ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳಿಸುವುದೇ ಧ್ಯೇಯ


Team Udayavani, Feb 17, 2019, 9:26 AM IST

bid-2.jpg

ಬೀದರ: ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಪ್ರತಿ ವರ್ಷ 40 ಜನರಿಗೆ ಉಚಿತ ಪ್ರವೇಶ ಒದಗಿಸಲಾಗುತ್ತಿದೆ ಎಂದು ಮಾತೆ ಮಾಣಿಕೇಶ್ವರಿ ಕಾಲೇಜು ಅಧ್ಯಕ್ಷ ರಮೇಶ ಕುಲಕರ್ಣಿ ಹೇಳಿದರು.

ನಗರದ ಮಾತೆ ಮಾಣಿಕೇಶ್ವರಿ ಪದವಿಪೂರ್ವ ವಿಜ್ಞಾನ ಕಾಲೇಜಿನಲ್ಲಿ ಶನಿವಾರ ನಡೆದ ದ್ವಿತೀಯ ಪಿಯು, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ರಸಮಂಜರಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ವರೆಗೆ ಸಂಸ್ಥೆಯಿಂದ ಸುಮಾರು 400 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲಾಗಿದೆ. ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳಿಸುವುದೇ ಕಾಲೇಜಿನ ಮುಖ್ಯ ಧ್ಯೇಯವಾಗಿದೆ.

ಕಾಲೇಜಿನಲ್ಲಿ ಗುಣಮಟ್ಟದ ಸ್ಪರ್ಧಾತ್ಮಕ ಶಿಕ್ಷಣದ ಜತೆಗೆ ವಿದ್ಯಾರ್ಥಿಗಳಿಗೆ ಭಾರತೀಯ ಸಂಸ್ಕೃತಿಯನ್ನೂ ಹೇಳಿಕೊಡಲಾಗುತ್ತಿದೆ. ಕಾಲೇಜಿನಲ್ಲಿ ಓದಿದ ನೂರಾರು ವಿದ್ಯಾರ್ಥಿಗಳು ಭಾರತೀಯ ಆಡಳಿತಾತ್ಮಕ ಸೇವೆ, ವೈದ್ಯ, ಎಂಜಿನಿಯರ್‌ ಸೇರಿದಂತೆ ವಿವಿಧ ಉನ್ನತ ಹುದ್ದೆಗಳಲ್ಲಿ ಇದ್ದಾರೆ ಎಂದು ಹೇಳಿದರು. 

ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಅಧ್ಯಕ್ಷ ಬಸವಕುಮಾರ ಪಾಟೀಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜೀವನದಲ್ಲಿ ಏನನ್ನಾದರೂ ಸಾಧಿಸಬೇಕು ಎನ್ನುವ ಹಂಬಲ ವಿದ್ಯಾರ್ಥಿಗಳಲ್ಲಿ ಇದ್ದರೆ ಸಾಧನೆ ಸಾಧ್ಯವಾಗುತ್ತದೆ. ಮಾತೆ ಮಾಣಿಕೇಶ್ವರಿ ಕಾಲೇಜು ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ತನ್ನದೇ ಆದ ಕೊಡುಗೆ ನೀಡುತ್ತಿದೆ. ವಿದ್ಯಾರ್ಥಿಗಳು ಧನಾತ್ಮಕ ಚಿಂತನೆ, ಆತ್ಮವಿಶ್ವಾಸ ಹಾಗೂ ಕಠಿಣ ಪರಿಶ್ರಮದಿಂದ ಅಂದುಕೊಂಡದ್ದನ್ನು ಸಾಧಿಸಬಹುದು. ಸಾಧನೆಯ ಮಾರ್ಗದಲ್ಲಿ ಅಡ್ಡಿ ಆತಂಕಗಳು ಬರುವುದು ಸಹಜ. ಅವುಗಳನ್ನು ಸಮರ್ಥವಾಗಿ ಮೆಟ್ಟಿ ನಿಲ್ಲಬೇಕು. ಗುರಿ ಮುಟ್ಟುವವರೆಗೂ ವಿರಮಿಸಬಾರದು ಎಂದರು. 

