ಬದುಕು ಖಾತ್ರಿ ಅಭಿಯಾನಕೆ ಇಂದು ಚಾಲನೆ


Team Udayavani, Dec 20, 2018, 5:09 PM IST

dvg-2.jpg

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯ ಮೇಲೆ ಪ್ರಸಕ್ತ ವರ್ಷವೂ ಆವರಿಸಿರುವ ಭೀಕರ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಂದಾಗಿರುವ ಇಲ್ಲಿನ ಜಿಲ್ಲಾ ಪಂಚಾಯತ್‌, ರಾಜ್ಯದಲ್ಲೇ ಮೊದಲ ಬಾರಿಗೆ ಗಣಿ ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ “ಬದುಕು ಖಾತ್ರಿ’ ಎಂಬ ವಿನೂತನ ಅಭಿಯಾನ ಆರಂಭಿಸಲು ಸಿದ್ಧತೆ ನಡೆಸಿದೆ.

ಬರದಿಂದ ಕಂಗೆಟ್ಟಿದ್ದ ರೈತ ಕುಟುಂಬವೊಂದಕ್ಕೆ ಖಾತ್ರಿ ಯೋಜನೆಯಡಿ 1.5 ಲಕ್ಷ ರೂ. ಸೌಲಭ್ಯ ಒದಗಿಸಿಕೊಡುವುದು ಯೋಜನೆಯ ಮುಖ್ಯ ಉದ್ದೇಶವಾಗಿದ್ದು, ಡಿ.20ರಿಂದ ಈ ಯೋಜನೆಗೆ ಕಾರ್ಯಾದೇಶವಾಗಲಿದೆ.

ನಮ್ಮ ಉದ್ಯೋಗ ನಮ್ಮ ಹಳ್ಳಿಗೆ! ನಮ್ಮ ಗ್ರಾಮೀಣ ಅಭಿವೃದ್ಧಿ ನಮ್ಮ ಕೈಯಲ್ಲೇ ಎಂಬ ಘೋಷವಾಕ್ಯದಡಿ
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಈ ಅಭಿಯಾನವನ್ನು ಆರಂಭಿಸಲಾಗಿದೆ. ಈಗಾಗಲೇ ಜಿಲ್ಲೆಯ 22 ಗ್ರಾಮ ಪಂಚಾಯತ್‌ ಹಾಗೂ 22 ಹೋಬಳಿ ಕೇಂದ್ರಗಳಲ್ಲಿ ಈಗಾಗಲೇ ಗ್ರಾಮಸಭೆ ನಡೆಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಬಿಪಿಎಲ್‌ ಕಾರ್ಡ್‌ ಹೊಂದಿರುವ ಅರ್ಹ ಫಲಾನುಭವಿಗಳನ್ನು
ಗುರುತಿಸುವ ಕಾರ್ಯ ನಡೆದಿದ್ದು, ಬದುಕು ಖಾತ್ರಿ ಅಭಿಯಾನದಡಿ ವೈಯಕ್ತಿಕ ಆಸ್ತಿ ಸೃಜನೆಗಾಗಿ ಅಂದಾಜು 1.50 ಲಕ್ಷ ರೂ.ವರೆಗೆ ಸೌಲಭ್ಯ ಕಲ್ಪಿಸಲು ಅವಕಾಶವಿದೆ. ಹಾಗಾಗಿ ಈ ಅಭಿಯಾನದಲ್ಲಿ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಂಡು ಫಲಾನುಭವಿಗಳಿಗೆ ಸೌಲಭ್ಯ ಒದಗಿಸಿದರೆ ಉದ್ಯೋಗ ಹರಸಿ ಗುಳೆ ಹೋಗುವುದನ್ನು ತಪ್ಪಿಸುವ ಜತೆಗೆ
ತಮ್ಮ ಹೊಲಗಳಲ್ಲೇ ಕೆಲಸ ಮಾಡಿಕೊಂಡು ಸ್ಥಿರಾಸ್ತಿ ಸೃಜಿಸಿಕೊಳ್ಳಲು ಅವಕಾಶ ಕಲ್ಪಿಸಿದಂತಾಗಲಿದೆ ಎಂಬುದು ಜಿಪಂ ಅಧಿಕಾರಿಗಳ ಮುಖ್ಯ ಉದ್ದೇಶವಾಗಿದೆ.

