ಹಳ್ಳಿಖೇಡ(ಬಿ) ಪುರಸಭೆ ಚುನಾವಣೆ ಮತದಾನಕ್ಕೆ ಸಜ್ಜು


Team Udayavani, Aug 31, 2018, 1:48 PM IST

bid-3.jpg

ಹುಮನಾಬಾದ: ಹಳ್ಳಿಖೇಡ(ಬಿ) ಪುರಸಭೆಯ 23ವಾರ್ಡ್‌ಗಳಿಗೆ ಆ.31ರಂದು ನಡೆಯುವ ಚುನಾವಣೆಗೆ ತಾಲೂಕು ಆಡಳಿತ ಸಂಪೂರ್ಣ ಸಜ್ಜಾಗಿದೆ. ಮತಗಟ್ಟೆ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಸಾರಿಗೆ ಸಂಸ್ಥೆ ಬಸ್‌, ಕ್ರೂಸರ್‌ ಮೊದಲಾದ ವಾಹನಗಳಲ್ಲಿ ಆಡಳಿತ ಗುರುವಾರ ಬೆಳಗ್ಗೆ ಮತದಾನ ನಡೆಯಲಿರುವ ಹಳ್ಳಿಖೇಡ(ಬಿ) ಪಟ್ಟಣದ ಸರ್ಕಾರಿ ಪ್ರೌಢಶಾಲೆಗೆ ಕಳಿಸಿದೆ. ಮತಗಟ್ಟೆ ಅಧಿಕಾರಿ ಹಾಗೂ ಸಿಬ್ಬಂದಿ ನಿಯೋಜಿಸಲಾದ ತಮ್ಮ ತಮ್ಮ ಮತಗಟ್ಟೆಗಳಿಗೆ, ಮತದಾನಕ್ಕೆ ಅಗತ್ಯವಿರುವ ಸಕಲ ಸಾಮಗ್ರಿ ಸಮೇತ ಸಂಜೆ 4ಗಂಟೆಯೊಳಗೆ ತೆರಳಿ ಮತದಾನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿರುವುದು ಕಂಡುಬಂತು.

