ಕಂದಾಯ ವಸೂಲಾತಿ ಚುರುಕುಗೊಳಿಸಲು ಸೂಚನೆ

Team Udayavani, Feb 19, 2019, 9:40 AM IST

bid-2.jpg

ಕಲಬುರಗಿ: ಜೆಸ್ಕಾಂ ವ್ಯಾಪ್ತಿಯ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಪಂನಿಂದ ನಿಗಮಕ್ಕೆ ಬರಬೇಕಾಗಿರುವ ಬೀದಿ ದೀಪ, ಕುಡಿಯುವ ನೀರು ಸರಬರಾಜು ನಿರ್ವಹಣೆ ಬಾಕಿ ವಿದ್ಯುತ್‌ ಕರ ಪಾವತಿಯಾಗುವಂತೆ ಕಂದಾಯ ವಸೂಲಾತಿ ಕಾರ್ಯ ಚುರುಕುಗೊಳಿಸುವಂತೆ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಡಾ| ಆರ್‌. ರಾಗಪ್ರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜೆಸ್ಕಾಂ ಕಚೇರಿಯಲ್ಲಿ ನಿಗಮ ವ್ಯಾಪ್ತಿಯ ಎಲ್ಲ ಜಿಲ್ಲೆಯ ಅಧಿಕಾರಿಗಳೊಂದಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ವಿದ್ಯುತ್‌ ಯೋಜನೆಗಳ ಕಾಮಗಾರಿ ಹಾಗೂ ಕಂದಾಯ ವಸೂಲಾತಿ ಕುರಿತಂತೆ ಕಲಬುರಗಿ, ಬೀದರ, ಯಾದಗಿರಿ, ರಾಯಚೂರು, ಬಳ್ಳಾರಿ ಮತ್ತು
ಕೊಪ್ಪಳ ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ವಿದ್ಯುತ್‌ ಬೇಬಾಕಿ ಪಾವತಿಯಾಗುವಂತೆ ಆಯಾ ವಿಭಾಗದ ಕಾರ್ಯನಿವಾಹಕ ಅಭಿಯಂತರರು ಹೆಚ್ಚಿನ ಮುತುವರ್ಜಿ ವಹಿಸುವ ಮೂಲಕ ನಿಗಮದ ಆರ್ಥಿಕ ಸ್ಥಿತಿ ಸುಧಾರಣೆಗೆ ಪ್ರಯತ್ನಿಸಬೇಕು ಎಂದು ಹೇಳಿದರು.

ಗ್ರಾಮೀಣ ಭಾಗದಲ್ಲಿ ನಿರಂತರ ವಿದ್ಯುತ್‌ ಪೂರೈಕೆ ಕಲ್ಪಿಸುವ ದೀನ್‌ ದಯಾಳ್‌ ಉಪಾದ್ಯಾಯ ಗ್ರಾಮೀಣ ಜ್ಯೋತಿ ಯೋಜನೆ ಹಾಗೂ ಸಮಗ್ರ ಇಂಧನ ಅಭಿವೃದ್ಧಿ ಯೋಜನೆ ಪ್ರಗತಿ ಪರಿಶೀಲನೆ ವೇಳೆಯಲ್ಲಿ ಬಹುತೇಕ ಜಿಲ್ಲೆಗಳಲ್ಲಿ 11.ಕೆವಿ ರಿಕಂಡಕ್ಟಿಂಗ್‌ ಮತ್ತು 11.ಕೆವಿ ಲೈನ್‌(ರ್ಯಾಬಿಟ್‌) ವಿದ್ಯುತ್‌ ಲೈನ್‌ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿ ನಿಗ ದಿತ ಅವಧಿಯಲ್ಲಿ ವಿದ್ಯುತ್‌ ಕಾಮಗಾರಿ ಮುಗಿಸಬೇಕು. ಇದಕ್ಕಾಗಿ ಹೆಚ್ಚಿನ ಕಾರ್ಮಿಕರನ್ನು ನಿಯೋಜಿಸಿ ಫೆಬ್ರವರಿ ಅಂತ್ಯದೊಳಗೆ 100-200 ಕಿಮೀ ವರೆಗೆ ವಿದ್ಯುತ್‌ ಲೈನ್‌ ಅಳವಡಿಸುವ ಕಾಮಗಾರಿಯಲ್ಲಿ ಪ್ರಗತಿ ಸಾಧಿಸಬೇಕು. ಆರ್ಥಿಕ ವರ್ಷಾಂತ್ಯಕ್ಕೆ ಎಲ್ಲ ಕಾಮಗಾರಿಗಳು ಪೂರ್ಣಗೊಳಿಸುವ ಮೂಲಕ ಯಾವುದೇ ಹಣ ಲ್ಯಾಪ್ಸ್‌ ಆಗದಂತೆ ನೋಡಿಕೊಳ್ಳಿ ಎಂದು ಸೂಚಿಸಿದರು.

ಜಿಲ್ಲೆಗಳಲ್ಲಿ ವಿದ್ಯುತ್‌ ಲೈನ್‌ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಯಾವುದೇ ವಿಸ್ತರಣಾ ಕಾಮಗಾರಿ ಅಥವಾ ಹೆಚ್ಚುವರಿ ಕಾಮಗಾರಿ ಕೈಗೊಳ್ಳಬೇಕಾದಲ್ಲಿ ನಿಗಮಕ್ಕೆ ಮಾಹಿತಿ ಸಲ್ಲಿಸಿ ಅನುಮೋದನೆ ಪಡೆಯಬೇಕು. ಎನ್‌ಆರ್‌ ಡಿಡಬ್ಲೂಎಸ್‌ ಯೋಜನೆಯಡಿ ಕೈಗೊಂಡ ಮೂಲಸೌಕರ್ಯ ಕಾಮಗಾರಿಗಳ ಬಿಲ್‌ ಪಾವತಿಗೆ ಬಾಕಿಯಿದ್ದಲ್ಲಿ ನಿಗಮಕ್ಕೆ ಮಾಹಿತಿ ಸಲ್ಲಿಸಿ ಎಂದು ಹೇಳಿದರು.

ನಿಗಮದ ತಾಂತ್ರಿಕ ನಿರ್ದೇಶಕ ಅನಿಲ ಕುಮಾರ ಬಬಲೇಶ್ವರ, ಮುಖ್ಯ ಆರ್ಥಿಕ ಅಧಿಕಾರಿ ಅಬ್ದುಲ್‌ ವಾಜೀದ್‌ ಸೇರಿದಂತೆ ಜೆಸ್ಕಾಂನ ಎಲ್ಲ ಜಿಲ್ಲೆಗಳ ಅಧೀಕ್ಷಕ ಇಂಜಿನಿಯರರು(ವಿ), ಕಾರ್ಯನಿರ್ವಾಹಕ ಇಂಜಿನಿಯರ್‌ (ವಿ) ಹಾಗೂ ಇತರೆ ಅಧಿಕಾರಿಗಳು ಸಭೆಯಲ್ಲಿದ್ದರು.

ಟಾಪ್ ನ್ಯೂಸ್

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.