ಕರ್ತವ್ಯದಲ್ಲಿ ನಿರ್ಲಕ್ಷ್ಯತೋರಿದರೆ ಕ್ರಮ

Team Udayavani, Jun 25, 2018, 4:57 PM IST

vijayapura.jpg

ಬಸವನಬಾಗೇವಾಡಿ: ದೇವರಹಿಪ್ಪರಗಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಗ್ರಾಮಗಳಿಗೂ ಕುಡಿಯುವ ನೀರು, ವಿದ್ಯುತ್‌, ರಸ್ತೆ ಸೇರಿದಂತೆ ಅನೇಕ ಮೂಲಭೂತ ಸೌಲಭ್ಯಗಳ ಕೊರತೆಯಾಗದಂತೆ ಅಧಿಕಾರಿಗಳು ನಿಗಾವಹಿಸಬೇಕು ಎಂದು ದೇವರಹಿಪ್ಪರಗಿ ಮತಕ್ಷೇತ್ರದ ಶಾಸಕ ಸೋಮನಗೌಡ ಪಾಟೀಲ (ಸಾಸನೂರ) ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ಇಲಾಖೆ ಅಧಿಕಾರಿಗಳ ಪ್ರಗತಿ ವಿವರ ಪಡೆದುಕೊಂಡರು. ದೇವರಹಿಪ್ಪರಗಿ ಮತಕ್ಷೇತ್ರದ ಬಸವನಬಾಗೇವಾಡಿ ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳಿಗೆ ದೇವರಹಿಪ್ಪರಗಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಿಗೆ ಕುಡಿಯುವ ನೀರು, ವಿದ್ಯುತ್‌, ರಸ್ತೆ, ಶಿಕ್ಷಣ, ಆರೋಗ್ಯ ಸೇರಿದಂತೆ ಅನೇಕ ಮೂಲಭೂತ ಸೌಲಭ್ಯಗಳು ಸಮರ್ಪಕವಾಗಿ ಸಾರ್ವಜನಿಕರಿಗೆ ದೊರಕಿಸಿಕೊಡುವಲ್ಲಿ ಅಧಿಕಾರಿಗಳು ಜಾಗೃತವಾಗಿ ಕಾರ್ಯ ನಿರ್ವಹಿಸಬೇಕು. ಒಂದು ವೇಳೆ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದಲ್ಲಿ ಅಂತಹ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿ ಬಸವರಾಜ ಬೆಟಗೇರಿ ಮಾತನಾಡಿ, ದೇವರಹಿಪ್ಪರಗಿ ಮತಕ್ಷೇತ್ರದಲ್ಲಿ 120 ಅಂಗನವಾಡಿ ಕೇಂದ್ರಗಳಿವೆ. ಅದರಲ್ಲಿ 74 ಸ್ವಂತ ಕಟ್ಟಡ ಹೊಂದಿದ್ದು ಇನ್ನುಳಿದ ಅಂಗನವಾಡಿಗಳಿಗೆ ಜಾಗೆ ದೊರೆಯದ ಕಾರಣ ಖಾಸಗಿ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸಲಾಗುತ್ತದೆ ಎಂದು ಸಭೆಗೆ ವಿವರಿಸಿದರು.

ಆಗ ಕೆಲವು ಗ್ರಾಮಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಸರಕಾರದಿಂದ ಬಂದಿರುವಂತ ಅನೇಕ ಯೋಜನೆಗಳು ಬಡ ಮಕ್ಕಳಿಗೆ ದೊರಕುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ. ಆದ್ದರಿಂದ ನೀವು ಸರಿಯಾಗಿ ಕಾರ್ಯ ನಿರ್ವಹಿಸಿ ಎಂದು ಹೇಳಿದರು.ಯಾವ ಯಾವ ಗ್ರಾಮಗಳಲ್ಲಿ ಸ್ಥಳಾವಕಾಶದ ಕೊರತೆ ಇದೆ ಎಂದು ವಿವರಿಸಲು ಸೂಚಿಸಿದರು.

