ಕಡಿಮೆ ಶುಲ್ಕ ಪಡೆದು ಗುಣಾತ್ಮಕ ಶಿಕ್ಷಣ ನೀಡಿ: ಔರಾದಕರ್‌

Team Udayavani, Mar 11, 2019, 6:52 AM IST

bid-2.jpg

ಹುಮನಾಬಾದ: ಯಶಸ್ಸು ಸಮಯ ಪ್ರಜ್ಞೆ ಉಳ್ಳವರು ಸ್ವತ್ತು. ಈವರೆಗೆ ಶಿಕ್ಷಣ ಕ್ಷೇತ್ರದಲ್ಲಿ ಶ್ರದ್ಧೆಯಿಂದ ಉನ್ನತ ಹುದ್ದೆ, ಸ್ಥಾನಮಾನ ಗಿಟ್ಟಿಸಿಕೊಂಡವರಲ್ಲಿ ಬಡವರೇ ಹೆಚ್ಚು. ಶ್ರೀಮಂತರು ಸಿಗುವುದು ವಿರಳ ಎಂದು ಎಡಿಜಿಪಿ ರಾಘವೇಂದ್ರ ಔರಾದಕರ್‌ ಹೇಳಿದರು.

ಬೋರಾಳ ಗ್ರಾಮದ ಆರ್‌ಆರ್‌ಆರ್‌ ಶಿಕ್ಷಣ ಸಂಸ್ಥೆಯ ಶೆಮಫರ್ಡ್‌ ಪಬ್ಲಿಕ್‌ಶಾಲೆ, ಗುರುಪಾದೇಶ್ವರ ಪ್ರಾಥಮಿಕ ಮತ್ತು ಪ್ರೌಢಶಾಲೆ ಮತ್ತು ಎಸ್‌.ಆರ್‌. ಪದವಿಪೂರ್ವ ಕಾಲೇಜಿನ 3ನೇ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಸ್ವಾಭಿಮಾನ, ಸಮಯ ಪ್ರಜ್ಞೆ, ನಿರಂತರ ಪರಿಶ್ರಮ ಉಳ್ಳಂತಹ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಂದ ಈ ಭಾಗದ ಶಿಕ್ಷಣ ಸಂಸ್ಥೆಗಳು ಕಡಿಮೆ ಶುಲ್ಕ ಪಡೆದು ಗುಣಾತ್ಮಕ ಶಿಕ್ಷಣ ನೀಡುವ ಮೂಲಕ ಉನ್ನತ ಸ್ಥಾನಮಾನ ಪಡೆದಯಲು ಅಗತ್ಯ ನೆರವಾಗಬೇಕು ಎಂದರು.

ಲಿಫ್ಟ್‌ನಲ್ಲಿ ಹೋದರೆ ಆರೋಗ್ಯ ಕೆಡುತ್ತದೆ. ಮೆಟ್ಟಿಲು ಹತ್ತಿದರೆ ಆರೋಗ್ಯ ಸುಧಾರಣೆ ಆಗುತ್ತದೆ ಎಂದು ಆರೋಗ್ಯದ ಗುಟ್ಟು
ಬಿಚ್ಚಿಟ್ಟರು.  ಸಂಸ್ಥೆಯ ಕಾರ್ಯದರ್ಶಿ, ಆರ್‌ಬಿಐ ನಿರ್ದೇಶಕ ಕಿರಣ ಪಾಂಡುರಂಗ ಮಾತನಾಡಿ, ಗುಣಾತ್ಮಕ ಶಿಕ್ಷಣ ನೀಡುವ ಉದ್ದೇಶದಿಂದ ಕೇರಳದ ನುರಿತ ಹಾಗೂ ಕ್ರಿಯಾಶೀಲ ಶಿಕ್ಷಕರನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ. ಇನ್ನೂ 18 ಶಿಕ್ಷಕಿಯರನ್ನು ಸಾಧ್ಯವಾದಷ್ಟು ಶೀಘ್ರ ನಿಯೋಜಿಸಿಕೊಳ್ಳುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಈ ಸಂಸ್ಥೆ ವಾಣಿಜ್ಯ ಉದ್ದೇಶದಿಂದ ತೆರೆಯದೇ ಸೇವಾ ಮನೋಭಾವನೆಯಿಂದ ಆರಂಭಿಸಿದ್ದು, ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಂದ ಅತ್ಯಲ್ಪ ಶುಲ್ಕ ಪಡೆದು ಗುಣಾತ್ಮಕ ಶಿಕ್ಷಣ ನೀಡಲಾಗುತ್ತಿದೆ ಎಂದರು. ಮಕ್ಕಳನ್ನು ಕೇವಲ ವೈದ್ಯ, ಎಂಜಿನಿಯರ್‌ ಆಗಿಸದೇ ಐಪಿಎಸ್‌, ಐಎಎಸ್‌ ಆಗಿಸಲು ಯತ್ನಿಸಬೇಕು ಎಂದರು. 

ಕಾರ್ಡಿಯಾಲಾಜಿಸ್ಟ್‌ ಡಾ| ವಿಜಯಕುಮಾರ ಕಲ್ಮಣಕರ್‌ ಮಾತನಾಡಿದರು. ಸಂಸ್ಥೆ ಅಧ್ಯಕ್ಷ ನಮ್ರತ ಕಿರಣ ಅಧ್ಯಕ್ಷತೆ ವಹಿಸಿದ್ದರು. ರಾಘವೇಂದ್ರ ಕಿರಣ, ತಿಪ್ಪಣ ಕಿರಣ, ಕೆಎಂಎಫ್‌ ನಿರ್ದೇಶಕ ಮಾರುತಿ ಖಾಶೆಂಪೂರ್‌, ಜೆಡಿಎಸ್‌ ಮುಖಂಡ ಸಂತೋಷ ರಾಸೂರ್‌, ಗ್ರಾಪಂ ಮಾಜಿ ಅಧ್ಯಕ್ಷ ಯೂಸುಫಮಿಯ್ನಾ ಜಮಾದಾರ್‌, ಸೈಯದ ತಾಜೋದ್ದಿನ್‌ ಹವಾಲ್ದಾರ್‌, ನಿವೃತ್ತ ಪೊಲೀಸ್‌ ಅಧಿಕಾರಿ ಹಣಮಂತಪ್ಪ, ಶಂಕರ್‌ ಪ್ರಿಯಾ, ಡಾ|ವಿ.ವಿ.ಪಾಟೀಲ, ಎಸ್‌.ಎಂ.ಜಾಗೀರ್ದಾರ ಹಾಗೂ ಅನೇಕರು ಉಪಸ್ಥಿತರಿದ್ದರು. ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ಪ್ರೇಕ್ಷಕರ ಮನಸೂರೆಗೊಳಿಸಿದವು.

ಟಾಪ್ ನ್ಯೂಸ್

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.