ಡಿಸಿಸಿ ಬ್ಯಾಂಕ್‌ ಗ್ರಾಹಕರಿಗೆ ಆನ್‌ಲೈನ್‌ ಬ್ಯಾಂಕಿಂಗ್‌ ಸೇವೆ


Team Udayavani, Nov 11, 2018, 12:35 PM IST

bid-3.jpg

ಬೀದರ: ಸಹಕಾರ ಕ್ಷೇತ್ರದ ಜಿಲ್ಲಾ ಡಿಸಿಸಿ ಬ್ಯಾಂಕ್‌ ಶೀಘ್ರದಲ್ಲೇ ಬ್ಯಾಂಕ್‌ ಗ್ರಾಹಕರಿಗೆ ಆನ್‌ಲೈನ್‌ ಬ್ಯಾಂಕಿಂಗ್‌ ಹಾಗೂ ಮೂಬೈಲ್‌ ವ್ಯಾನ್‌ ಸೇವೆಗಳನ್ನು ನೀಡುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದ್ದು, ಮುಂದಿನ ಮೂರು ತಿಂಗಳಲ್ಲಿ ಯೋಜನೆ ಜಾರಿ ಮಾಡುವ ಗುರಿ ಇದೆ ಎಂದು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಹೇಳಿದರು.

ನಗರದ ಡಿಸಿಸಿ ಬ್ಯಾಂಕ್‌ ಸಭಾಂಗಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕ್‌ ಗ್ರಾಹಕರಿಗೆ ಆಧುನಿಕ ಸೇವೆಗಳನ್ನು ನೀಡುವ ನಿಟ್ಟಿನಲ್ಲಿ ಕ್ರಿಯಾ ಯೋಜನೆಗಳನ್ನು ಮಾಡಲಾಗಿದೆ. ಪ್ರಾಯೋಗಿಕವಾಗಿ ನಗರ ಪ್ರದೇಶದಲ್ಲಿ ಮೂಬೈಲ್‌ ವಾಹನವೊಂದು ಸಂಚರಿಸಿ ಬ್ಯಾಂಕಿನ ಎಲ್ಲಾ ಸೇವೆಗಳನ್ನು ನೀಡುವ ಗುರಿ ಹೊಂದಿದೆ.
ಖಾತೆಗೆ ಹಣ ಭರಿಸುವುದು, ಖಾತೆಯಿಂದ ಹಣ ತೆಗೆಯುವುದು ಸೇರಿದಂತೆ ವಿವಿಧ ಸೌಲಭ್ಯಗಳು ಮೂಬೈಲ್‌ ವಾಹನದಲ್ಲಿ ಇರಲಿವೆ ಎಂದು ತಿಳಿಸಿದರು.

ಅಲ್ಲದೆ ಗ್ರಾಹಕರ ಅಂಗೈಯಲ್ಲಿರುವ ಸ್ಮಾರ್ಟ್‌ಫೋನ್‌ ಮೂಲಕ ಬ್ಯಾಂಕ್‌ ಶಾಖೆಗೆ ಹೋಗದೆಯೇ ಬ್ಯಾಂಕಿಂಗ್‌ ವ್ಯವಹಾರಗಳನ್ನು ನಡೆಸುವ ವ್ಯವಸ್ಥೆಗಳು ಜಾರಿಯಾಗಲಿವೆ. ಜಿಲ್ಲಾದ್ಯಂತ ಡಿಸಿಸಿ ಬ್ಯಾಂಕಿನ ಒಟ್ಟು 45 ಶಾಖೆಗಳು ಕಾರ್ಯ ನಿರ್ವಹಿಸುತ್ತಿವೆ. ಬ್ಯಾಂಕಿನ ಅಡಿಯಲ್ಲಿ ಒಟ್ಟು 171 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಕಾರ್ಯ ನಿರ್ವಹಿಸುತ್ತಿವೆ.
 
