ತುಂಗಭದ್ರಾ ನದಿಯಲ್ಲಿ ಪ್ರವಾಹ ಇಳಿಮುಖ

Team Udayavani, Aug 19, 2018, 4:04 PM IST

bell-2.jpg

ಕಂಪ್ಲಿ: ಸ್ಥಳೀಯ ಪಟ್ಟಣದ ಕೋಟೆ ಪ್ರದೇಶದಲ್ಲಿ ಕಳೆದ 5 ದಿನಗಳಿಂದ ಮೈದುಂಬಿ ಹರಿಯುತ್ತಿದ್ದ ತುಂಗಭದ್ರ ನದಿಯಲ್ಲಿ ಇಂದು ಬೆಳಿಗ್ಗೆಯಿಂದ ಪ್ರವಾಹದ ಪ್ರಮಾಣ ಕಡಿಮೆಯಾಗಿದ್ದು, ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಂಡಿದ್ದು ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.

ತುಂಗಭದ್ರಾ ಜಲಾಶಯದ ಮೇಲ್ಭಾಗದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣದಲ್ಲಿ ಕಡಿಮೆಯಾಗಿದೆ. ನದಿಗೆ ಸುಮಾರು 90 ಸಾವಿರ ಕ್ಯೂಸೆಕ್‌ ನೀರನ್ನು ಬಿಡುತ್ತಿರುವುದರಿಂದ ಕಂಪ್ಲಿ ಗಂಗಾವತಿ ಸಂಪರ್ಕ ಸೇತುವೆ ಕೆಳಭಾಗದಲ್ಲಿ ನೀರು ಹರಿಯುತ್ತಿರುವುದು ಕಂಡು ಬಂದಿತು.

ಕಂಪ್ಲಿ-ಗಂಗಾವತಿ ಸೇತುವೆ ಮೇಲೆ ನೀರು ಇಲ್ಲದೇ ಇರುವುದರಿಂದ ಕಳೆದ 5 ದಿನಗಳಿಂದ ಪ್ರವಾಹಕ್ಕೆ ನೀರಿನ ಜೊತೆಯೇ ಹರಿದು ಬಂದ ಕಸಕಡ್ಡಿ, ಗಿಡ ಗಂಟೆಗಳು ಸೇತುವೆಯ ಕಂಬಿಗಳಿಗೆ ಸಿಕ್ಕಿಕೊಂಡಿವೆ. ಇದರಿಂದ ಸಾರ್ವಜನಿಕರ ಹಾಗೂ ದ್ವಿಚಕ್ರಗಳ ಸಂಚಾರಕ್ಕೆ ಅಡ್ಡಿಯಾಗಿತ್ತು. ಆದರೆ ಇಂದು ಬೆಳಗ್ಗೆ ಪುರಸಭೆಯ ಸಿಬ್ಬಂದಿಗಳು ಸೇತುವೆಯ ಮೇಲೆ ಸಂಗ್ರಹವಾಗಿದ್ದ ಕಸಕಡ್ಡಿಗಳನ್ನು, ಗಿಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಿದರು. ಸೇತುವೆ ಮೇಲೆ ನೀರಿನ ಪ್ರಮಾಣ ಕಡಿಮೆಯಾಗಿದ್ದರಿಂದ ಎರಡು ಕಡೆಯ ಸಾರ್ವಜನಿಕರು ಸಂಭ್ರಮದಿಂದ ಸೇತುವೆಯ ಮೇಲೆ ಓಡಾಡುತ್ತಿರುವುದು
ಕಂಡು ಬಂತು. ಜೊತೆಗೆ ಕಂಪ್ಲಿಯಿಂದ ಗಂಗಾವತಿಗೆ ಹೋಗುವವರು ಹಾಗು ಗಂಗಾವತಿ ಭಾಗದಿಂದ ಕಂಪ್ಲಿ ಕಡೆಗೆ ಬರುವವರು ತಮ್ಮ ಸಾಮಗ್ರಿಗಳನ್ನು ಹೊತ್ತುಕೊಂಡು ಸೇತುವೆ ಮೇಲೆ ನಡೆದುಕೊಂಡು ಬರುವ ಹಾಗೂ ಆಟೋಗಳ ಮೂಲಕ ಸಂಚರಿಸುವ ದೃಶ್ಯ ಸಂಜೆಯವರೆಗೂ ಕಂಡು ಬಂತು. 

ಪುರಸಭೆ ಅಧ್ಯಕ್ಷರಾದ ಎಂ. ಸುಧೀರ್‌, ಕಂದಾಯ ಇಲಾಖೆ ಅಧಿಕಾರಿಗಳು ಸೇತುವೆ ಮೇಲಿನ ಕಸಕಡ್ಡಿ,ಗಿಡ ಮರಗಳ ತೆರವು ಕಾರ್ಯ ಪರಿಶೀಲಿಸಿದರು. ನದಿಯಲ್ಲಿ ಪ್ರವಾಹ ಕಡಿಮೆಯಾಗಿದ್ದರೂ ಯಾವ ಕ್ಷಣದಲ್ಲಿಯಾದರೂ ಪುನಃ ಪ್ರವಾಹ ಬರಬಹುದು ಎಂಬ ಹಿನ್ನೆಲೆಯಲ್ಲಿ ನದಿ ತೀರದಲ್ಲಿ ಕಂಪ್ಲಿ ಪೊಲೀಸ್‌ ಇಲಾಖೆ, ಕಂದಾಯ ಇಲಾಖೆ, ಪುರಸಭೆ ಸಿಬ್ಬಂದಿ ಕಟ್ಟೆಚ್ಚರ ವಹಿಸಿದ್ದರು.

ಟಾಪ್ ನ್ಯೂಸ್

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.