ಇಂಧನ ಸೆಸ್‌ ಹೆಚ್ಚಳ ಖಂಡಿಸಿ ಪ್ರತಿಭಟನೆ

Team Udayavani, Jan 7, 2019, 8:39 AM IST

bell-3.jpg

ಬಳ್ಳಾರಿ: ಕೇಂದ್ರ ಸರ್ಕಾರ ಪೆಟ್ರೋಲ್‌, ಡೀಸೆಲ್‌ ಬೆಲೆ ಕಡಿತಗೊಳಿಸಿದರೂ ತೆರಿಗೆ ಹೆಚ್ಚಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ನಗರದ ಗಡಗಿ ಚೆನ್ನಪ್ಪ ವೃತ್ತದಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಭಾನುವಾರ ಪ್ರತಿಭಟನೆ ನಡೆಸಲಾಯಿತು.

ವೃತ್ತದಲ್ಲಿ ಜಮಾಯಿಸಿದ್ದ ಪಕ್ಷದ ನೂರಾರು ಕಾರ್ಯಕರ್ತರು, ಮೈತ್ರಿ ಸರ್ಕಾರದ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿದರು. ಪುಟ್ಟರಂಗಶೆಟ್ಟಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಶಾಸಕ ಜಿ.ಸೋಮಶೇಖರ ರೆಡ್ಡಿ ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರ ಪೆಟ್ರೋಲ್‌, ಡೀಸೆಲ್‌ ಮೇಲಿನ ಬೆಲೆಯನ್ನು ದಿನದಿಂದ- ದಿನಕ್ಕೆ ಇಳಿಸಿಕೊಂಡು ಅತ್ಯಂತ ಕಡಿಮೆ ಬೆಲೆಗೆ ಸಾರ್ವಜನಿಕರಿಗೆ ಒದಗಿಸುತ್ತಿದೆ. ಆದರೆ, ರಾಜ್ಯ ಸರ್ಕಾರ ಡೀಸೆಲ್‌ ಮೇಲೆ 1.83 ರೂ. ಪೈಸೆ, ಪೆಟ್ರೋಲ್‌ ಮೇಲೆ 1.89 ರೂ. ಪೈಸೆ ಸೆಸ್‌ ಹೆಚ್ಚಿಸಿದೆ.

ಇದರಿಂದ ಜನರಿಗೆ ಹೊರೆಯಾಗಿಸಿದ್ದು, ಕೂಡಲೇ ಡೀಸೆಲ್‌, ಪೆಟ್ರೋಲ್‌ ಮೇಲೆ ಹೆಚ್ಚಿಸಿರುವ ತೆರಿಗೆ ಕಡಿತಗೊಳಿಸಬೇಕು ಎಂದು ಅವರು ಒತ್ತಾಯಿಸಿದರು. ಇನ್ನು ಸಚಿವ ಪುಟ್ಟರಂಗಶೆಟ್ಟಿ ಆಪ್ತ ಸಹಾಯಕ ಮೋಹನ್‌ ಎನ್ನುವವರು ಮೂಟೆಯಲ್ಲಿ ಸುಮಾರು 25 ಲಕ್ಷಕ್ಕೂ ಹೆಚ್ಚು ಹಣವನ್ನು ಕೊಂಡೊಯ್ಯುತ್ತಿದ್ದಾರೆ.

ಮೂಟೆಯ ಮೇಲೆ ಪುಟ್ಟರಂಗಶೆಟ್ಟಿ ಎಂದು ಹೆಸರನ್ನು ಬರೆಯಲಾಗಿದ್ದು, ಇದರಿಂದ ವಿಧಾನಸಭೆಯಲ್ಲಿ ಎಷ್ಟರ ಮಟ್ಟಿಗೆ ನೇರವಾಗಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬುದಕ್ಕೆ ಪ್ರತ್ಯಕ್ಷ ಸಾಕ್ಷಿಯಾಗಿದೆ. ಇಷ್ಟು ಮೊತ್ತದ ಹಣವನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರು ಪುಟಗೋಸಿ ಹಣ ಎಂದು ಕೀಳಾಗಿ ಮಾತನಾಡಿದ್ದಾರೆ. ದಿನೇಶ್‌ ಗುಂಡೂರಾವ್‌ ಅವರಿಗೆ ಈ ಹಣ ಪುಟಗೋಸಿ ಆಗಿರಬಹುದು. ಪುಟ್ಟರಂಗಶೆಟ್ಟಿಗೆ ಪುಟಗೋಸಿ ಆಗದಿರಬಹುದು. ಹಾಗಾಗಿ ಹಣವನ್ನು ಪಡೆದಿರಬಹುದು. ಲೋನ್‌ ನೀಡಲು ಸಹ ಹಣವನ್ನು ಪಡೆಯುತ್ತಿದ್ದಾರೆ ಎಂದು ಅನುಮಾನ ಮೂಡುತ್ತಿದೆ. ಆದ್ದರಿಂದ ಪುಟ್ಟರಂಗಶೆಟ್ಟಿ ಅವರು ಸಚಿವ ರಾಜೀನಾಮೆ
ನೀಡಬೇಕೆಂದು ಒತ್ತಾಯಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ, ಪಾಲಿಕೆ ಸದಸ್ಯರಾದ ಮಲ್ಲನಗೌಡ, ಶ್ರೀನಿವಾಸ್‌ ಮೋತ್ಕರ್‌, ಮುಖಂಡರಾದ ಜಿ.ವಿರೂಪಾಕ್ಷಗೌಡ, ಎಚ್‌. ಹನುಮಂತಪ್ಪ, ಶ್ರೀನಿವಾಸ ಪಾಟೀಲ್‌, ಅಶೋಕ್‌ ಕುಮಾರ್‌, ಅನಿಲ್‌ನಾಯ್ಡು, ಬಸವರಾಜ್‌ ಬಿಸಲಹಳ್ಳಿ, ಸುಗುಣ, ಪದ್ಮಾವತಿ ಸೇರಿದಂತೆ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.