ದುಶ್ಚಟ ತ್ಯಜಿಸಿ ಆರೋಗ್ಯ ಕಾಪಾಡಿಕೊಳ್ಳಿ

Team Udayavani, Feb 7, 2019, 10:18 AM IST

bell-2.jpg

ಬಳ್ಳಾರಿ: ಕ್ಯಾನ್ಸರ್‌ನಿಂದ ಮುಕ್ತಿ ಪಡೆಯಲು ಜಿಲ್ಲೆಯಲ್ಲಿ ನಿರಂತರವಾಗಿ ರೋಗ ತಪಾಸಣೆ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಬಿ.ಎಸ್‌.ಹಂದ್ರಾಳ್‌ ಹೇಳಿದರು.

ನಗರದ ಡಿಎಚ್ಒ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಾಂಕ್ರಾಮಿಕ ರೋಗಗಳ ಘಟಕ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಹಯೋಗದಲ್ಲಿ ವಿಶ್ವ ಕ್ಯಾನ್ಸರ್‌ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ದೇಶದಲ್ಲಿ ಪ್ರತಿ 8 ನಿಮಿಷಕ್ಕೊಮ್ಮೆ ಗರ್ಭಕಂಠದ ಕ್ಯಾನ್ಸರ್‌ನಿಂದ ಒಬ್ಬ ಮಹಿಳೆಯು ಸಾವನ್ನಾಪ್ಪ್ಪುತ್ತಿದ್ದಾರೆ. ಕ್ಯಾನ್ಸರ್‌ ರೋಗವು ತಂಬಾಕು ಸೇವನೆ, ಬೀಡಿ, ಸಿಗರೇಟ್, ಗುಟ್ಕಾ ಸೇವನೆಯಿಂದ ಬರುತ್ತದೆ. ಈ ರೋಗಕ್ಕೆ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಚಿಕಿತ್ಸೆ ನೀಡುತ್ತಿದ್ದು, ಅದರ ಸದುಪಯೋಗ ಪಡೆದುಕೊಂಡು ಆರೋಗ್ಯವಂತರಾಗಿರಬೇಕೆಂದು ಕರೆ ನೀಡಿದರು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ಶಿವರಾಜ್‌ ಹೆಡೆ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ವರ್ಷದಲ್ಲಿ 71867 ಜನರನ್ನು ಪರೀಕ್ಷಿಸಲಾಗಿದ್ದು, ಇವರಲ್ಲಿ 472 ಜನರನ್ನು ಹೆಚ್ಚಿನ ಪರೀಕ್ಷೆಗಾಗಿ ರೆಫರ್‌ ಮಾಡಲಾಗಿದೆ. ಜಿಲ್ಲಾ ಹಾಗೂ ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಪತ್ತೆ ಹಚ್ಚಲ್ಪಟ್ಟ ಶಂಕಿತ ರೋಗಿಯನ್ನು ವಿಮ್ಸ್‌ ಕ್ಯಾನ್ಸರ್‌ ವಿಭಾಗಕ್ಕೆ ಕಳುಹಿಸಿಕೊಡಲಾಗುತ್ತದೆ. ಕ್ಯಾನ್ಸರ್‌ ರೋಗದ ಬಗ್ಗೆ ವೈದ್ಯರ ಬಳಿ ತೆರಳಿ ತಪಾಸಣೆ ಮಾಡಿಸುವುದು ಹಾಗೂ ಬಾಯಿ ಕ್ಯಾನ್ಸರ್‌ ಇತರೇ ಕ್ಯಾನ್ಸರ್‌ಗಳಿಗೆ ಕಾರಣವಾಗುವುದರಿಂದ ಬಯಾಪ್ಸಿ ಪರೀಕ್ಷೆ ಮಾಡಿಸಿಕೊಂಡು ರೋಗ ಇದೆ ಅಥವಾ ಇಲ್ಲ ಎಂಬ ಕುರಿತು ಖಚಿತ ಪಡಿಸಿಕೊಳ್ಳಬೇಕು ಎಂದರು.

‘ನಾನು ಮತ್ತು ನನ್ನ ಸಂಕಲ್ಪ ನಾವು ಒಟ್ಟಾಗಿ ಕೈಜೋಡಿಸಿದರೆ ಕ್ಯಾನ್ಸರ್‌ ಗೆಲ್ಲಬಹುದು’ ಎಂಬ ಘೋಷವಾಕ್ಯದೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.

ಜಾಥಾದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಎನ್‌.ಬಸರೆಡ್ಡಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಅನಿಲ್‌ಕುಮಾರ್‌, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ| ರಾಜಶೇಖರ್‌ ರೆಡ್ಡಿ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ| ನಿಜಾಮುದ್ದೀನ್‌, ಆರ್‌.ಸಿ.ಎಚ್ ಅಧಿಕಾರಿ ಡಾ| ರವೀಂದ್ರನಾಥ್‌, ತಾಲೂಕು ಆರೋಗ್ಯಾಧಿಕಾರಿ ಡಾ| ಅಬ್ದುಲ್ಲಾ, ಎನ್‌ಸಿಡಿ ಕಾರ್ಯಕ್ರಮದ ವ್ಯವಸ್ಥಾಪಕ ಡಾ| ಶಗುಪ್ತಾ ಶಾಹೀನ್‌, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್‌ ದಾಸಪ್ಪನವರ್‌, ಜಿಲ್ಲಾ ಕೀಟಶಾಸ್ತ್ರಜ್ಞ ಡಾ| ಸುಧಾರಾಣಿ, ನಂದಾ ಕಡಿ, ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣ ನಾಯ್ಕ, ಜಯಶ್ರೀ, ಬಂಡೆಪ್ಪ, ಶಾಂತಮ್ಮ ಉಪ್ಪಾರ್‌, ಬೋಜರಾಜ, ಆಶಾ ಕಾರ್ಯಕರ್ತರು, ಸರ್ಕಾರಿ ಸುಶ್ರೂಷಕ ತರಬೇತಿ ಕೇಂದ್ರದ ಪ್ರತಿಶಿಕ್ಷಾರ್ಥಿಗಳು ಸೇರಿದಂತೆ ಇನ್ನಿತರರಿದ್ದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.