ಅಧ್ಯಕ್ಷ ಬದಲಾವಣೆಗೆ ಬಿಜೆಪಿ ಸದಸ್ಯರ ಪಟ್ಟು?


Team Udayavani, Dec 29, 2018, 9:43 AM IST

29-december-11.jpg

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲಾ ಪಂಚಾಯತ್‌ ಅಧ್ಯಕ್ಷರ ಬದಲಾವಣೆಗಾಗಿ ಬಿಜೆಪಿ ಸದಸ್ಯರಲ್ಲೇ ಇಷ್ಟುದಿನ ಬೂದಿಮುಚ್ಚಿದ ಕೆಂಡದಂತಿದ್ದ ಅಸಮಾಧಾನ ಶುಕ್ರವಾರ ಜಿಪಂ ಸಾಮಾನ್ಯ ಸಭೆಗೆ ಗೈರು ಹಾಜರಾಗುವ ಮೂಲಕ ಸ್ಫೋಟಗೊಂಡಿದೆ. ಜಿಪಂ ಅಧ್ಯಕ್ಷ ಸ್ಥಾನಕ್ಕಾಗಿ ಬಿಜೆಪಿ ಸದಸ್ಯರ ಪಟ್ಟಿ ಹೆಚ್ಚುತ್ತಿದ್ದರೆ, ಮತ್ತೊಂದೆಡೆ ಜಿಲ್ಲೆಯಲ್ಲಿ ಮತಗಳ ಸಂಖ್ಯೆ ಹೆಚ್ಚಿಸಿಕೊಂಡಿರುವ ಕಾಂಗ್ರೆಸ್‌ ಪಕ್ಷ ಜಿಪಂ ಅಧ್ಯಕ್ಷ ಗಾದಿ ಹಿಡಿಯಲು ಕಸರತ್ತು ಆರಂಭಿಸಿದೆ.

ಜಿಪಂ ಅಧ್ಯಕ್ಷ ಸ್ಥಾನ ಆಯ್ಕೆಗೆ ಸಂಬಂಧಿಸಿದಂತೆ ಕಳೆದ ಎರಡು ವರ್ಷಗಳಿಂದ ಇದ್ದ ನ್ಯಾಯಾಲಯದ ಕಟೆಕಟೆಯಿಂದ ಇತ್ತೀಚೆಗಷ್ಟೇ ಮುಕ್ತಗೊಂಡಿದ್ದ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿಗೆ ಇದೀಗ ಮತ್ತೊಂದು  ಸಂಕಷ್ಟ ಎದುರಾಗಿದೆ. ಜಿಪಂ ಅಧ್ಯಕ್ಷರಾಗಿ ಆಯ್ಕೆಯಾಗಿ ಎರಡೂವರೆ ವರ್ಷ (30 ತಿಂಗಳು) ಆಗಿದ್ದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸ್ವಪಕ್ಷದ ಸದಸ್ಯರೇ ಪಟ್ಟು ಹಿಡಿದಿದ್ದಾರೆ. ಈ ಕುರಿತು ಜಿಲ್ಲೆಯ ವಿವಿಧೆಡೆ ಸದಸ್ಯರು ಸಭೆ ನಡೆಸಿದ್ದಾರೆ ಎನ್ನಲಾಗಿದೆ.

ಬದಲಾವಣೆಗೆ ಕಸರತ್ತು: ನಗರದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ನಡೆಯಬೇಕಿದ್ದ ಸಾಮಾನ್ಯ ಸಭೆಗೆ 21 ಸದಸ್ಯರ ಬಲಹೊಂದಿರುವ ಬಿಜೆಪಿಯಿಂದಲೇ ಬೆರಳೆಣಿಕೆಯಷ್ಟು ಸದಸ್ಯರು ಮಾತ್ರ ಹಾಜರಾಗುವ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದು, ಪಕ್ಷದಲ್ಲಿನ ಅಧ್ಯಕ್ಷರ ಬದಲಾವಣೆ ಕಸರತ್ತಿಗೆ ಮತ್ತಷ್ಟು ಪುಷ್ಠಿ ನೀಡಿದಂತಾಗಿದೆ.

34 ಸದಸ್ಯರು ಗೈರು: ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ ಪಕ್ಷ ಸಹ ಲಾಬಿ ನಡೆಸುತ್ತಿದ್ದು, 19 ಸದಸ್ಯರ  ಪೈಕಿ ಒಂದಿಬ್ಬರನ್ನು ಹೊರತುಪಡಿಸಿ ಉಳಿದಂತೆ ಎಲ್ಲರೂ ಗೈರಾಗಿದ್ದರು. ಉಭಯ ಪಕ್ಷಗಳ ಒಟ್ಟು 40 ಜಿಪಂ ಸದಸ್ಯರಲ್ಲಿ ಆರು ಜನ ಸದಸ್ಯರು ಮಾತ್ರ ಸಭೆಗೆ ಹಾಜರಾಗಿದ್ದು, ಉಳಿದ 34 ಸದಸ್ಯರು ಗೈರಾಗಿದ್ದರು.

