ಸಾರಿಗೆ ಸಂಸ್ಥೆಗೆ ಲಾಭಕ್ಕಿಂತ ಜನ ಸೇವೆ ಮುಖ್ಯ


Team Udayavani, Mar 11, 2019, 6:36 AM IST

bid-1.jpg

ಬೀದರ: ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಉನ್ನತ ವ್ಯಾಸಂಗಕ್ಕಾಗಿ ಎಲ್ಲಾ ಗ್ರಾಮಗಳ ವಿದ್ಯಾರ್ಥಿಗಳು ನಗರಕ್ಕೆ ಆಗಮಿಸತ್ತಾರೆ. ಹಾಗಾಗಿ ಎಲ್ಲಾ ಹಳ್ಳಿಗಳ ವಿದ್ಯಾರ್ಥಿಗಳಿಗೆ ಪಾಸ್‌ಗಳನ್ನು ಅಚ್ಚುಕಟ್ಟಾಗಿ ನೀಡುವ ವ್ಯವಸ್ಥೆಯಾಗಬೇಕು ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ ಹೇಳಿದರು.

ನಗರದ ಹಳೆ ಬಸ್‌ ನಿಲ್ದಾಣದ ಆವರಣದಲ್ಲಿ ನಿರ್ಮಿಸಲಾದ ನೂತನ ನಗರ ಸಾರಿಗೆ ಬಸ್‌ ನಿಲ್ದಾಣ ಹಾಗೂ ಕೆಎಸ್‌ಆರ್‌ಟಿಸಿ ವಿಭಾಗೀಯ ಕಚೇರಿ ಕಟ್ಟಡವನ್ನು ರವಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ದೂರದ ಊರುಗಳಿಗೆ ಹೋಗುವ ವಿದ್ಯಾರ್ಥಿಗಳು ಸಮಯಕ್ಕೆ ಬಸ್‌ಗಳು ಸಿಗದೇ ಪರದಾಡುವಂತೆ ಆಗಬಾರದು. ಕೆಲವು ಬಸ್‌ನಿಲ್ದಾಣಗಳಿಗೆ ವಿಶೇಷ ಅಧಿಕಾರಿಗಳನ್ನು ನೇಮಿಸಿ ಪ್ರಯಾಣಿಕರ ಸಮಸ್ಯೆಗಳನ್ನು ತಿಳಿದುಕೊಂಡು ಕೂಡಲೇ ಸಮಸ್ಯೆ ಇತ್ಯರ್ಥಪಡಿಸಲು ಅಧಿಕಾರಿಗಳು ಮುಂದಾಗಬೇಕು. ಸಾರಿಗೆ ಇಲಾಖೆಯು ಅತ್ಯಂತ ಜವಾಬ್ದಾರಿಯುತ ಇಲಾಖೆಯಾಗಿದ್ದು,  ಲಾಭಕ್ಕಿಂತ ಜನರ ಸೇವೆಗೆ ಹೆಚ್ಚು ಮಹತ್ವ ನೀಡುತ್ತಿದ್ದು, ಇಲಾಖೆಯು ಇನ್ನಷ್ಟು ಜನಸ್ನೇಹಿಯಾಗಿ ಕೆಲಸ ಮಾಡಬೇಕು. ಎಷ್ಟು ಲಾಭವಾಗಿದೆ ಎನ್ನುವುದಕ್ಕಿಂತ ಎಷ್ಟು ಸೇವೆ ನೀಡಲಾಗಿದೆ ಎನ್ನುವುದು ಮುಖ್ಯವಾಗಬೇಕು ಎಂದರು. 