ಎಸಿ ಅಂತಿಮ ಪರಿಶೀಲನೆ: ಚುನಾವಣೆ ಹಿನ್ನೆಲೆಯಲ್ಲಿ ಬುಧವಾರ ಜಿಲ್ಲಾಧಿಕಾರಿ ಎಚ್‌. ಆರ್‌.ಮಹಾದೇವ್‌ ಅವರು ಪರಿಶೀಲನೆ ನಡೆಸಿದ ಬೆನ್ನಲ್ಲೆ ಅವರ ಆದೇಶದನ್ವಯ ಬಸವಕಲ್ಯಾಣ ಉಪವಿಭಾಗಾಧಿಕಾರಿ ಶರಣಬಸಪ್ಪ ಕೊಟ್ಯಪ್ಪಗೋಳ್‌ ಅವರು ರಿಟೆನಿಂಗ್‌ ಅಧಿಕಾರಿಗಳು ಒಳಗೊಂಡಂತೆ ಚುನಾವಣಾ ವಿಭಾಗದ ಸಿಬ್ಬಂದಿಯ ಸಮೇತ ಗುರುವಾರ ತೆರಳಿ ಮತಗಟ್ಟೆ ಕೇಂದ್ರಗಳಲ್ಲಿ ಫ್ಯಾನ್‌, ವಿದ್ಯುತ್‌ ದೀಪ, ಕುಡಿಯುವ ನೀರು, ಶೌಚಾಲಯ ಇತರೆ
ವ್ಯವಸ್ಥೆಗಳ ಕುರಿತು ಪರಿಶೀಲಿಸಿದರು. ಮತಗಟ್ಟೆ ಅಧಿಕಾರಿ ಹಾಗೂ ಸಿಬ್ಬಂದಿ, ಪೊಲೀಸರನ್ನು ಒಳಗೊಂಡಂತೆ ಚುನಾವಣೆ ಸೇವೆಯಲ್ಲಿರುವ ಸಿಬ್ಬಂದಿಗೆ ಯಾವುದೇ ತೊಂದರೆಯಾಗದಂತೆ ಮುಂಜಾಗೃತಾ ಕ್ರಮ ಕೈಗೊಂಡು, ಶಾಂತಿಯುತ ಚುನಾವಣೆ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಯಾವ ವಾರ್ಡ್‌, ಮತಗಟ್ಟೆ ಎಲ್ಲಿ?: 1-ಹನುಮಾನ ಮಂದಿರ ಹತ್ತಿರದ ಅಂಗನವಾಡಿ ಕೇಂದ್ರ, 2-ಪಾಗಾ ಗಲ್ಲಿ ಅಂಗನವಾಡಿ ಕೇಂದ್ರ, 3-ಸರ್ಕಾರಿ ಪ್ರೌಢಶಾಲೆ ಶಾಲೆಯ ಎಡ ಭಾಗದ ಕಟ್ಟಡ, 4-ಸರ್ಕಾರಿ ಪ್ರೌಢಶಾಲೆ ಬಲಭಾಗದ ಕಟ್ಟಡ, 5-ಸರ್ಕಾರಿ ಪ್ರೌಢಶಾಲೆಯ ಮಧ್ಯಭಾಗದ ಕಟ್ಟಡ, 6-ಸರ್ಕಾರಿ ಪ್ರೌಢ ಶಾಲೆಯ ಕೆಇಬಿ ಕಟ್ಟಡ ಪಕ್ಕದ ಕೊಠಡಿ, 7-ಕಿಂಡಿ ಬಾಹೇರ್‌ ಸಮೀಪದ ಅಂಗನವಾಡಿ ಕೇಂದ್ರ, 8-ವಡ್ಡರ ಗಲ್ಲಿ ಹತ್ತಿರದ ಅಂಗನವಾಡಿ ಕೇಂದ್ರ, 9-ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಎಡ ಭಾಗದ ಕಟ್ಟಡ, 10- ಮರಗೆಮ್ಮ ದೇವಸ್ಥಾನ ಪಕ್ಕದ ಅಂಗನವಾಡಿ ಕಟ್ಟಡ, 11-ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಡ ಭಾಗದ ಹೊಸ ಕಟ್ಟಡ, 12-ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸ ಕಟ್ಟಡ ಬಲಭಾಗದ ಕೋಣೆ, 13- ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಬಲ ಭಾಗದ ಕಟ್ಟಡ, 14-ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಎಡ ಭಾಗದ ಕಟ್ಟಡ, 15- ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಬಲಭಾಗದ ಕಟ್ಟಡ, 16-ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಮಧ್ಯಭಾಗದ ಕಟ್ಟಡ, 17-ತಕ್ಯಾಗಲ್ಲಿ ಮುರಾದನಗರ ಅಂಗನವಾಡಿ ಕೇಂದ್ರ ಕಟ್ಟಡ, 18-ಪಶು ವೈದ್ಯಕೀಯ ಆಸ್ಪತ್ರೆ ಕಟ್ಟಡ, 19- ಪುರಸಭೆ ಕಾರ್ಯಾಲಯದ ಪಕ್ಕದ ಗ್ರಂಥಾಲಯ ಕಟ್ಟಡ, 20-ಪುರಸಭೆ ಕಾರ್ಯಾಲಯ ಕಟ್ಟಡ, 21-ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಎಐಪಿ ಕಟ್ಟಡ, 22-ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಎಡ ಭಾಗದ ಕಟ್ಟಡ, 23-ಬಿಸ್‌.ಎಸ್‌.ಕೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡ.

ಸೂಕ್ಷ್ಮ 2,7,11,18,23. ಅತೀ ಸೂಕ್ಷ್ಮ: 1,3,12,17,19 ಹಾಗೂ 13 ಸಾಧಾರಣ ಮತಗಟ್ಟೆಗಳೆಂದು ಗುರುತಿಸಲಾಗಿದೆ. ರಿಟೇನಿಂಗ್‌ ಅಧಿಕಾರಿಗಳಾದ ಡಾ| ಶಂಕರ ಪಟವಾರಿ, ಶಂಭುಲಿಂಗ ಹಿರೇಮಠ, ಶಿವರಾಚಪ್ಪ
ವಾಲಿ, ಸಿಪಿಐ ಜೆ.ಎಸ್‌. ನ್ಯಾಮಗೌಡರ್‌, ಪಿಎಸ್‌ ಐಗಳಾದ ಖಾಜಾ ಹುಸೇನಿ, ಎ.ಟಿ. ಸಂತೋಷ ಸೇರಿದಂತೆ ಹುಮನಾಬಾದ್‌ ಉಪವಿಭಾಗ ವ್ಯಾಪ್ತಿಯ ಪ್ರಮುಖ ಅಧಿಕಾರಿ ಹಾಗೂ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.