ಒಪ್ಪಂದದಂತೆ ರಾಜೀನಾಮೆಗೆ ಒತ್ತಡ: ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗುವ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪರ ಬಳಿ ಸದಸ್ಯರು ತೆರಳಿದ್ದಾಗ ಎರಡುವರೆ ವರ್ಷದ ಅವವರೆಗೆ ಮಾತ್ರ ಅ ಕಾರ ನಡೆಸಿ ಬಳಿಕ ಮತ್ತೊಬ್ಬರಿಗೆ ಅವಕಾಶ ನೀಡುವಂತೆ ಆಗಿದ್ದ ಒಪ್ಪಂದದಂತೆ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿಯವರು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಸದಸ್ಯರು ಪಟ್ಟು ಹಿಡಿದಿದ್ದು, ಆಂತರಿಕ ಒತ್ತಡ ಹೆಚ್ಚುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಕುರಿತಂತೆ ಶಾಸಕರಾದ ಜಿ. ಸೋಮಶೇಖರರೆಡ್ಡಿ, ಶ್ರೀರಾಮುಲು ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಅದರಲ್ಲಿ ಕೈಗೊಳ್ಳುವ ನಿರ್ಧಾರವನ್ನು ಆಧರಿಸಿ, ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಬಳಿ ನಿಯೋಗ ತೆರಳಲು ಸಜ್ಜಾಗಿದ್ದಾರೆ ಎಂದು ಜಿಪಂ ಸದಸ್ಯರೊಬ್ಬರು ತಿಳಿಸಿದ್ದಾರೆ.

ಕಾಂಗ್ರೆಸ್‌ ಪಕ್ಷದಿಂದಲೂ ಲಾಬಿ: ಜಿಪಂ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್‌ ಪಕ್ಷ ಸಹ ಆಂತರಿಕವಾಗಿ ಕಸರತ್ತು ಆರಂಭಿಸಿದೆ ಎಂದು ತಿಳಿದು ಬಂದಿದೆ. ಜಿಲ್ಲೆಯಲ್ಲಿ ಜಿಪಂನ 40 ಸದಸ್ಯರ ಪೈಕಿ ಕಾಂಗ್ರೆಸ್‌ ಪಕ್ಷ 19 ಸದಸ್ಯ ಬಲ ಹೊಂದಿದೆ. ಆರು ಶಾಸಕರು, 1 ರಾಜ್ಯಸಭೆ, 1 ಲೋಕಸಭೆ, 2 ವಿಧಾನಪರಿಷತ್‌ ಸದಸ್ಯರನ್ನು ಹೊಂದಿದ್ದು, ಸುಲಭವಾಗಿ ಅಧಿಕಾರ ಹಿಡಿಯಬಹುದು ಎಂಬ ಲೆಕ್ಕಾಚಾರದಲ್ಲಿ ತೊಡಗಿರುವ ಕಾಂಗ್ರೆಸ್‌ ನವರು ಅಧ್ಯಕ್ಷ ಚುಕ್ಕಾಣಿ ಹಿಡಿಯಲು ತೀವ್ರ ಕಸರತ್ತಿನಲ್ಲಿ ತೊಡಗಿದ್ದಾರೆ.

