ವೆಂಟಿಲೇಟರ್ ಕದ್ದು ಪರಾರಿಯಾದ ಖತರ್ನಾಲ್ ಖದೀಮರು..!
Team Udayavani, Jun 9, 2021, 9:18 PM IST
ಬೀದರ: ನಗರದ ಬ್ರೀಮ್ಸ್ ಆಸ್ಪತ್ರೆಯ ಕೋವಿಡ್ ವಾರ್ಡ್ನಲ್ಲಿ ಸುಮಾರು 15 ಲಕ್ಷ ಬೆಲೆ ಬಾಳುವ ಎರಡು ವೆಂಟಿಲೇಟರ್ ಸಿಪಿಓಗಳನ್ನು ಕಿಡಿಗೇಡಿಗಳು ಕಳ್ಳತನ ಮಾಡಿರುವ ಘಟನೆ ಇಂದು(ಬುಧವಾರ, ಜೂನ್ 9) ಬೆಳಿಗ್ಗೆ ನಡೆದಿದೆ.
ಇದನ್ನೂ ಓದಿ : ಚಿಕ್ಕಬಳ್ಳಾಪುರ: 1126 ಗ್ರಾಮಗಳು ಮತ್ತು 39 ವಾರ್ಡ್ಗಳು ಕೊರೊನಾ ಮುಕ್ತ: ಡಿಸಿ
ಬೀದರ ಜಿಲ್ಲೆಯಲ್ಲಿ ಸದ್ಯ ಕೊರೊನಾ ಸೋಂಕಿತರ ಪ್ರಜರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಬ್ರಿಮ್ಸ್ ಗೆ ದಾಖಲಾಗುವವರ ಸಂಖ್ಯೆಯೂ ಕಡಿಮೆಯಾಗಿದೆ. ಇದನ್ನ ಗಮನಿಸಿದ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ. ಆಸ್ಪತ್ರೆಯ ಹಿಂಭಾಗದಲ್ಲಿ ಸಿಸಿ ಕ್ಯಾಮರಾ ಇಲ್ಲದಿರುವುದನ್ನು ನೋಡಿ ಕಿಟಕಿಯ ಗಾಜು ಹೊಡೆದು ಒಳಗೆ ಪ್ರವೇಶಿಸಿ, ಎರಡು ವೆಂಟಿಲೇಟರ್ ಸಿಪಿಓಗಳನ್ನು ಕಳ್ಳತನ ಮಾಡಿದ್ದಾರೆ.
ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಚಂದ್ರಕಾಂತ ಮೇದಾ ಅವರ ದೂರಿನ ಮೇರೆಗೆ ನ್ಯೂ ಟೌನ್ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡು ಕಳ್ಳರ ಬಂಧನಕ್ಕೆ ಜಾಲ ಬೀಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಡಿವೈಎಸ್.ಪಿ ಗೋಪಾಲ್ ಬ್ಯಾಕೋಡ್ ಅವರು ಬ್ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಮಕ್ಕಳಲ್ಲಿ ಕೋವಿಡ್ ಸೋಂಕು ನಿರ್ವಹಣೆಯ ಕಾರ್ಯಾಗಾರಕ್ಕೆ ಸಚಿವ ಆರ್. ಅಶೋಕ್ ಚಾಲನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