ಅಂಗಡಿಗೆ ಬೆಂಕಿ: 8 ಲಕ್ಷ ರೂ. ನಷ್ಟ
Team Udayavani, Feb 23, 2018, 1:05 PM IST
ಬಸವಕಲ್ಯಾಣ: ರೆಡಿಯಂ ಸ್ಟಿಕರ್ ಅಂಗಡಿಗೆ ಬೆಂಕಿ ತಗುಲಿ ಸುಮಾರು 8 ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮವಾದ ಘಟನೆ ನಗರದ ಟೂರಿಸ್ಟ್ ಲಾಡ್ಜ್ ಬಳಿ ಬುಧವಾರ ರಾತ್ರಿ ನಡೆದಿದೆ.
ಮಸ್ತಾನ್ ಆರ್ಟ್ಸ್ ಎನ್ನುವ ರೆಡಿಯಂ ಸ್ಟಿಕರ್ ಅಂಗಡಿಗೆ ಬೆಂಕಿ ತಗುಲಿದ್ದು, ಶಾರ್ಟ್ ಸರ್ಕ್ನೂಟ್ನಿಂದ ಬೆಂಕಿ ತಗುಲಿದೆ ಎಂದು ಶಂಕಿಸಲಾಗಿದೆ. ಸುದ್ದಿ ತಿಳಿದ ಅಗ್ನಿ ಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಅವರು ಬರುವ ಮುನ್ನವೆ ಅಂಗಡಿ ಸಂಪೂರ್ಣ ಭಸ್ಮವಾಗಿತ್ತು ಎನ್ನಲಾಗಿದೆ.
4 ಲಕ್ಷ ರೂ. ಮೌಲ್ಯದ ಸಿಎನ್ಸಿ ಯಂತ್ರ, 80 ಸಾವಿರ ಮೌಲ್ಯದ ರೆಡಿಯಂ ಸ್ಟಿಕರ್ ಕಟ್ ಮಾಡುವ ಯಂತ್ರ, ಒಂದು ಕಂಪ್ಯೂಟರ್, ರೆಡಿಯಂ ಸ್ಟಿಕರ್ ರೂಲ್ಗಳು ಸೇರಿದಂತೆ ಇತರ ಯಂತ್ರಗಳು ಹಾಗೂ ಅಂಗಡಿಯಲ್ಲಿಯ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಸುಮಾರು 8 ಲಕ್ಷಕ್ಕೂ ಅಧಿಕ ಹಾನಿ ಸಂಭವಿಸಿದೆ. ಘಟನೆ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಈ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ
ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ
MUST WATCH
ಹೊಸ ಸೇರ್ಪಡೆ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