ್ಕು ವರ್ಷಗಳಲ್ಲಿ ಶಾಸಕ ಆನಂದಸಿಂಗ್‌ ಕನಿಷ್ಠ 60 ದಿನಗಳಷ್ಟು ಸಹ ಹಾಜರಾಗಿಲ್ಲ. ಇನ್ನೂ ಅಭಿವೃದ್ಧಿ ಹೇಗೆ ತಾನೆ ಆಗುತ್ತದೆ. ಸ್ವಾರ್ಥ ರಾಜಕೀಯ ಲಾಭಕ್ಕಾಗಿ ನಗರಸಭೆ ಆಡಳಿತ ಯಂತ್ರವನ್ನು ಕುಂಠಿತಗೊಳಿಸಿದ್ದಾರೆ. ಕಾಂಗ್ರೆಸ್‌ನಿಂದ ಚುನಾಯಿತ ಸದಸ್ಯರನ್ನು ಪ್ರಭಾವ ಬಳಸಿ ಸೆಳೆದು ಬಲಹೀನಗೊಳಿಸುತ್ತಿದ್ದಾರೆ. ಶಾಸಕರು ಶಾಸನ ಸಭೆಯಲ್ಲಿ ಧ್ವನಿ ಎತ್ತಬೇಕು. ನಗರಸಭೆಯಲ್ಲಿ ಮೇಲಿಂದ ಮೇಲೆ ಆಗಮಿಸಿ ಆಡಳಿತದಲ್ಲಿ ಮೂಗು ತೂರಿಸುವುದು ಅವರಿಗೆ ಶೋಭ ತರುವಂಥದ್ದಲ್ಲ. ನಗರಸಭೆ ಮೇಲೆ ಹಿಡಿತ ಸಾಧಿಸಬೇಕೆಂದಿದ್ದರೆ ನಗರಸಭೆ ಚುನಾವಣೆಗೆ ಸ್ಪರ್ಧಿಸಿ ಆಡಳಿತ ನಡೆಸಿ, ಅಭಿವೃದ್ಧಿಗೊಳಿಸಲು ಅವಕಾಶವಿದೆ. ಶಾಸಕರ ಅವಧಿಯುದ್ದಕ್ಕೂ ನಗರದಲ್ಲಿನ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಲ್ಲವೆಂಬುದನ್ನು ಅವರೇ ಪ್ರತಿಭಟನೆ ಮೂಲಕ ಹೊರಹಾಕಿದ್ದಾರೆ ಎಂದು ನಗರಸಭೆ ಮಾಜಿ ಉಪಾಧ್ಯಕ್ಷ ಕೆ.ಕೊಟ್ರೇಶ್‌ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.