ದ್ವಿತೀಯ ಪಿಯುಸಿ ಪರೀಕ್ಷೆ ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟವಾಗಿದೆ. ಯೋಜನಾ ಬದ್ಧವಾಗಿ ವ್ಯಾಸಂಗ ಮಾಡಿದರೆ ಪರೀಕ್ಷೆಯಲ್ಲಿ ಅಧಿಕ ಅಂಕ ಗಳಿಸಬಹುದು ಎಂದು ಹೇಳಿದರು. ಖ್ಯಾತ ಹಾಸ್ಯ ಕಲಾವಿದ ವೈಜಿನಾಥ ಸಜ್ಜನಶೆಟ್ಟಿ ಹಾಸ್ಯ ಚಟಾಕಿಗಳನ್ನು ಹಾರಿಸಿ ಎಲ್ಲರನ್ನು ನಗೆಗಡಲಲ್ಲಿ ತೇಲಿಸಿದರು. ಸಂಗೀತ ಕಲಾವಿದ ಸಂಜುಕುಮಾರ ಸ್ವಾಮಿ ಹಾಗೂ ಅಂಗಡಿಗರು ಗಾಯನ ಪ್ರಸ್ತುತಪಡಿಸಿ ಮನ ರಂಜಿಸಿದರು.

ಮಾತೆ ಮಾಣಿಕೇಶ್ವರಿ ಕಾಲೇಜು ಪ್ರಾಚಾರ್ಯ ಸುರೇಶ ಕುಲಕರ್ಣಿ, ಐಇಎಸ್‌ ಅಧಿಕಾರಿ ಅನಿಲ ರಾಠೊಡ್‌, ನಾಗೇಶ ಪ್ರಭಾ, ವಿದ್ಯಾನಿ ಪ್ರೌಢಶಾಲೆಯ ಕಾರ್ಯದರ್ಶಿ ಗಣಪತಿ ಸೋಲಪೂರೆ, ರವೀಂದ್ರ ಪ್ರೌಢಶಾಲೆಯ ಅಧ್ಯಕ್ಷೆ ಪಿ. ಸ್ವರ್ಣಾ ಉಡುಪ, ಲಕ್ಷ್ಮೀಬಾಯಿ ಕಮಠಾಣೆ ಪ್ರೌಢಶಾಲೆ ಮುಖ್ಯ ಶಿಕ್ಷಕ ಪ್ರಕಾಶ ಲಕ್ಕಶೆಟ್ಟಿ, ಜೀಜಾಮಾತಾ ಪ್ರೌಢಶಾಲೆ ಮುಖ್ಯ ಶಿಕ್ಷಕ ಪರಮೇಶ್ವರ ಬಿರಾದಾರ, ಇಂದಿರಾಬಾಯಿ ಗುರುತಪ್ಪ ಶೆಟಕಾರ ಪೌಢಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮಣ ಪೂಜಾರಿ, ದಿ| ಮಿಲೇನಿಯಂ ಪ್ರೌಢಶಾಲೆಯ ಶಿವಕುಮಾರ ಬಿರಾದಾರ, ಗಂಗೋತ್ರಿ ಪ್ರೌಢಶಾಲೆಯ ಶಿಕ್ಷಕ ಷಣ್ಮುಖಯ್ಯ ಹಿರೇಮಠ, ಉದಯಕುಮಾರ ಬಿರಾದಾರ, ಅರುಣೋದಯ ಪ್ರೌಢಶಾಲೆಯ ನಿರ್ದೇಶಕ ಸಂತೋಷ ಮಂಗಳೂರೆ, ಆರತಿ ಆರ್‌. ಕುಲಕರ್ಣಿ, ವೈಶಾಲಿ ಎಸ್‌. ಕುಲಕರ್ಣಿ ಉಪಸ್ಥಿತರಿದ್ದರು. ಕಾಲೇಜು ಆಡಳಿತಾಧಿಕಾರಿ ಲೋಕೇಶ ಉಡಬಾಳೆ ನಿರೂಪಿಸಿದರು. ಸಂದೇಶ ಕುಲಕರ್ಣಿ ವಂದಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.