ಬ್ಯಾಂಕಿನಲ್ಲಿ 1459.42 ಕೋಟಿ ಉಳಿತಾಯ ಠೇವಣಿ ಇದೆ. 579.43 ಕೋಟಿ ಚಾಲ್ತಿ ಠೇವಣಿ ಇದೆ. ಇತರೆ 1.74 ಕೋಟಿ ಠೇವಣಿ ಹಾಗೂ 855.03 ಕೋಟಿ ಮುದ್ದತು ಠೇವಣಿ ಹೊಂದಿದೆ ಎಂದು ಮಾಹಿತಿ ನೀಡಿದರು.

2017-18ನೇ ಸಾಲಿನಲ್ಲಿ 105.42 ಕೋಟಿ ಬ್ಯಾಂಕಿನ ಶೇರು ಬಂಡಾವಾಳದ ಮೊತ್ತ ಇದ್ದು, 267.63 ಕೋಟಿ ಬ್ಯಾಂಕಿನ ಕಾಯ್ದಿಟ್ಟ ನಿಧಿ ಹಾಗೂ 373.04 ಕೋಟಿ ಸ್ವಂತ ಬಂಡವಾಳ ಬ್ಯಾಂಕ್‌ ಹೊಂದಿದೆ. ಜಿಲ್ಲೆಯ ಪ್ಯಾಕ್ಸ್‌ಗಳ ಮೂಲಕ ರೈತರಿಗೆ 705.21 ಕೋಟಿ ಸಾಲ ನೀಡಲಾಗಿದೆ. ಸಣ್ಣ ಮತ್ತು ಅತಿಸಣ್ಣ ರೈತರಿಗೆ ಅಲ್ಪಾವಧಿ ಬೆಳೆ ಸಾಲ 423.13 ಕೋಟಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ 84.62 ಕೋಟಿ ಅಲ್ಪಾವಧಿ ಬೆಳೆ ಸಾಲ ನೀಡಲಾಗಿದೆ. ಮಧ್ಯಮ ಮತ್ತು ದೊಡ್ಡ ರೈತರಿಗೆ 227.90 ಕೋಟಿ ಅಲ್ಪಾವಧಿ ಬೆಳೆ ಸಾಲ ವಿತರಣೆ ಮಾಡಲಾಗಿದೆ.

ಮಧ್ಯಮಾವಧಿ ಕೃಷಿ ಸಾಲ 34.70 ಕೋಟಿ ಹಾಗೂ ಮಧ್ಯಮಾವಧಿ ಕೃಷಿ ಸಾಲದ ಪೈಕಿ ಪಂ. ಜಾ, ಪ.ಪಂ. ರೈತರಿಗೆ 3.49 ಕೋಟಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ 10 ಹೊಸ ಶಾಖೆಗಳನ್ನು ತೆರೆಯಲು ಆರ್‌ಬಿಐಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆ ಅನುಷ್ಠಾನದಲ್ಲಿ ದೇಶದಲ್ಲೇ ಪ್ರಥಮ ಸ್ಥಾನ ಗಳಿಸಿದ ಹಿನ್ನೆಲೆಯಲ್ಲಿ ನಬಾರ್ಡ್‌ನಿಂದ ರಾಜ್ಯ ಹಾಗೂ ರಾಷ್ಟ್ರ ಮಟ್ಟದ 9 ಪ್ರಶಸ್ತಿಗಳನ್ನು ಬ್ಯಾಂಕ್‌ ಪಡೆದುಕೊಂಡಿದೆ. ರಾಷ್ಟ್ರೀಕೃತ
ಬ್ಯಾಂಕ್‌ಗಳ ಜೊತೆಯಲ್ಲೇ ಡಿಸಿಸಿ ಬ್ಯಾಂಕ್‌ ಇಷ್ಟೊಂದು ಪ್ರಶಸ್ತಿ ಗಳಿಸಿರುವುದು ಬ್ಯಾಂಕ್‌ ಪ್ರಗತಿಯ ಸಂಕೇತವಾಗಿದೆ ಎಂದು ಸಂತಸ ಹಂಚಿಕೊಂಡರು.

