ಬಯಲು ಶೌಚದಿಂದ ಇನ್ನೂ ಸಿಕ್ಕಿಲ್ಲ ಮುಕ್ತಿ!


Team Udayavani, Jun 18, 2018, 10:26 AM IST

bidar-1.jpg

„ದುರ್ಯೋಧನ ಹೂಗಾರ 
ಬೀದರ: ಗ್ರಾಮಗಳನ್ನು ಬಯಲು ಶೌಚದಿಂದ ಮುಕ್ತಗೊಳಿಸುವ ಉದ್ದೇಶದಿಂದ ಆರಂಭವಾದ ವೈಯಕ್ತಿಕ ಶೌಚಾಲಯ ನಿರ್ಮಾಣದ ಅಭಿಯಾನ ನಾಲ್ಕು ವರ್ಷಗಳಿಂದ ನಡೆಯುತ್ತಿದ್ದರೂ ಜಿಲ್ಲೆಯಲ್ಲಿ ನಿರೀಕ್ಷಿತ ಗುರಿ ಸಾಧನೆಯಾಗಿಲ್ಲ. ಈವರೆಗೆ ಕೇವಲ ಶೇ.53.39ರಷ್ಟು ಮಾತ್ರ ಗುರಿ ಸಾಧಿಸಲಾಗಿದ್ದು, 2019ರ ಅಂತ್ಯಕ್ಕೆ 1.02 ಲಕ್ಷ ಶೌಚಾಲಯಗಳನ್ನು ನಿರ್ಮಿಸಬೇಕಾಗಿದೆ.

ಸ್ವಚ್ಛ ಭಾರತ ಮಿಷನ್‌ ಯೋಜನೆಯಡಿ ಶೌಚಾಲಯ ನಿರ್ಮಾಣ ಕಾರ್ಯ ನಡೆಯುತ್ತಿದ್ದು, 2018-19ನೇ ಸಾಲಿನಲ್ಲಿ ರಾಜ್ಯವನ್ನು ಬಯಲು ಬಹಿರ್ದೆಸೆ ಮುಕ್ತ ಮಾಡುವ ಗುರಿ ಹೊಂದಲಾಗಿದೆ. ಆದರೆ, ಜಿಲ್ಲೆಯಲ್ಲಿ ಮಾತ್ರ ಶೌಚಾಲಯ ನಿರ್ಮಾಣ ಕಾರ್ಯ ಮಂದಗತಿಯಿಂದ ನಡೆಯುತ್ತಿರುವುದು ಅಂಕಿ ಅಂಶಗಳಿಂದ ಗೊತ್ತಾಗಿದೆ.

ಕೇಂದ್ರ ಸರ್ಕಾರ 2013-14ನೇ ಸಾಲಿನಲ್ಲಿ ಸಹಾಯ ಧನದ ಮೂಲಕ ದೇಶದ ಪ್ರತಿಯೊಂದು ಗ್ರಾಮಗಳ ಕುಟುಂಬಗಳಿಗೆ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಮುಂದಾಗಿತ್ತು. ಮೊದಲ ವರ್ಷದಲ್ಲಿ ಜಿಲ್ಲೆಯಲ್ಲಿ 2,849 ಶೌಚಾಲಯಗಳು ನಿರ್ಮಾಣಗೊಂಡಿದ್ದವು. 2014-15ನೇ ಸಾಲಿನಲ್ಲಿ 11,757, 2015-16ರಲ್ಲಿ 15,146, 2016-17ರಲ್ಲಿ 17,175, 2017-18ನೇ ಸಾಲಿನಲ್ಲಿ 52,756, 2018-19ನೇ ಸಾಲಿನಲ್ಲಿ ಸದ್ಯ 6,830 ಶೌಚಾಲಯಗಳನ್ನು ನಿರ್ಮಿಸಲಾಗಿದೆ.