ಬದುಕು ಖಾತ್ರಿಯಲ್ಲಿ ಯಾವ್ಯಾವ ಆಸ್ತಿ ಸೃಜನೆ: ಮನರೇಗಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ ತೆಂಗು, ಮಾವು, ಸಪೋಟ, ದಾಳಿಂಬೆ, ಸೀಬೆ, ನೇರಳೆ, ನುಗ್ಗೆ, ಅಂಜೂರ, ಪಪ್ಪಾಯಿ, ಕರಿಬೇವು, ನಿಂಬೆಹಣ್ಣು ಹಾಗೂ ಕೃಷಿ ಹೊಂಡ, ಜಮೀನಿನಲ್ಲಿ ಕಂದಕ ನಿರ್ಮಾಣ, ಎರೆಹುಳು ತೊಟ್ಟಿ ನಿರ್ಮಾಣ ಸೇರಿದಂತೆ ಇತರೆ ಕಾರ್ಯಗಳನ್ನು
ಕೈಗೆತ್ತಿಕೊಳ್ಳಬಹುದಾಗಿದೆ. ಅಲ್ಲದೇ, ಇವುಗಳ ಜತೆಗೆ ದನದ ಕೊಟ್ಟಿಗೆ ನಿರ್ಮಾಣ, ಕುರಿ ಹಾಗೂ ಮೇಕೆ ಸಾಕಾಣಿಕೆ ಶೆಡ್‌ ನಿರ್ಮಾಣ, ಕೋಳಿ, ಹಂದಿ, ಮೀನು ಸಾಕಾಣಿಕೆ ಶೆಡ್‌ ನಿರ್ಮಾಣ, ವೈಯಕ್ತಿಕ ಕೊಳವೆಬಾವಿ ಮರುಪೂರಣ ಘಟಕ, ವೈಯಕ್ತಿಕ ಮನೆಯನ್ನೂ ನಿರ್ಮಿಸಿಕೊಳ್ಳಬಹುದಾಗಿದ್ದು, ಅದಕ್ಕೆ ತಕ್ಕ ಅಗತ್ಯ ಅನುದಾನ ನೀಡಲಾಗುತ್ತದೆ.