ಬೀದರ ಪಾರಂಪರಿಕ ನಗವಾಗಿದ್ದು, ನಾನಾ ಭಾಗಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಬೀದರ ಉತ್ಸದಂತಹ ಸಂದರ್ಭಗಳಲ್ಲಿ ಪ್ರವಾಸಿಗರಿಗೆ ಅನುಕೂಲವಾಗುವ ರೀತಿಯಲ್ಲಿ ವಿಶೇಷ ಬಸ್‌ಗಳನ್ನು ಒದಗಿಸುವ ಚಿಂತನೆ ನಡೆದಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಬೇಕಾಗುವ ಎಲ್ಲಾ ಮೂಲ ಸೌಕರ್ಯಗಳನ್ನು ಒದಗಿಸಲಾಗುವುದು. ಇಲಾಖೆಯ ಅಧಿಕಾರಿಗಳು ಸಲ್ಲಿಸಿದ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದರು. ಕೇರಳ ಮಾದರಿಯಲ್ಲಿ ಋಣ ಮುಕ್ತ ಆಯೋಗವನ್ನು ರಚಿಸುವ ಬಗ್ಗೆ ಇತ್ತೀಚೆಗೆ ಕೇರಳ
ರಾಜ್ಯಕ್ಕೆ ಭೇಟಿ ನೀಡಿ ಅಲ್ಲಿನ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಚಾಲನೆ ನೀಡುವ ಕಾರ್ಯ ನಡೆದಿದೆ ಎಂದು ಹೇಳಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ರಹೀಂ ಖಾನ್‌ ಮಾತನಾಡಿ, ಬೀದರ ಜಿಲ್ಲೆಯ ರಸ್ತೆಗಳು ಹಿಂದೆಂದಿಗಿಂತ ಹೆಚ್ಚು ಸುಧಾರಣೆ ಕಂಡಿವೆ. ಸಾಕಷ್ಟು ಹೊಸ ಬಸ್‌ಗಳು ಓಡಾಡುತ್ತಿವೆ. ಬಸ್‌ ನಿಲ್ದಾಣಗಳಲ್ಲಿಯೂ ಸಾಕಷ್ಟು ಬದಲಾವಣೆಗಳಾಗಿವೆ. ಇಲಾಖೆಯು ಇನ್ನಷ್ಟು ಜನಸ್ನೇಹಿಯಾಗಿ ಕೆಲಸ ಮಾಡಬೇಕು ಎಂದರು.

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೀದರ ವಿಭಾಗೀಯ ನಿಯಂತ್ರಣಾಧಿಕಾರಿ ಡಿ.ಕೋಟ್ರಪ್ಪ ಪ್ರಾಸ್ತಾವಿಕ ಮಾತನಾಡಿ, ಬೀದರ ವಿಭಾಗ ವ್ಯಾಪ್ತಿಯಲ್ಲಿ 550 ವಾಹನಗಳು ಓಡಾಡುತ್ತಿವೆ. 1,40,000 ಜನರು ಪ್ರತಿದಿನ ಸಂಚರಿಸುತ್ತಿದ್ದಾರೆ. ವಿಭಾಗದಿಂದ 50,000 ವಿದ್ಯಾರ್ಥಿಗಳಿಗೆ ಬಸ್‌ಪಾಸ್‌ಗಳನ್ನು ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಭಾರತಬಾಯಿ ಶೇರಿಕಾರ, ಸಂಸದ ಭಗವಂತ ಖೂಬಾ, ನಗರಸಭೆ ಅಧ್ಯಕ್ಷೆ ಶಾಲಿನಿರಾಜು ಚಿಂತಾಮಣಿ, ಜಿಲ್ಲಾ ಪಂಚಾಯತ್‌ ಉಪಾಧ್ಯಕ್ಷ ಡಾ| ಪ್ರಕಾಶ ಪಾಟೀಲ, ಕಲಬುರಗಿ ಮುಖ್ಯ ಸಂಚಾರ ವ್ಯವಸ್ಥಾಪಕ ಸಂತೋಷಕುಮಾರ, ಇಲಾಖೆಯ ಮುಖ್ಯ ಕಾರ್ಮಿಕ ಕಲ್ಯಾಣ ಅಧಿಕಾರಿ ಸುನೀಲಕುಮಾರ ಚಂದರಗಿ, ಆಡಳಿತಾಧಿಕಾರಿ ಮಹಾದೇವಪ್ಪ ಉಪ್ಪಿನ್‌, ಇಇ ಮೆಹಬೂಬ್‌ಸಾಬ್‌, ಸಾರಿಗೆ ಇಲಾಖೆಯ ವಿಭಾಗೀಯ ನಿಯಂತ್ರಣಾಧಿಕಾರಿಯ ಆಪ್ತ ಕಾರ್ಯದರ್ಶಿ ಪ್ರಭುಲಿಂಗಸ್ವಾಮಿ ಹಾಗೂ ಸಾರಿಗೆ ಇಲಾಖೆಯ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು. ಅಂಚೆ ಇಲಾಖೆಯ ಅಧಿಕಾರಿ ಮಂಗಲಾ ಭಾಗವತ್‌ ನಿರೂಪಿಸಿದರು. ವಿಭಾಗೀಯ ಸಂಚಾರ ಅಧಿಕಾರಿ ಚಂದ್ರಕಾಂತ ಫುಲೇಕರ್‌ ವಂದಿಸಿದರು.

ಟಾಪ್ ನ್ಯೂಸ್

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.