ಜಿಲ್ಲೆಯಲ್ಲಿ ಒಟ್ಟು 185 ಗ್ರಾಮ ಪಂಚಾಯತಗಳಿದ್ದು, ಜಿಲ್ಲೆಯಲ್ಲಿ 2,19,924 ಶೌಚಾಲಯ ನಿರ್ಮಿಸುವ ಗುರಿ ಇತ್ತು. ಆದರೆ ಈವರೆಗೆ 1,17,416 ಶೌಚಾಲಯಗಳು ಮಾತ್ರ ನಿರ್ಮಾಣವಾಗಿವೆ. 2019ರ ವರ್ಷಾಂತ್ಯಕೆ ಇನ್ನೂ 1,02,508 ಶೌಚಾಲಯಗಳನ್ನು ನಿರ್ಮಿಸಬೇಕಿದೆ.  ಸದ್ಯ ಜಿಲ್ಲೆಯ 185 ಗ್ರಾಪಂ ಪೈಕಿ 12 ಗ್ರಾಪಂಗಳು ಬಯಲು ಬಹಿರ್ದೆಸೆ ಮುಕ್ತಗೊಂಡಿವೆ ಎಂದು ಘೋಷಿಸಲಾಗಿದೆ. 604 ಗ್ರಾಮಗಳ ಪೈಕಿ 86 ಗ್ರಾಮಗಳು ಸಂಪೂರ್ಣ ಬಹಿರ್ದೆಸೆ ಮುಕ್ತಗೊಂಡಿದ್ದು, ಇನ್ನೂ 518 ಗ್ರಾಮಗಳನ್ನು ಮುಂದಿನ ಆರು ತಿಂಗಳಲ್ಲಿ ಬಯಲು ಶೌಚಮುಕ್ತಗೊಳಿಸಬೇಕಾದ ಗುರಿ ಜಿಲ್ಲಾ ಪಂಚಾಯತ ಅಧಿಕಾರಿಗಳದ್ದಾಗಿದೆ.

7 ಗ್ರಾಪಂಗಳಿಗೆ 25 ಲಕ್ಷ ಅನುದಾನ: 2017-18ನೇ ಸಾಲಿನಲ್ಲಿ ಸ್ವಚ್ಛ ಭಾರತ ಮಿಷನ್‌ ಯೋಜನೆಯಡಿ
ಬಯಲು ಬಹಿರ್ದೆಸೆ ಮುಕ್ತವೆಂದು ಘೋಷಣೆ ಆಗಿರುವ 7 ಗ್ರಾಮ ಪಂಚಾಯತಗಳಿಗೆ ಹೈದ್ರಾಬಾದ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ತಲಾ 25 ಲಕ್ಷ ರೂ. ಪುರಸ್ಕಾರ ಅನುದಾನ ಒದಗಿಸುವಂತೆ ಏಪ್ರಿಲ್‌ ತಿಂಗಳಲ್ಲಿ ಜಿಲ್ಲಾ ಪಂಚಾಯತದಿಂದ ಎಚ್‌ಕೆಆರ್‌ಡಿಬಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. 

ಬಸವಕಲ್ಯಾಣ ತಾಲೂಕಿನ ಸಪ್ತಾಪುರ, ತೊಗಲೂರ, ಚಿಕನಗಾಂವ, ಚಾಂಜೋಳ, ಹಣಮಂತವಾಡಿ,
ಔರಾದ ತಾಲೂಕಿನ ಚಿಂತಾಕಿ, ಭಾಲ್ಕಿ ತಾಲೂಕಿನ ಅಟ್ಟರ್ಗಾ ಪಂಚಾಯತಗಳಿಗೆ ತಲಾ 25 ಲಕ್ಷ ರೂ.
ಮೊತ್ತದ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಸ್ತಾಪಿಸಲು ಸೂಚಿಸಲಾಗಿದೆ.