10 ಸಾವಿರ ಕಾರ್ಯಾದೇಶ ಪತ್ರ ವಿತರಿಸುವ ಗುರಿ: ಜಿಲ್ಲೆಯಲ್ಲಿ ಭೀಕರ ಬರದಿಂದ ಕಂಗೆಟ್ಟಿರುವ ರೈತರಲ್ಲಿ
ಆತ್ಮವಿಶ್ವಾಸ ಮೂಡಿಸುವ, ಗುಳೆ ಹೋಗುವುದನ್ನು ತಪ್ಪಿಸುವ ಸಲುವಾಗಿ ಬದುಕು ಖಾತ್ರಿ ಅಭಿಯಾನದಲ್ಲಿ
ವೈಯಕ್ತಿಕ ಆಸ್ತಿ ಸೃಜನೆಗೆ ಅವಕಾಶ ಕಲ್ಪಿಸಲಾಗುತ್ತಿದೆ. ಹಾಗಾಗಿ ಜಿಲ್ಲೆಯ 7 ತಾಲೂಕುಗಳ ಪೈಕಿ ಸುಮಾರು
10 ಸಾವಿರ ರೈತರಿಗೆ ವೈಯಕ್ತಿಕ ಆಸ್ತಿ ಸೃಜಿಸಿಕೊಳ್ಳಲು ಕಾರ್ಯಾದೇಶ ಪತ್ರವನ್ನು ವಿತರಿಸುವ ಗುರಿ ಹೊಂದಲಾಗಿದೆ. ಆರಂಭಿಕವಾಗಿ ಅಂದಾಜು ನೂರಾರು ಅರ್ಹ ಫಲಾನುಭವಿಗಳಿಗೆ ಕಾರ್ಯಾದೇಶ ಪ್ರಮಾಣ ಪತ್ರ ನೀಡುವ ಕಾರ್ಯಕ್ಕೆ ಡಿ.20ರಂದು ಚಾಲನೆ ದೊರೆಯಲಿದೆ. ಬೆಳೆ ಹಾನಿಗೊಳಗಾದ ಹಾಗೂ ಆರ್ಥಿಕ ಸಂಕಷ್ಟದಲ್ಲಿರುವ ರೈತರಿಗೆ ಬದುಕು ಖಾತ್ರಿ ಅಭಿಯಾನ ಅತ್ಯಂತ ಉಪಯುಕ್ತವಾಗಲಿದೆ. ಜಿಲ್ಲೆಯ ರೈತರು ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಿಇಒ ಡಾ| ಕೆ.ವಿ.ರಾಜೇಂದ್ರ ಕೋರಿದ್ದಾರೆ. ಕ್ರಿಯಾ ಯೋಜನೆ ಸಿದ್ಧ: ಜಿಲ್ಲೆಯ 27 ಹೋಬಳಿಗಳಲ್ಲಿ ಗ್ರಾಮಸಭೆ ನಡೆಸಿ, ಶೇ.100 ರಷ್ಟು ಪರಿಹಾರ ನೀಡಲು ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ.

ಎಸ್‌ಸಿ-ಎಸ್‌ಟಿ, ಬಿಪಿಎಲ್‌ ಸೇರಿದರೆ ಶೇ.90 ರಷ್ಟು ರೈತರಿಗೆ ಪರಿಹಾರ ವಿಧಿಸಿದಂತಾಗಲಿದೆ. ಬರದಿಂದ ಕಂಗೆಟ್ಟಿದ್ದ ರೈತರಿಗೆ ವೈಯಕ್ತಿಕ ಭೂ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬಹುದು. ಕೃಷಿ, ಕಂದಾಯ, ಪಶುಸಂಗೋಪನಾ ಇಲಾಖೆ ಸೇರಿ ಎಲ್ಲ ಇಲಾಖೆಗಳು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವಲ್ಲಿ ನಿರತವಾಗಿವೆ. ಇನ್ನು ಜಿಲ್ಲೆಯಲ್ಲಿ 10 ಮೇವು ಬ್ಯಾಂಕ್‌, 5 ಗೋಶಾಲೆ ತೆರೆಯಲಾಗಿದೆ.

ಮೇವು ಹೊರ ರಾಜ್ಯಕ್ಕೆ ಹೋಗದಂತೆ ಚೆಕ್‌ಪೋಸ್ಟ್‌ ಸ್ಥಾಪಿಸಿದ್ದು, ಜಿಲ್ಲಾಧಿಕಾರಿಗಳು ಸಹ 144 ಸೆಕ್ಷನ್‌  ಜಾರಿಗೊಳಿಸಿದ್ದಾರೆ. ಕುಡಿವ ನೀರಿಗೆ ಸಂಬಂಧಿಸಿದಂತೆ ಪ್ರತಿ ಶನಿವಾರ ಇಒ, ತಹಶೀಲ್ದಾರ್‌, ಎಇಇಗಳು
ವಿಎ, ಪಿಡಿಒಗಳೊಂದಿಗೆ ಸಭೆ ನಡೆಸಲಿದ್ದಾರೆ. ಜತೆಗೆ ಜಿಪಂ ವತಿಯಿಂದ ಪ್ರತಿ ಶನಿವಾರ ಫೋನ್‌ಇನ್‌ ಕಾರ್ಯಕ್ರಮ ನಡೆಸಲಾಗುತ್ತಿದೆ. ಸಹಾಯವಾಣಿಯನ್ನು ಆರಂಭಿಸಲಾಗಿದೆ.

ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.