ಜಿಲ್ಲೆಯ ಮೂರು ಸಹಕಾರ ಸಕ್ಕರೆ ಕಾರ್ಖಾನೆಗಳು ಬ್ಯಾಂಕ್‌ನಿಂದ ಸಾಲ ಪಡೆದಿದ್ದು, ಈ ಪೈಕಿ ಬಿಎಸ್‌ಎಸ್‌ಕೆ ಕಬ್ಬು ಅರೆಯುವಿಕೆ ನಿಲ್ಲಿಸಿದ್ದರಿಂದ ಬ್ಯಾಂಕ್‌ನ ಎನ್‌ಪಿಎ ಶೇಕಡಾವಾರು ಪ್ರಮಾಣದಲ್ಲಿ ಹೆಚ್ಚಳವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯು 300 ಕೋಟಿ ರೂ. ಬಾಕಿ ಉಳಿಸಿಕೊಂಡಿದ್ದರೆ ಮಹಾತ್ಮ ಗಾಂಧಿ ಸಹಕಾರ ಸಕ್ಕರೆ ಕಾರ್ಖಾನೆ 122.96 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ ಎಂದು ವಿವರಿಸಿದರು.

ನಿಯಮ ಉಲ್ಲಂಘಿಸಿ ಸಾಲ: ಬೀದರ ಸಹಕಾರ ಸಕ್ಕರೆ ಕಾರ್ಖಾನೆ ಸೇರಿದಂತೆ ಇತರೆ ಸಕ್ಕರೆ ಕಾರ್ಖಾನೆಗಳಿಗೆ ಬ್ಯಾಂಕ್‌ ನಿಯಮಗಳನ್ನು ಉಲ್ಲಂಘನೆ ಮಾಡಿ ಸಾಲ ನೀಡಲಾಗಿದೆ ಎಂಬ ಆರೋಪ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಬ್ಯಾಂಕ್‌ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ, ಜಿಲ್ಲೆಯ ರೈತರ ಹಿತ ದೃಷ್ಟಿಯಿಂದ ಕಾರ್ಖಾನೆಗಳಿಗೆ ಸಾಲ ನೀಡಲಾಗಿದೆ. ಸೂಕ್ತ ಸಮಯಕ್ಕೆ ಸಾಲ ನೀಡದಿದ್ದರೆ ಜಿಲ್ಲೆಯ ರೈತರು ಸಮಸ್ಯೆ ಎದುರಿಸಬೇಕಾದ ಸ್ಥಿತಿ ಇತ್ತು ಎಂದು ವಿವರಿಸಿದರು. ಜಿಲ್ಲೆಯ ವಿವಿಧೆಡೆ ರೈತರು ಅಲ್ಲದ ಹಾಗೂ ಕೃಷಿ ಭೂಮಿ ಹೊಂದಿರದವರಿಗೆ ಕೆಸಿಸಿ ಸಾಲ ನೀಡಲಾಗಿದೆ ಎಂಬ ಆರೋಪದ ಪ್ರಶ್ನೆಗೆ ಉತ್ತರಿಸಿದ ಅವರು, ಬ್ಯಾಂಕ್‌ಗಳು ಪತ್ತಿನ ಸಹಕಾರ ಸಂಘಗಳಿಗೆ ಸಾಲದ ಹಣ ಪಾವತಿ ಮಾಡುತ್ತವೆ. ಅಲ್ಲಿ ಯಾವುದೇ ಅಕ್ರಮಗಳು ನಡೆದರೂ ಮೊದಲಿಗೆ ಅವರೇ ಹೊಣೆಗಾರರು. 

ಈ ಕುರಿತು ಸೂಕ್ತ ಪರಿಶೀಲನೆ ನಡೆಸಿ ಅರ್ಹ ರೈತರಿಗೆ ಸಾಲ ದೊರೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.