ಜಿಪಂ ಅಧ್ಯಕ್ಷ-ಉಪಾಧ್ಯಕ್ಷರ ನಿರ್ಲಕ್ಷ: ಶೌಚಾಲಯ ನಿರ್ಮಾಣದ ಬಗ್ಗೆ ಜಿಲ್ಲಾ ಪಂಚಾಯತ ಅಧ್ಯಕ್ಷೆ ಭಾರತಬಾಯಿ ಶೇರಿಕಾರ್‌ ಹಾಗೂ ಉಪಾಧ್ಯಕ್ಷ ಡಾ| ಪ್ರಕಾಶ ಪಾಟೀಲ ಅವರ ಮಾತುಗಳು ಭಾಷಣಕ್ಕೆ ಮಾತ್ರ ಸೀಮಿತವಾಗಿವೆ. ಗ್ರಾಮೀಣ ಭಾಗದಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರು ಆಸಕ್ತಿ ತೊರುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಅಧ್ಯಕ್ಷ-ಉಪಾಧ್ಯಕ್ಷರು ಪ್ರತಿನಿಧಿಸುವ ಕ್ಷೇತ್ರಗಳೇ ಇಂದಿಗೂ ಬಯಲು ಬಹಿರ್ದೆಸೆ ಮುಕ್ತಗೊಂಡಿಲ್ಲ. ಇಂತಹ ಸ್ಥಿತಿಯಲ್ಲಿ ಸ್ವಚ್ಛ  ಭಾರತ ಮಿಷನ್‌ ಸಂಪೂರ್ಣ ಯಶಸ್ವಿಯಾಗುವುದು ಹೇಗೆ ಸಾಧ್ಯ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ಬಳಕೆಯಾಗದ ಶೌಚಾಲಯ: ಗ್ರಾಮೀಣ ಭಾಗದಲ್ಲಿ ಸರಕಾರದ ಸಹಾಯ ಧನ ಪಡೆದು ನಿರ್ಮಿಸಿಕೊಂಡ ವೈಯಕ್ತಿಕ ಶೌಚಾಲಯಗಳನ್ನು ಜನರು ಬಳಸುತ್ತಿಲ್ಲ ಎಂಬ ಅಂಶ ಬೆಳಕಿಗೆ ಬಂದಿವೆ. ಕಟ್ಟಿಕೊಂಡ ಶೌಚಾಲಗಳಲ್ಲಿ ಹುಲ್ಲು, ಸಗಣಿ ಇತರೆ ಸಾಮಾನುಗಳನ್ನು ಇಡುವುದು.  ಸ್ನಾನದ ಮನೆ ಮಾಡಿಕೊಳ್ಳುವ ಮೂಲಕ ಶೌಚಾಲಯದ ಉದ್ದೇಶ ಈಡೇರದಂತಾಗಿದೆ. ಇನ್ನು ಕೆಲವರು ಮನೆಗಳಲ್ಲಿ ಶೌಚಾಲಯ ನಿರ್ಮಿಸಿಕೊಂಡರೂ ಬಯಲಿಗೆ ಹೋಗುವುದು ಸಾಮಾನ್ಯವಾಗಿದೆ. ಈ ಕುರಿತು ಅಧಿಕಾರಿಗಳು ಜಾಗೃತಿ ಮೂಡಿಸಿದರೂ ಕೂಡ ಪ್ರಯೋಜನ ಆಗುತ್ತಿಲ್ಲ ಎಂಬುದು ಇಲಾಖೆ ಅಧಿಕಾರಿಗಳ ಅಳಲು. ಸಂಪೂರ್ಣ ಬಯಲು ಶೌಚ ಮುಕ್ತ ಗ್ರಾಮ ನಿರ್ಮಾಣ ಕಾರ್ಯಕ್ಕೆ ಸ್ಥಳೀಯ
ಜನ ಪ್ರತಿನಿಧಿಗಳ ಸಾಥ್‌ ಅಗತ್ಯವಾಗಿದೆ.

ಶೌಚಾಲಯ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಪ್ರತಿವರ್ಷ ಗುರಿ ಸಾಧನೆ ಮಾಡಲಾಗುತ್ತಿದೆ. ಜನರು ನಿರ್ಮಿಸಿಕೊಂಡ ಶೌಚಾಲಯಗಳನ್ನು ಬಳಸುತ್ತಿಲ್ಲ ಎಂಬ ಅಂಶ ಬೆಳಕಿಗೆ ಬಂದಿದ್ದು, ಮುಂದಿನ ದಿನಗಳಲ್ಲಿ ಶೌಚಾಲಯ ಬಳಸುವಂತೆ ಜಾಗೃತಿ ಮೂಡಿಸಲಾಗುವುದು. ಅಲ್ಲದೆ ಶೌಚಾಲಯ ದುರ್ಬಳಕೆ ಮಾಡಿಕೊಳ್ಳುವ ಫಲಾನುಭವಿಗಳಿಗೆ ನೋಟಿಸ್‌ ನೀಡಿ ಎಚ್ಚರಿಸುವ ಕಾರ್ಯ ಮಾಡಲಾಗುವುದು. ಸರಕಾರದ ಅನುದಾನ ಪಡೆದು ನಿರ್ಮಿಸಿಕೊಂಡ ಶೌಚಾಲಯಗಳು  ಬಳಕೆ ಆಗಬೇಕು ಎಂಬುದು ಇಲಾಖೆಯ ಉದ್ದೇಶವಾಗಿದೆ. ಈ ಕಾರ್ಯಕ್ಕೆ ಎಲ್ಲರೂ ಸಾಥ್‌ ನೀಡಬೇಕಾಗಿದೆ.

 ಡಾ| ಗೌತಮ ಅರಳಿ ಸ್ವಚ್ಛ  ಭಾರತ ಜಿಲ್ಲಾ ನೋಡಲ್‌ ಅಧಿಕಾರಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.