ಜಿಪಂ ಸಾಮಾನ್ಯ ಸಭೆಗೆ ಗೈರಾಗಿದ್ದ ಸದಸ್ಯರು, ನಗರದ ಮುಖಂಡರೊಬ್ಬರ ಮನೆಯಲ್ಲಿ ನಡೆದ ಸಭೆಯಲ್ಲಿ ಹಾಜರಾಗಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್‌ ಪಕ್ಷದಲ್ಲೂ ಅಧ್ಯಕ್ಷ ಸ್ಥಾನಕ್ಕಾಗಿ ಮೂವರು ಆಕಾಂಕ್ಷಿಗಳಿದ್ದಾರೆ. 2019ರಲ್ಲಿ ಜಿಪಂ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತ ಎಂಬ ಮಾತುಗಳು ಪಕ್ಷದ ವಲಯದಲ್ಲಿ ಕೇಳಿಬರುತ್ತಿದೆ. ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿಯವರು 5 ವರ್ಷ ಅವಧಿಗೆ ತಾವೆ ಅಧ್ಯಕ್ಷರು ಎಂದು ಹೈಕಮಾಂಡ್‌ ಸೂಚಿಸಿದೆ ಎಂಬ ವಿಶ್ವಾಸದಲ್ಲಿದ್ದು, ಅಧ್ಯಕ್ಷ ಸ್ಥಾನಕ್ಕೆ ಯಾವ ಪಕ್ಷ ಚೆಕ್‌ ಇಡಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ 
ಬಳ್ಳಾರಿ ಜಿಪಂ ಅಧ್ಯಕ್ಷ ಸ್ಥಾನವನ್ನು ಕಳೆದ ಎರಡೂವರೆ ವರ್ಷಗಳ ಹಿಂದೆ ಅಧಿಕಾರ ಸ್ವೀಕರಿಸುವ ಸಂದರ್ಭದಲ್ಲಿ ಹೈಕಮಾಂಡ್‌ ನಮಗೆ ಪೂರ್ಣ ಐದು ವರ್ಷಗಳ ಕಾಲ ಅವಧಿಗೆ ತಾವೇ ಅಧ್ಯಕ್ಷರು ಅಂತ ಹೇಳಿದೆ. ಆದರೆ ಕೆಲವರು ತಮ್ಮ ಹಿತಾಸಕ್ತಿಗೊಸ್ಕರ ವಿವಿಧ ಹುನ್ನಾರ ಮಾಡುತ್ತಿದ್ದಾರೆ. ಹೈಕಮಾಂಡ್‌ ಏನೇ ತೀರ್ಮಾನ ಕೈಗೊಂಡರೂ ಅದಕ್ಕೆ ನಾನು ಬದ್ಧ. ತಾವು ಅಧ್ಯಕ್ಷರಾಗಿ ಈಗ ಎರಡೂವರೆ ವರ್ಷಗಳಾಗಿದೆ. ಬೇರೆಯವರಿಗೆ ನೀಡಬೇಕು ಎಂದು ಕೆಲವರು ಪ್ರಯತ್ನಿಸುತ್ತಿದ್ದಾರೆ. ಸ್ಥಳೀಯ ನಾಯಕತ್ವ ಸೇರಿ ಹೈಕಮಾಂಡ್‌ ಸಹ ನನ್ನ ಬೆಂಬಲಕ್ಕಿದೆ. ಅಭಿವೃದ್ಧಿ ವಿಷಯಗಳ ಕುರಿತು ಚರ್ಚಿಸುವ ಜಿಪಂ ಸಾಮಾನ್ಯ ಸಭೆಗೆ ತಾವು ಬರದೇ ಬರುವವರಿಗೂ ಬರದಂತೆ ಮಾಡುವುದರ ಮೂಲಕ ಅಭಿವೃದ್ಧಿಗೆ ಕೈ ಜೋಡಿಸುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ.
 ಭಾರತಿ ತಿಮ್ಮಾರೆಡ್ಡಿ,
 ಜಿಪಂ ಅಧ್ಯಕ್ಷೆ, ಬಳ್ಳಾರಿ.

ಜಿಪಂ ಚುಕ್ಕಾಣಿ ಹಿಡಿಯೋದು ಖಚಿತ 
ಬಳ್ಳಾರಿ ಜಿಪಂ ಅಧ್ಯಕ್ಷರ ಬದಲಾವಣೆಯ ಹೊಗೆಯಾಡುತ್ತಿರುವುದು ನಿಜ. ಕಾಂಗ್ರೆಸ್‌ ಪಕ್ಷ ಸಹ ಅಧ್ಯಕ್ಷ ಗಾದಿ ಹಿಡಿಯಲು ಪ್ರಯತ್ನಿಸುತ್ತಿದೆ. ಮೂವರು ಆಕಾಂಕ್ಷಿಗಳಿದ್ದಾರೆ. ಜಿಪಂ ಅಧ್ಯಕ್ಷ ಸ್ಥಾನಕ್ಕೆ ಬೇಕಿದ್ದ ಮತಗಳ ಬಲವೂ ಕಾಂಗ್ರೆಸ್‌ ಪಕ್ಷಕ್ಕಿದೆ. ಹಾಗಾಗಿ ಹೊಸ ವರ್ಷದಲ್ಲಿ ಜಿಪಂ ಚುಕ್ಕಾಣಿ ಹಿಡಿಯುವುದು ಖಚಿತ.
 ಬಿ.ವಿ.ಶಿವಯೋಗಿ
ಕಾಂಗ್ರೆಸ್‌ ಜಿಲ್ಲಾಧ್ಯಕ್ಷರು, ಬಳ್ಳಾರಿ.

„ವೆಂಕೋಬಿ ಸಂಗನಕಲ್ಲು 

ಟಾಪ್ ನ್ಯೂಸ್

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.