ಆಗ ಯಾಳವಾರ ಹಾಗೂ ಕುದರಿಸಾಲವಾಡಗಿಯಲ್ಲಿ ಜಾಗೆ ಇದ್ದರು ಅಲ್ಲಿಯ ಸ್ಥಳೀಯ ಕೆಲವರು ಕಟ್ಟಡ ಮಾಡಲಿಕ್ಕೆ
ವಿರೋಧ ಮಾಡುತ್ತಿದ್ದಾರೆ ಎಂದಾಗ ತಹಶೀಲ್ದಾರ್‌ ಸುಭಾಷ್‌ ಸಂಪಗಾವಿ ಅವರು ಪೊಲೀಸ್‌ ಭದ್ರತೆಯಲ್ಲಿ ಕಟ್ಟಡ ಕಾರ್ಯ ಆರಂಭಿಸಬಹುದಿತ್ತಲ್ಲ ಎಂದಾಗ ಅದಕ್ಕೆ ತಾಪಂ ಅಧಿಕಾರಿ ಸ್ಥಳೀಯರು ಗ್ರಾಪಂನವರೊಂದಿಗೆ ಕಿರಿ ಕಿರಿ ಮಾಡುತ್ತಾರೆ ಎಂದಾಗ ಶಾಸಕ ಸೋಮನಗೌಡರು ಅದನ್ನು ಸರಿಪಡಿಸುವ ಕಾರ್ಯ ಮಾಡುತ್ತೇನೆ ಎಂದರು. 

ಕೆಲವು ಗ್ರಾಮಗಳಲ್ಲಿ ಚಿಕೂನ್‌ಗುನ್ಯಾ ಹಾಗೂ ಡೆಂಘೀ ಜ್ವರ ಬರುವಂತಹ ಮುನ್ಸೂಚನೆಗಳು ಕಂಡು ಬರುತ್ತಿವೆ ಎಂದು ಕೆಲವು ಗ್ರಾಮಸ್ಥರು ತಿಳಿಸಿದ್ದಾರೆ. ಅದಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕ ಸೋಮನಗೌಡರು ತಾಲೂಕು ಆರೋಗ್ಯ ಅಧಿಕಾರಿ ಮಹೇಶ ನಾಗರಬೆಟ್ಟ ಅವರಿಗೆ ಸೂಚನೆ ನೀಡಿದಾಗ ತಕ್ಷಣವೇ ಅವರು ನಮ್ಮ ಸಿಬ್ಬಂದಿ ಕಾರ್ಯಪ್ರವೃತ್ತಿ ಕಾರ್ಯ ನಿರ್ವಹಣೆಯಲ್ಲಿ ತೊಡಗಿದ್ದಾರೆ ಎಂದರು.

ತಾಲೂಕಿನ ಅಕ್ಷರ ದಾಸೋಹದ ಯೋಜನೆಯಲ್ಲಿ ಶಾಲಾ ಮಕ್ಕಳಿಗೆ ಬಿಸಿಯೂಟಕ್ಕೆ ನೀಡುತ್ತಿರುವ ಆಹಾರ ಪದಾರ್ಥದಲ್ಲಿ ಕಳಪೆ ಮಟ್ಟದ ತೊಗರಿ ಬೆಳೆ ಸೇರಿದಂತೆ ಇನ್ನಿತರ ಪದಾರ್ಥಗಳು ಕಳಪೆ ಮಟ್ಟದ್ದು ಬರುತ್ತಿವೆ ಎಂದು ಶಾಲೆ ಮಕ್ಕಳಿಂದ ಮತ್ತು ಪಾಲಕರಿಂದ ತಿಳಿದು ಬರುತ್ತಿದೆ. ಆದರೆ ಅಧಿಕಾರಿಗಳು ನೀವೇನು ಮಾಡುತ್ತೀದ್ದಿರಿ ಎಂದು ಅಕ್ಷರ ದಾಸೋಹ ಅಧಿಕಾರಿ ಎಚ್‌.ಎಸ್‌. ಚಲವಾದಿ ಅವರಿಗೆ ಪ್ರಶ್ನಿಸಿದಾಗ ಇಲ್ಲ. ಸರ್‌ ಮುಂದೆ ಈ ರೀತಿ ಆಗದ ರೀತಿಯಲ್ಲಿ ನೋಡಿಕೊಳ್ಳುತ್ತೇವೆ ಎಂದು ಹೇಳಿದರು.

ಸಭೆಯಲ್ಲಿ ತಹಶೀಲ್ದಾರ್‌ ಸುಭಾಷ್‌ ಸಂಪಗಾವಿ, ತಾಪಂ ಅಧಿಕಾರಿ ಚಂದ್ರಶೇಖರ ಮ್ಯಾಗೇರಿ, ಜಿಪಂ ಸದಸ್ಯರಾದ ಸಂತೋಷ ನಾಯಕ, ಕಲ್ಲಪ್ಪ ಮಟ್ಟಿ ಸೇರಿದಂತೆ ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.