ಕಲೆಯ ತವರೂರು ಭಾರತ

Team Udayavani, Dec 11, 2017, 3:08 PM IST

11-33.jpg

ಬಳ್ಳಾರಿ: ಭಾರತ ದೇಶ ಕಲೆ ಮತ್ತು ಸಂಸ್ಕೃತಿಯ ಪ್ರತೀಕ. ವಿದ್ಯಾರ್ಥಿಗಳು ಈ ಸಾಂಸ್ಕೃತಿಕ ಪರಂಪರೆಯ ನಿರಂತರತೆಯನ್ನು ಕಾಪಾಡಬೇಕು ಎಂದು ವಿಶ್ವ ವಿಖ್ಯಾತ ತೊಗಲುಬೊಂಬೆ ಕಲಾವಿದ, ನಾಡೋಜ ಬೆಳಗಲ್ಲು ವೀರಣ್ಣ ಹೇಳಿದರು.

ನಗರದ ಶ್ರೀ ಚೈತನ್ಯ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಹಮ್ಮಿಕೊಂಡಿದ್ದ 2017-18ನೇ ಸಾಲಿನ ಕಲಬುರಗಿ ವಿಭಾಗೀಯ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಉತ್ತರ ಕರ್ನಾಟಕ ಗಂಡು ಮೆಟ್ಟಿದ ಸ್ಥಳ. ಇಲ್ಲಿನ ಬಯಲಾಟ, ತೊಗಲು ಬೊಂಬೆಯಾಟ ಸೇರಿದಂತೆ ವೈವಿಧ್ಯಮಯ ಕಲಾ ಪ್ರಾಕಾರಗಳು ದೇಶ-ವಿದೇಶಗಳಲ್ಲಿ ಪ್ರಖ್ಯಾತವಾಗಿವೆ. ಸಾವಿರಾರು ಕಲಾವಿದರು ಈ ಮಣ್ಣಲ್ಲಿ ಅರಳಿದ್ದಾರೆ ಎಂದರು.

ಇಂತಹ ಭವ್ಯ ಸಾಂಸ್ಕೃತಿಕ ಪರಂಪರೆಯ ವಾರಸುದಾರರಾಗಿರುವ ಇಂದಿನ ವಿದ್ಯಾರ್ಥಿಗಳು ಈ ಪರಂಪರೆ ಉಳಿಸಿ ಬೆಳೆಸಿಕೊಂಡು ಹೋಗುವುದರ ಜೊತೆಗೆ ದೇಶದ ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ಕೊಡುಗೆಗಳನ್ನು ನೀಡಬೇಕು. ಅಂತಹ ಮಟ್ಟಕ್ಕೆ ನಮ್ಮ ವಿದ್ಯಾರ್ಥಿಗಳು ಬೆಳೆಯಲಿ ಎಂದು ಹಾರೈಸಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಾಯಕ ನಿರ್ದೇಶಕ ಎಚ್‌. ಅಬ್ದುಲ್‌ ರಶೀದ್‌ ಮಾತನಾಡಿ, ಇಂದಿನ ಶಿಕ್ಷಣ ಕ್ರಮ ಅಂಕ ಆಧಾರಿತ ಪದ್ಧತಿಯಾಗಿ ರೂಪುಗೊಳ್ಳುತ್ತಿದೆ. ವಿದ್ಯಾರ್ಥಿಗಳು ಅಂಕ ಗಳಿಕೆಯನ್ನೇ ಗುರಿಯಾಗಿಸಿಕೊಳ್ಳದೇ ದೇಶದ ಸಂಸ್ಕೃತಿ, ಕಲೆಗಳನ್ನು ಕಲಿತು ಅವುಗಳನ್ನು ಪೋಷಿಸಬೇಕು. ಇಂತಹ ಕಾರ್ಯಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರೋತ್ಸಾಹಿಸುತ್ತದೆ ಎಂದರು.

ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರಗಿ ಹಾಗೂ ಬೀದರ್‌ ಜಿಲ್ಲೆಗಳ ಪಿಯು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಜಿಪಂ ಹಂಗಾಮಿ ಅಧ್ಯಕ್ಷೆ ದೀನಾ ಮಂಜುನಾಥ, ಕವಯತ್ರಿ ಎ.ಎಂ. ಜಯಶ್ರೀ, ಡಿಡಿಪಿಯು ಬಿ.ಆರ್‌. ನಾಗರಾಜಪ್ಪ, ಬಳ್ಳಾರಿ ಜಿಲ್ಲಾ ಪಿಯು ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಜೆ. ಪ್ರಸಾದ್‌ ರೆಡ್ಡಿ, ಶ್ರೀ ಚೈತನ್ಯ ಪಪೂ ಕಾಲೇಜಿನ ಡೀನ್‌ ಪ್ರಸನ್ನಾಂಜನೇಯಲು, ಪ್ರಾಂಶುಪಾಲರು, ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಗೆದ್ದು ರಾಜ್ಯ ಮಟ್ಟದ ಸ್ಪರ್ಧೆಗಳಿಗೆ ಆಯ್ಕೆಯಾದರು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗಣ್ಯರು ಪ್ರಮಾಣ ಪತ್ರ ವಿತರಿಸಿದರು. ಪಾರ್ವತಿ ಪ್ರಾರ್ಥನೆ, ನಯನ ಹಾಗೂ ಸಂಗಡಿಗರು ನಾಡಗೀತೆ ಪ್ರಸ್ತುತಪಡಿಸಿದರು. ಡಾ| ನಿಂಗಪ್ಪ ವಿ.ಹೊಸಳ್ಳಿ ಸ್ವಾಗತಿಸಿದರು. 

ಉತ್ತರ ಕರ್ನಾಟಕ ಗಂಡು ಮೆಟ್ಟಿದ ಸ್ಥಳ. ಇಲ್ಲಿನ ಬಯಲಾಟ, ತೊಗಲು ಬೊಂಬೆಯಾಟ ಸೇರಿದಂತೆ ವೈವಿಧ್ಯಮಯ ಕಲಾ ಪ್ರಾಕಾರಗಳು ದೇಶ-ವಿದೇಶಗಳಲ್ಲಿ ಪ್ರಖ್ಯಾತವಾಗಿವೆ. ಸಾವಿರಾರು ಕಲಾವಿದರು ಈ ಮಣ್ಣಲ್ಲಿ ಅರಳಿದ್ದಾರೆ.  
ನಾಡೋಜ ಬೆಳಗಲ್ಲು ವೀರಣ್ಣ

ಟಾಪ್ ನ್ಯೂಸ್

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.