ಹೊರ ಗುತ್ತಿಗೆ ನೌಕರರ ಕಾಯಂಗೊಳಿಸಲು ಒತ್ತಾಯ

Team Udayavani, Jun 18, 2018, 10:59 AM IST

bidar-2.jpg

ಬಸವಕಲ್ಯಾಣ: ಸರ್ಕಾರದ ವಿವಿಧ ವಸತಿ ನಿಲಯಗಳಲ್ಲಿ ಕೆಲಸ ಮಾಡುತ್ತಿರುವ ಡಿ ವರ್ಗದ ಹೊರಗುತ್ತಿಗೆ ನೌಕರರ ಸೇವಾ ಭದ್ರತೆ ಸೇರಿದಂತೆ ಇತರ ಬೇಡಿಕೆಗಳ ಈಡೇರಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್‌ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ತಾಲೂಕು ಸಮಿತಿಯಿಂದ ಶಾಸಕ ಬಿ.ನಾರಾಯಣರಾವ್‌ ಅವರಿಗೆ ಮನವಿ ಸಲ್ಲಿಸಲಾಯಿತು.

ಸಮಾನ ಕೆಲಸಕ್ಕೆ ಸಮಾನ ವೇತನ, ಇಲಾಖೆಯಿಂದಲೇ ವೇತನ ಪಾವತಿ, ಏಕರೂಪ ಸೇವಾ ನಿಯಮಾವಳಿ ಹಾಗೂ ಕಾರ್ಮಿಕ ಕಾನೂನು ಜಾರಿಗೆ ಕ್ರಮ ಕೈಗೊಳ್ಳಬೇಕು. ನೇರ ನೇಮಕಾತಿ ಕ್ರಮದಿಂದಾಗಿ ಹಲವು ವರ್ಷಗಳಿಂದ ಹಾಸ್ಟೆಲ್‌ಗ‌ಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಡಿ ವರ್ಗದ ನೌಕರರು ಕೆಲಸ ಕಳೆದುಕೊಳ್ಳುವ ಆತಂಕಕ್ಕೆ ಸಿಲುಕಿದ್ದಾರೆ ಎಂದು ಸಮಸ್ಯೆ ವಿವರಿಸಿದರು.

ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ನಿಲಯಗಳು ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳು ನಡೆಸುತ್ತಿರುವ ವಸತಿ ಶಾಲಾ-ಕಾಲೇಜುಗಳಲ್ಲಿ ಅಡುಗೆ, ಅಡುಗೆ ಸಹಾಯಕ, ಸ್ವತ್ಛತೆ ಸಿಬ್ಬಂದಿ ಇತರ ಕೆಲಸವನ್ನು ಹೊರ ಗುತ್ತಿಗೆ ಆಧಾರದಲ್ಲಿ ಕಳೆದ ಹತ್ತಾರು ವರ್ಷಗಳಿಂದ ದುಡಿಯುತ್ತ ಬಂದಿರುವ ದಲಿತ, ಹಿಂದುಳಿದ, ಅಲ್ಪಸಂಖ್ಯಾತ ವರ್ಗದ ಕಾರ್ಮಿಕರೆ ಇದ್ದು, ನಮ್ಮ ಸೇವೆ ಖಾಯಂಗೊಳಿಸುವಂತೆ ಹಲವು ವರ್ಷಗಳಿಂದ ಒತ್ತಾಯಿಸುತ್ತಿದ್ದೇವೆ ಎಂದು ಮನವಿಯಲ್ಲಿ ವಿವರಿಸಿದ್ದಾರೆ.

ಡಿ ವರ್ಗದ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ 10ನೇ ತರಗತಿ ಪಾಸಾದ ಅಭ್ಯರ್ಥಿಗಳನ್ನು ನೇಮಿಸಲು ಸರ್ಕಾರ ಮುಂದಾಗಿದೆ. ಸರ್ಕಾರದ ಈ ಕ್ರಮದಿಂದ ಈಗಾಗಲೇ ಹುದ್ದೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರು ಕೆಲಸ ಕಳೆದುಕೊಳ್ಳುವ ಅಪಾಯ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಿ, ನಮ್ಮ ಸೇವೆ ಖಾಯಂಗೊಳಿಸಲು ಮುಂದಾಗಬೇಕು. ಹಾಲಿ ಹೊರಗುತ್ತಿಗೆ ನೌಕರರ ನಿವೃತ್ತಿ ವಯಸ್ಸು ತಲುಪುವವರೆಗೆ ಅವರಿಗೆ ಸೇವಾ ಭದ್ರತೆ ಒದಗಿಸಬೇಕು.

ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ. ಸಂಘದ ಜಿಲ್ಲಾಧ್ಯಕ್ಷ ಇಸಾಮೋದ್ದಿನ್‌, ಜಿಲ್ಲಾ ಸಹ ಕಾರ್ಯದರ್ಶಿಗಳಾದ ಪ್ರತಿಭಾ ಜಿ., ಅಂಬುಬಾಯಿ ಮಾಳಗೆ, ತಾಲೂಕು ಅಧ್ಯಕ್ಷ ಅಣ್ಣಬಸಪ್ಪ ಪೋಸ್ತೆ, ಪ್ರಮುಖರಾದ ರಾಮಲಿಂಗ ಮಂಠಾಳೆ, ಶರಣಬಸಪ್ಪ ಪೊಸ್ತೆ, ಹಣಮಂತರಾಯ ಸೇರಿದಂತೆ ಸಂಘದ ಪದಾಧಿಕಾರಿಗಳು, ಹೊರಗುತ್ತಿಗೆ ನೌಕಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.